ಹಾಸ್ಟೆಲ್‌ ಪ್ರವೇಶಕ್ಕೆ ವಿದ್ಯಾರ್ಥಿಗಳ ಹಿಂದೇಟು

4 ದಿನಗಳಲ್ಲಿ ಕೇವಲ 28 ವಿದ್ಯಾಥಿಗಳು ವಾಸ್ತವ್ಯ

Team Udayavani, Nov 23, 2020, 7:34 PM IST

ಹಾಸ್ಟೆಲ್‌ ಪ್ರವೇಶಕ್ಕೆ ವಿದ್ಯಾರ್ಥಿಗಳ ಹಿಂದೇಟು

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ದಿಂದ ಬಂದ್‌ ಆಗಿದ್ದ ಕಾಲೇಜುಗಳು ಸರ್ಕಾರದ ಆದೇಶದ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಪುನರಾರಂಭಗೊಂಡಿವೆ.

ಆದರೆ ಜಿಲ್ಲೆಯ ವಸತಿ ನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಕಳೆದನಾಲ್ಕು ದಿನಗಳಲ್ಲಿ ಕೇವಲ 28 ವಿದ್ಯಾಥಿಗಳಷ್ಟೇ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ಸರ್ಕಾರದ ಆದೇಶದಂತೆ ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ ಸಿಬ್ಬಂದಿ ವಸತಿ ನಿಲಯಗಳಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಕಲ ಸಿದ್ಧತೆ ನಡೆಸಿದ್ದರು. ಆದರೆ ಬಹುತೇಕ ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಬರಲು ಹಿಂದೇಟು ಹಾಕಿದ್ದರಿಂದ ಸಮಾಜ ಇಲಾಖೆ ಸಿಬ್ಬಂದಿ ನಿರಾಸೆಗೊಂಡಿದ್ದಾರೆ.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ 18 ವಿದ್ಯಾರ್ಥಿ ವಸತಿ ನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಕಾಲೇಜು ಆರಂಭಗೊಂಡ ಹಿನ್ನೆಲೆನೂರಾರು ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಪ್ರವೇಶ ಪಡೆಯುವ ನಿರೀಕ್ಷೆ ಹೊಂದಲಾಗಿತ್ತು. ಆದರೆಇದುವರೆಗೆ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ವಸತಿ ನಿಲಯಗಳತ್ತ ಹೆಚ್ಚೆ ಹಾಕಿದ್ದಾರೆ.

ಕೋವಿಡ್ ಆತಂಕ: ಕೋವಿಡ್ ಆತಂಕದ ನಡುವೆಯೇ ಸರ್ಕಾರದ ಆದೇಶ ಹಿನ್ನೆಲೆ ಹಂತಿಮ ಹಂತದ ಪದವಿ ಕಾಲೇಜು ಪುನರಾರಂಭಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಾಸ್ಟೆಲ್‌ ತೆರೆಯಲಾಗಿದೆ. ಆದರೆ ಬಹುತೇಕ ಪಾಲಕರಲ್ಲಿ ಇನ್ನು ಕೋವಿಡ್ ಆತಂಕ ಮನೆ ಮಾಡಿದ್ದು ತಮ್ಮ ಮಕ್ಕಳನ್ನು ಹಾಸ್ಟೆಲ್‌ಗೆ ಕಳಹಿಸಲು ಹಿಂದೇಟು ಹಾಕುತ್ತಿದ್ದಾರೆ. ಜತೆಗೆ ಹೊಸ ಪ್ರವೇಶಕ್ಕೆ ಈ ಬಾರಿ ಅನುಮತಿ ಇಲ್ಲದ ಕಾರಣ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಕೊರತೆ ಎದುರಾಗಿದೆ. ಅಲ್ಲದೇ ಇನ್ನು ಕಾಲೇಜುಗಳು ಸಮರ್ಪಕವಾಗಿ ಪುನರಾರಂಭವಾಗಿಲ್ಲ. ಈ ಕಾರಣದಿಂದ ಪ್ರಾರಂಭದ ದಿನಗಳಲ್ಲಿ ವಿದ್ಯಾರ್ಥಿಗಳ ಕೊರತೆ ಎದುರಾಗಿದೆ. ಮುಂದಿನ ದಿನಗಳಲ್ಲಿ ನಿರೀಕ್ಷಿಸಿದಷ್ಟು ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆ.

