ಪಾಳು ಬಿತ್ತು ಕುರಿ-ಮೇಕೆ ಮಾರುಕಟ್ಟೆ

ಎಪಿಎಂಸಿಯಿಂದ ನಿರ್ಮಿಸಿದ ಕಟ್ಟಡದಲ್ಲಿ ನಡೀತಿಲ್ಲ ವ್ಯಾಪಾರ

Team Udayavani, Oct 9, 2020, 6:01 PM IST

ಪಾಳು ಬಿತ್ತು ಕುರಿ-ಮೇಕೆ ಮಾರುಕಟ್ಟೆ

ಹಾವೇರಿ: ಕುರಿ, ಮೇಕೆ, ಆಡುಗಳಿಗೆ ವೈಜ್ಞಾನಿಕ ಬೆಲೆ ದೊರಕಿಸಿಕೊಡುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ನಿರ್ಮಿಸಿದ್ದ ಕಟ್ಟಡ ಸದ್ಬಳಕೆಯಾಗದೇ ಪಾಳು ಬಿದ್ದಿದ್ದು, ಇಲ್ಲಿ ವೈಜ್ಞಾನಿಕವಾಗಿ ವ್ಯಾಪಾರ ನಡೆಯದೇ ಕುರಿಗಾಹಿಗಳು ನಷ್ಟ ಅನುಭವಿಸುವಂತಾಗಿದೆ.

ನಗರದ ಶ್ರೀ ಶಿವಲಿಂಗೇಶ್ವರ ಜಾನುವಾರು ಮಾರುಕಟ್ಟೆಯ ಆವರಣದಲ್ಲಿ ಕುರಿ ಹಾಗೂ ಮೇಕೆ ಮಾರಾಟ ಅಭಿವೃದ್ಧಿಗಾಗಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಲಕ್ಷಾಂತರ ರೂ. ವೆಚ್ಚ ಮಾಡಿ ಸುಸಜ್ಜಿತ ಕಟ್ಟಡ ನಿರ್ಮಿಸಿದ್ದು, ಮಾರುಕಟ್ಟೆ ವ್ಯವಸ್ಥೆಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಒದಗಿಸಿತ್ತು. ಆದರೆ, ಇಲ್ಲಿಯವರೆಗೂ ಈ ಕಟ್ಟಡದಲ್ಲಿ ವೈಜ್ಞಾನಿಕವಾಗಿ ಕುರಿಗಳ ವ್ಯಾಪಾರ ನಡೆದಿಲ್ಲ. ಹೀಗಾಗಿ, ಲಕ್ಷಾಂತರರೂ. ವೆಚ್ಚ ಮಾಡಿ ನಿರ್ಮಿಸಿದ್ದ ಕಟ್ಟಡ ಈಗ ಅವಸಾನದ ಅಂಚಿಗೆ ತಲುಪಿದ್ದು, ಹಂದಿ, ನಾಯಿ, ಬಿಡಾಡಿ ದನಗಳ ವಾಸಸ್ಥಳವಾಗಿದೆ.

ಬೀದಿಯಲ್ಲೇ ವ್ಯಾಪಾರ: ಸ್ಥಳೀಯ ಜಾನುವಾರು ಮಾರುಕಟ್ಟೆಯ ಆವರಣದಲ್ಲಿಯೇ ಪ್ರತಿ ಗುರುವಾರ ಬೆಳಗ್ಗೆ ಕುರಿ, ಮೇಕೆಗಳ ವ್ಯಾಪಾರ ನಡೆಯುತ್ತಿದೆ. ಆದರೆ, ಈ ಕಟ್ಟಡ ಮಾತ್ರ ಸದ್ಬಳಕೆಯಾಗುತ್ತಿಲ್ಲ. ಕುರಿ, ಮೇಕೆಗಳ ಮಾರಾಟದ ಸಂದರ್ಭದಲ್ಲಿ ಕುರಿ, ಮೇಕೆಗಳ ನಡುವನ್ನು ಅಳತೆ ಮಾಡುವ ಪದ್ಧತಿಯಲ್ಲಿಯೇ ಆಧರಿಸಿ ವ್ಯಾಪಾರ ನಡೆಯುತ್ತಿದೆ. ಈ ಸಂದರ್ಭದಲ್ಲಿ ದಲ್ಲಾಳಿ ಹಾಗೂ ವ್ಯಾಪಾಸ್ಥರಿಂದ ಕುರಿ, ಮೇಕೆಗಳಿಗೆ ಸೂಕ್ತ ದರ ದೊರಕದೇ ಸಾಕಾಣಿಕೆದಾರರಿಗೆ ಮೋಸವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಾಣಿಕೆದಾರರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಕುರಿ, ಮೇಕೆಗಳನ್ನು ತೂಕ ಮಾಡಿ ಬೆಲೆ ನಿಗದಿಗೊಳಿಸುವ ಉದ್ದೇಶದಿಂದ ಲಕ್ಷಾಂತರ ರೂ. ವೆಚ್ಚ ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಆದರೆ, ಇಲ್ಲಿಯವರೆಗೂ ಈ ಕಟ್ಟಡದಲ್ಲಿ ತೂಕದ ರೀತಿಯಲ್ಲಿ ವ್ಯಾಪಾರ ನಡೆಸದೇ ಕಟ್ಟಡದ ಉದ್ದೇಶ ಸಾಕಾರಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದೆ.

