28ರಂದು ಲಿಂ| ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವ


Team Udayavani, Apr 26, 2019, 4:23 PM IST

hav-2

ಹಿರೇಕೆರೂರ: ತರಳಬಾಳು ಜಗದ್ಗುರು ಲಿಂ| ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 106ನೇ ಜಯಂತಿ ಮತ್ತು ಸಿಇಎಸ್‌ ವಿದ್ಯಾಸಂಸ್ಥೆಯ 68ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಸಮಾರಂಭವನ್ನು ಏ. 28 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಿರಿಗೆರೆ ತರಳಬಾಳು ವಿದ್ಯಾಸಂಸ್ಥೆಯ ಕೇಂದ್ರ ಸಮಿತಿ ಸದಸ್ಯ ಎಸ್‌.ಎಸ್‌. ಪಾಟೀಲ ಹೇಳಿದರು.

ಪಟ್ಟಣದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಇಲ್ಲಿನ ಸಿಇಎಸ್‌ ಸಂಸ್ಥೆ ಆವರಣದಲ್ಲಿನ ಡಾ| ಎಪಿಜೆ ಅಬ್ದುಲ್ ಕಲಾಂ ಸಭಾ ಭವನದಲ್ಲಿ ಸಾಧು ವೀರಶೈವ ಸಮಾಜ ಹಿರೇಕೆರೂರ-ರಟ್ಟೀಹಳ್ಳಿ ತಾಲೂಕು ಹಾಗೂ ಹಿರೇಕೆರೂರು ತಾಲೂಕು ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಆಶ್ರಯದಲ್ಲಿ ಏ. 28 ರಂದು ಬೆಳಗ್ಗೆ 11ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದರು.

ಸಿರಿಗೆರೆಯ ಲಿಂ| ಶಿವಕುಮಾರ ಸ್ವಾಮೀಜಿಯವರು ಈ ನಾಡು ಮೆಚ್ಚಿದ ನೇರ ನುಡಿಯ ಸ್ಪಷ್ಟ ಮಾತುಗಳ ದಿಟ್ಟ ಹೆಜ್ಜೆಯ ಗುರುಗಳು. ಹಳ್ಳಿಗಾಡುಗಳಲ್ಲಿ ನೆಲೆ ಕಳೆದುಕೊಂಡ ಬೇರುಗಳಿಗೆ ಶಿಕ್ಷಣದ ನೀರೆರೆದು ಬದುಕಿಸಿ, ಸುಡುವ ಬೆಂಗಾಡಿನಲ್ಲಿಯೂ ಸುಖದ ನಂದನವನವನ್ನು ನಿರ್ಮಿಸಿದವರು ಶ್ರೀಗಳು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನಕೂಲವಾಗುವಂತೆ ಶಿಕ್ಷಣ ಸಂಸ್ಥೆ, ಹಾಸ್ಟೆಲ್ಗಳನ್ನು ಸ್ಥಾಪಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡಿದ್ದಾರೆ ಎಂದರು. ಸದ್ಭಕ್ತರ ಹೃದಯ ಸಿಂಹಾಸನಾಧೀಶರಾದ ಅವರನ್ನು ನೆನೆಯುವುದೇ ಪುಣ್ಯದ ಕೆಲಸ. ಅವರ 106 ನೇ ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಸಮರ್ಪಿಸಲು ಭಕ್ತರಿಗೆ ಇದೊಂದು ಸದವಕಾಶ ಎಂದರು.

ಸಿಇಎಸ್‌ ಸಂಸ್ಥೆಯ ಅಧ್ಯಕ್ಷ ಎಸ್‌.ಬಿ.ತಿಪ್ಪಣ್ಣನವರ ಮಾತನಾಡಿ, ಹಿರೇಕೆರೂರು ತಾಲೂಕು ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಸ್ಥೆಯು 13 ವಿದ್ಯಾರ್ಥಿಗಳಿಂದ ಸ್ಥಾಪನೆಯಾಗಿ ಇಂದು ಈ ಸಂಸ್ಥೆ ಹೆಮ್ಮರವಾಗಿ ಬೆಳೆದು ನಿಂತಿದೆ. ಸಿಇಎಸ್‌ ವಿದ್ಯಾಸಂಸ್ಥೆಯು ಸೌಹಾರ್ದ ಶಿಕ್ಷಣ ಸಂಸ್ಥೆಯಾಗಿ ಪರಿವರ್ತನೆಗೊಂಡು 125 ಕೊಠಡಿಗಳ ಬೃಹತ್‌ ಕಟ್ಟಡಗಳು 10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡು ಈ ಭಾಗದ ಮಕ್ಕಳಿಗೆ ಶಿಕ್ಷಣದ ತವರಾಗಿ ತಲೆಯೆತ್ತಿ ನಿಂತಿದೆ. ಸ್ನಾತಕೋತ್ತರ ಅಧ್ಯಯನ ಕೇಂದ್ರಗಳು, ಯೋಗ ಮಹಾವಿದ್ಯಾಲಯಗಳನ್ನು ಹೊಂದಿರುವ ಈ ಸಂಸ್ಥೆಯು ಗ್ರಾಮೀಣ ಭಾಗದ ಮಕ್ಕಳ ಎಲ್ಲ ಆಶಯಗಳನ್ನು ನೆರವೇರಿಸುವ ವೈವಿಧ್ಯಮಯ ಶೈಕ್ಷಣಿಕ ಕೋರ್ಸಗಳನ್ನು ಸ್ಥಾಪಿಸುವ ಪ್ರಯತ್ನದಲ್ಲಿದೆ. ಇಂತಹ ಪ್ರತಿಷ್ಠಿತ ವಿದ್ಯಾಸಂಸ್ಥೆಯ 68ನೇ ಸಂಸ್ಥಾಪನಾ ದಿನಾಚರಣೆ ಇದೇ ಏ. 28 ರಂದು ನೆರವೇರಲಿದೆ. ತಾಲೂಕಿನ ಎಲ್ಲ ಶಿಕ್ಷಣ ಪ್ರೇಮಿಗಳು, ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡು ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದರು. ಚಂದ್ರಶೇಖರಪ್ಪ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.