ಕಾದು ನೋಡುವ ತಂತ್ರ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿದ್ದರೂ, ಗ್ರಾಮೀಣ ಪ್ರದೇಶದ ಜನರು ಕೋವಿಡ್ ಆತಂಕದಿಂದ ಹೊರಬಂದಿಲ್ಲ. ಅದರಲ್ಲೂ ಪಾಲಕರು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿರುವುದರಿಂದ ಸ್ಪಲ್ಪ ದಿನ ಕಾದು ನೋಡುವ ಯೋಜನೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಇದರೊಂದಿಗೆ ವಸತಿ ನಿಲಯಗಳಿಗೆ ಬರುವ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸುತ್ತಿರುವುದರಿಂದ ಹಲವು ವಿದ್ಯಾರ್ಥಿಗಳು ಹಾಸ್ಟೆಲ್‌ ಪ್ರವೇಶಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಸಕಲ ಸಿದ್ಧತೆ: ಜಿಲ್ಲೆಯ ಎಲ್ಲ ವಸತಿ ನಿಲಯಗಳು ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಕಲ ರೀತಿಯಲ್ಲಿ ಸಜ್ಜಾಗಿವೆ. ಸರ್ಕಾರದ ಮಾರ್ಗಸೂಚಿಯನ್ವಯ ಎಲ್ಲವಸತಿ ನಿಲಯ ಸ್ಯಾನಿಟೈಸೇಷನ್‌ ಮಾಡಲಾಗುತ್ತಿದೆ.ವಸತಿ ನಿಲಯಗಳ ಆಯಕಟ್ಟಿನ ಜಾಗದಲ್ಲಿಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ. ಅಡುಗೆ ಮನೆ, ವಿದ್ಯಾರ್ಥಿಗಳ ಕೊಠಡಿಗಳಲ್ಲಿ ಸ್ವತ್ಛತೆಕಾಯ್ದುಕೊಳ್ಳಲಾಗಿದೆ. ಜತೆಗೆ ವಿದ್ಯಾರ್ಥಿಗಳಕೊಠಡಿಗಳಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಪ್ರತಿನಿತ್ಯ ಥರ್ಮಲ್‌ ಸ್ಕ್ರೀನಿಂಗ್‌ ಮಾಡುವುದು,ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ದಾಖಲು ಮಾಡುವ ಕಾರ್ಯಕ್ಕೆ ಸಿಬ್ಬಂದಿ ತಯಾರಿ ನಡೆಸಿದ್ದಾರೆ.

ಸರ್ಕಾರದ ಮಾರ್ಗಸೂಚಿಯಂತೆ ವಸತಿ ನಿಲಯಗಳಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿಬ್ಬಂದಿ ಸಿದ್ಧರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ 28 ವಿದ್ಯಾರ್ಥಿಗಳು ವಸತಿ ನಿಲಯಗಳಿಗೆಆಗಮಿಸಿದ್ದು, ಕೊರೊನಾ ಆತಂಕದಿಂದಾಗಿ ಹೆಚ್ಚಾಗಿವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಹಂತ ಹಂತವಾಗಿವಿದ್ಯಾರ್ಥಿಗಳು ವಸತಿ ನಿಲಯಗಳತ್ತ ಮುಖ ಮಾಡುವ ನೀರಿಕ್ಷೆಯಿದೆ. – ಚೈತ್ರಾ, ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ

ಕೋವಿಡ್ ಆತಂಕದಿಂದ ಪಾಲಕರು ವಸತಿ ನಿಲಯಕ್ಕೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಕೋವಿಡ್ ಸ್ಥಿತಿಗತಿ ನೋಡಿಕೊಂಡು ಹಾಸ್ಟೆಲ್‌ಗೆ ಸೇರುವಂತೆ ಪಾಲಕರು ಹೇಳಿದ್ದಾರೆ. ಹೀಗಾಗಿ ಕೆಲವುದಿನಗಳ ನಂತರ ಹಾಸ್ಟೆಲ್‌ಗೆ ಸೇರಲು ಯೋಚಿಸುತ್ತಿದ್ದೇನೆ.  –ಮಂಜುನಾಥ ನಾಯಕ, ವಿದ್ಯಾರ್ಥಿ

-ವೀರೇಶ ಮಡ್ಲೂರ

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.