ಕಟ್ಟಡ ಬಳಕೆಗೆ ನಿರ್ಲಕ್ಷ್ಯ: ಜಿಲ್ಲೆಯಲ್ಲಿ ಸಾಕಷ್ಟು ಕುರಿಗಾಹಿಗಳು ಕುರಿಗಳನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಕುರಿ, ಮೇಕೆಗೆ ಯೋಗ್ಯ ಬೆಲೆ ದೊರಕದೇ ಸಾಕಾಣಿಕೆದಾರರು ನಷ್ಟಅನುಭವಿಸುತ್ತಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸೂಕ್ತ ಕಟ್ಟಡ ನಿರ್ಮಿಸಿ ಕುರಿ ಮತ್ತುಉಣ್ಣೆ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರಿಸಲಾಗಿದ್ದು,”ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ’ ಎಂಬಂತಾಗಿದೆ. ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮಕಟ್ಟಡವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಇನ್ನುಮುಂದಾದರೂ ತೂಕದ ಲೆಕ್ಕದಲ್ಲಿ ಮಾರುಕಟ್ಟೆ ವ್ಯವಸ್ಥೆ ಜಾರಿಗೊಳಿಸಬೇಕು. ಈ ಮೂಲಕ ಕುರಿ, ಮೇಕೆ ಮಾರಾಟಕ್ಕೆ ಸೂಕ್ತ ಮಾರುಕಟ್ಟೆಗೆ ವೇದಿಕೆ ಕಲ್ಪಿಸಬೇಕು ಎಂಬುದು ಕುರಿಗಾಹಿಗಳ ಆಗ್ರಹವಾಗಿದೆ.

ವೈಜ್ಞಾನಿಕ ರೀತಿಯಲ್ಲಿ ಕುರಿ ಮಾರಾಟ ಮಾಡಿದರೆ ರೈತರಿಗೆ ಆಗುವ ನಷ್ಟ ತಪ್ಪಿಸಬೇಕು ಎಂಬ ಕಾರಣಕ್ಕೆಕುರಿ ಮಾರುಕಟ್ಟೆ ಕಟ್ಟಡ ಸ್ಥಾಪಿಸಲಾಗಿತ್ತು.ಈ ಕಟ್ಟಡ ನಿರ್ವಹಣೆ ಜವಾಬ್ದಾರಿಯನ್ನು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮಕ್ಕೆ ವಹಿಸಲಾಗಿದೆ. ಕುರಿಗಾಯಿಗಳಲ್ಲಿ ಇನ್ನೂ ಜಾಗೃತಿ ಮೂಡಿಲ್ಲ. ಮಧ್ಯವರ್ತಿಗಳು ಹೇಳಿದ್ದೇ ತೂಕ ಎಂಬಂತಾಗಿದೆ. ಮಲ್ಲಿಕಾರ್ಜುನ ಹಾವೇರಿ, ಎಪಿಎಂಸಿ ಅಧ್ಯಕ್ಷ

ಕುರಿ, ಮೇಕೆಗಳ ವ್ಯಾಪಾರಕ್ಕೆ ಸೂಕ್ತ ಮಾರುಕಟ್ಟೆ ಇಲ್ಲದೇ ನಷ್ಟ ಅನುಭವಿಸು ವಂತಾಗಿದೆ. ದಲ್ಲಾಳಿಗಳು, ವ್ಯಾಪಾರಸ್ಥರು ಬಾಯಿಗೆ ಬಂದಂತೆ ದರ ಕೇಳುತ್ತಾರೆ. ಮಾರುಕಟ್ಟೆಯಲ್ಲಿ ತೂಕದ ವ್ಯವಸ್ಥೆ ಕಲ್ಪಸಿದರೆ ಕುರಿ, ಮೇಕೆ ಸಾಕಾಣಿಕೆದಾರರಿಗೆ ಅನುಕೂಲವಾಗುತ್ತದೆ. –ಗುಡಪ್ಪ ಅಣ್ಣಿ, ಕುರಿ ಸಾಕಾಣಿಕೆದಾರ

 

ವೀರೇಶ ಮಡ್ಲೂರ

ಟಾಪ್ ನ್ಯೂಸ್

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

siddaramaiah

ಯಾವ ಸಾಧನೆಗೆ 100 ಕೋಟಿ ಲಸಿಕೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

hjgjgyjy

ಹಾವೇರಿ ಜಿಲ್ಲೆ ಉದಯಕ್ಕೆ ದಿ| ಉದಾಸಿ ಕಾರಣ : ಸಿಎಂ ಬಸವರಾಜ ಬೊಮ್ಮಾಯಿ

hjghjgjy

ಪ್ರಜ್ಞಾವಂತ ಮತದಾರರು ಬಿಜೆಪಿಯನ್ನೇ ಗೆಲ್ಲಿಸ್ತಾರೆ : ಸಚಿವ ಕೆ.ಸುಧಾಕರ

vgjghnfht

ಬಿಜೆಪಿ ಸರ್ಕಾರ ನಾಡಿಗೆ ಶಾಪ  : ಡಿಕೆಶಿ ವಾಗ್ಧಾಳಿ  

uiouioui

ಹಾನಗಲ್ ಉಪಚುನಾವಣೆ | ಬೊಮ್ಮಾಯಿ ಕೈ ಬಲಪಡಿಸಿ : ಸಂಸದ ಶಿವಕುಮಾರ ಉದಾಸಿ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

4

200 ಕೋಟಿ ವೆಚ್ಚದಲ್ಲಿ ಕಲಾಗ್ರಾಮ ಸ್ಥಾಪನೆ ಯೋಜನೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದ ಪ್ರಶಸ್ತಿ ಪ್ರದಾನ

ಟಿವಿಎಸ್‌ ಮೋಟಾರ್ಸ್‌ಗೆ ಗ್ರೀನ್‌ ಎನರ್ಜಿ ಅವಾರ್ಡ್‌

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

3

ಪ್ರಚಾರದ ಗೀಳಿನಿಂದ ರಾಹುಲ್‌ ಬಗ್ಗೆ ಕಟೀಲ್‌ ಹೇಳಿಕೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.