ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೇಲ್ಮುರಿ ಆಯ್ಕೆ

ಕಲಿಕೆಯಲ್ಲಿ ಹೊಸತನ, ಶಾಲಾ ವನ, ಸ್ವಚ್ಛ ಪರಿಸರ ನಿರ್ಮಾಣ, ಮಕ್ಕಳ ಸಂಖ್ಯೆ ಹೆಚ್ಚಳ ಮುಂತಾದ ಪರಿಶ್ರಮಕ್ಕೆ ಸಂದ ಗೌರವ

Team Udayavani, Sep 4, 2022, 4:11 PM IST

17

ಹಾವೇರಿ: ಪ್ರಸಕ್ತ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಹಂದಿಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಾಧ್ಯಾಪಕ ಕೊಟ್ರಪ್ಪ ಮೇಲ್ಮುರಿ ಆಯ್ಕೆಯಾಗಿದ್ದಾರೆ.

ಕಲಿಕೆಯಲ್ಲಿ ನಾವೀನ್ಯತೆ ಅಳವಡಿಕೆ, ಶಾಲಾ ವನ, ಸ್ವಚ್ಛ ಪರಿಸರ ನಿರ್ಮಾಣ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಅಳವಡಿಸಿದ ಪರಿಣಾಮ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ.

ಖಾಸಗಿ ಶಾಲೆಗಳ ನಾಗಾಲೋಟದಲ್ಲಿ ಸರ್ಕಾರಿ ಶಾಲೆಗಳು ಕಲಿಕೆ ಮತ್ತು ಅಭಿವೃದ್ಧಿಯಲ್ಲಿ ಹಿಂದುಳಿದಿಲ್ಲ ಎಂಬುದನ್ನು ಶಾಲೆಯ ಮುಖ್ಯಾಧ್ಯಾಪಕ ಮೇಲ್ಮುರಿ ತೋರಿಸಿಕೊಟ್ಟಿದ್ದಾರೆ.

ಇಂಗ್ಲಿಷ್‌ ಭಾಷೆ ಗ್ರಾಮೀಣ ಮಕ್ಕಳಿಗೆ ರುಚಿಸುವಂತೆ ಸರಳ ಓದು, ಶುದ್ಧ ಬರಹ, ಪದ ಸಂಗ್ರಹದ ಕಲಿಕೋಪಕರಣಗಳನ್ನು ಶಾಲೆಯಲ್ಲಿ ಅಳವಡಿಸಿದ್ದಾರೆ. ನಲಿಕಲಿಯಲ್ಲಿ ಸ್ವಯಂ ಕಲಿಕೆ, ಗುಂಪು ಕಲಿಕೆ ಜಾರುಪಟ್ಟಿ, ತಟ್ಟೆ ಚಪ್ಪರ ಅಳವಡಿಕೆ, ವಿಜ್ಞಾನಗಳ ಸರಳ ಪ್ರಯೋಗಗಳು, ಗಣಿತದ ಸರಳ ಲೆಕ್ಕಗಳನ್ನು ನಾವೀನ್ಯತೆಯ ಬೋಧನಾ ಕ್ರಮದ ಮೂಲಕ ಮಕ್ಕಳಿಗೆ ದಿನವೂ ಪರಿಸರದಲ್ಲಿ ಕಲಿಕಾ ವಾತಾವರಣ ನಿರ್ಮಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಶಾಸಕರ ಅನುದಾನದಿಂದ ಹಾಗೂ ಗ್ರಾಮ ಪಂಚಾಯಿತಿಯಿಂದ 10 ಲ‌ಕ್ಷ ರೂ. ಮೌಲ್ಯದ ಅಭಿವೃದ್ಧಿ ಕಾರ್ಯಗಳನ್ನು ಶಾಲೆಯಲ್ಲಿ ಮಾಡಿಸಿದ್ದಾರೆ.

ಶಾಲಾ ವನ ನಿರ್ಮಾಣ ಮಾಡಿ, ರಾಸಾಯನಿಕ ಗೊಬ್ಬರ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಶಾಲಾ ವನಕ್ಕೆ ರಕ್ಷಣಾ ಗೋಡೆ, ಹಸಿರು ಸೊಪ್ಪು ಬೆಳೆಯುವಿಕೆ, ಸುಂದರ, ಸ್ವಚ್ಛ ಪರಿಸರ ನಿರ್ಮಾಣ ಮಾಡಿದ್ದಾರೆ. ಪ್ರತಿ ಶುಕ್ರವಾರ ಸಾಂಸ್ಕೃತಿಕ ಸಂಜೆ ನಾವೀನ್ಯತಾ ಕಾರ್ಯಕ್ರಮ, ತಾಯಂದಿರ ಸಭೆ, ಪಾಲಕರ ಸಭೆ, ಶಾಲೆಗೆ ಬನ್ನಿ ಶನಿವಾರ, ವಿಶಿಷ್ಟ ಪರಿಹಾರ ಬೋಧನೆ ಇತ್ಯಾದಿ ಅಂಶಗಳನ್ನು ಹಂದಿಗನೂರು ಶಾಲೆಯಲ್ಲಿ ಅಳವಡಿಸಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

