ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ
Team Udayavani, Jul 6, 2019, 11:18 AM IST
ಹಿರೇಕೆರೂರ: ತಹಶೀಲ್ದಾರ್ ಕಚೇರಿ ಸಭಾ ಭವನದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಹಿರೇಕೆರೂರ: ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಜತೆಗೆ ಅತ್ಯಂತ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗದಂತೆ ಕ್ರಮ ಕೈಗೊಳ್ಳಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ ಸಕಾಲದಲ್ಲಿ ಕೆಲಸ ನೀಡಬೇಕು. ವಸತಿ ರಹಿತರಿಗೆ ಸರ್ಕಾರದ ಯೋಜನೆಗಳಲ್ಲಿ ಅಗತ್ಯ ವಸತಿ ಸೌಲಭ್ಯ ಕಲ್ಪಿಸಬೇಕು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಲೀಲಾವತಿ, ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ತಹಶೀಲ್ದಾರ್ ಆರ್.ಎಚ್.ಭಾಗವಾನ್, ರಟ್ಟೀಹಳ್ಳಿ ತಹಶೀಲ್ದಾರ್ ಚಂದ್ರಶೇಖರ ಆರ್.ಜಿ., ತಾಪಂ ಇಒ ಸಂತೋಷಕುಮಾರ ತಳಕಲ್ ಸೇರಿದಂತೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