30 ವರ್ಷಗಳ ಸಾರ್ಥಕ ಸೇವೆ: ಹಾನಗಲ್ಲ ತಾಲೂಕು ಮಲ್ಲಿಗಾರ ಓಣಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ 1992ರಲ್ಲಿ ಕೊಟ್ರಪ್ಪ ಮೇಲ್ಮುರಿ ಅವರು, ಸಿಆರ್‌ಪಿ ಆಗಿ 7 ವರ್ಷ ಸೇವೆ ಸಲ್ಲಿಸಿದ್ದಾರೆ. ಬಳಿಕ ತಾಲೂಕಿನ ಕೊರಡೂರು ಶಾಲೆ, ಸದ್ಯ ಹಂದಿಗನೂರು ಶಾಲೆ ಮುಖ್ಯಾಧ್ಯಾಪಕರಾಗಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಲ್ಲಿಗಾರ ಶಾಲೆಯಲ್ಲಿ ಹೆಚ್ಚಾಗಿ ಲಮಾಣಿ ಸಮುದಾಯದ ಮಕ್ಕಳೇ ಕಲಿಯುತ್ತಿದ್ದರು. ಶಾಲೆಯ ಶೋಚನೀಯ ಸ್ಥಿತಿ ಕಂಡು ಶಾಲೆಗೆ ಒಂದು ಹೊಸ ರೂಪ ಕೊಡಲು ಸಂಕಲ್ಪ ಮಾಡಿದರು. ಊರ ಹಿರಿಯರ, ಶಿಕ್ಷಣ ಪ್ರೇಮಿಗಳ ಸಭೆ ನಡೆಸಿ, ದಾಖಲಾತಿ, ಹಾಜರಾತಿ ಅಂದೋಲನ ಕೈಗೊಂಡು ಸಮೀಪದ ಸಾತೇನಹಳ್ಳಿ ಗ್ರಾಮಕ್ಕೆ ಹೋಗಿ ಅಲ್ಲಿಂದ ಮಕ್ಕಳನ್ನು ತಮ್ಮ ಶಾಲೆಗೆ ದಾಖಲು ಮಾಡಿಕೊಂಡು ಮಕ್ಕಳ ಸಂಖ್ಯೆಯನ್ನು 60ಕ್ಕೆ ಹೆಚ್ಚಿಸಿದರು. ಅರಳೇಶ್ವರ, ಕೊರಡೂರ ಶಾಲೆಯಲ್ಲಿ ಸೇವೆ ಸಲ್ಲಿಸಿ 2014ರಿಂದ ಬಡ್ತಿ ಮುಖ್ಯೋಪಾಧ್ಯಾಯರಾಗಿ ಹಂದಿಗನೂರ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯಲ್ಲಿ ಉತ್ತಮ ಪರಿಸರ ಸಂರಕ್ಷಣೆ ಮಾಡಿ ಮೂರು ಬಾರಿ ಜಿಲ್ಲಾ ಪರಿಸರ ಮಿತ್ರ ಪ್ರಶಸ್ತಿ ಪಡೆದಿದ್ದಾರೆ. ವಿದ್ಯಾಗಮ ಕಾರ್ಯಕ್ರಮದಲ್ಲೂ ಶಾಲೆಯ ಪ್ರಗತಿ ಕಂಡು ಇಲಾಖೆ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದರು.

ಶಿಕ್ಷಕರಿಗೆ ಪ್ರಶಸ್ತಿ ಬರುವುದು ಕಡಿಮೆ. ಈ ಸಲದ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಇದರಿಂದ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ಮಕ್ಕಳ ಕಲಿಕೆ, ಸಾಧನೆಯಲ್ಲೇ ನಾವು ಸಂತಸ ಕಾಣುತ್ತೇವೆ. ನಮ್ಮ ಕೈಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಕರೆ ಮಾಡಿ ಅಭಿನಂದಿಸುತ್ತಿದ್ದಾರೆ. ಬಹಳ ಸಂತೋಷವಾಗುತ್ತಿದೆ.  -ಕೊಟ್ರಪ್ಪ ಮೇಲ್ಮುರಿ, ಪ್ರಶಸ್ತಿಗೆ ಭಾಜನ ಶಿಕ್ಷಕ

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.