ಮಳೆ ಹಾನಿ ಸರ್ವೇ ಮಾಡಿ ಪರಿಹಾರ ನೀಡಿ

ತುರ್ತು ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಖಡಕ್‌ ಸೂಚನೆ

Team Udayavani, Jul 14, 2022, 5:38 PM IST

22

ಬ್ಯಾಡಗಿ: ಕಳೆದ 8 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನಲ್ಲಿ ಸಾಕಷ್ಟು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹಲವು ಮನೆಗಳು ಕುಸಿದಿದ್ದು, ಸಾಕಷ್ಟು ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿದೆ. ಕೂಡಲೇ ಸಮರೋಪಾದಿಯಲ್ಲಿ ಸರ್ವೇ ಕಾರ್ಯ ಕೈಗೊಂಡು ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಖಡಕ್‌ ಸೂಚನೆ ನೀಡಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಬುಧವಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿ ಮಾತನಾಡಿದರು.

ತಾಲೂಕಿನಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದರಿಂದಾಗಿ ಸಾಕಷ್ಟು ಹಾನಿಯುಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ ಎಂದರು.

ಈ ಸಂದರ್ಭದಲ್ಲಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಎನ್‌.ತಿಮ್ಮಾರೆಡ್ಡಿ ಪುರಸಭೆ ಮುಖ್ಯಾಧಿಕಾರಿ ಏಸು ಬೆಂಗಳೂರು ಸೇರಿದಂತೆ ಇನ್ನಿತರ ಇಲಾಖೆ ಅಧಿ ಕಾರಿಗಳು ಉಪಸ್ಥಿತರಿದ್ದರು.

ಅರ್ಜಿ ಕಡೆಗಣಿಸಬೇಡಿ

ನೆರೆಯಿಂದ ಹಾನಿಗೊಳಗಾದ ಜನರ ರಕ್ಷಣೆ ಹಾಗೂ ಸೂಕ್ತ ಪರಿಹಾರ ನೀಡಲು ಸರಕಾರ ಯಾವತ್ತೂ ಬದ್ಧವಾಗಿದೆ. ಮಳೆಯಿಂದ ಹಾನಿಗೊಳಗಾದ ಯಾರೊಬ್ಬರ ಅರ್ಜಿಯನ್ನೂ ಹಗುರವಾಗಿ ಪರಿಗಣಿಸದೇ ಪ್ರಾಮಾಣಿಕವಾಗಿ ಸರ್ವೇ ಕಾರ್ಯ ನಡೆಸಿ, ಅವರಿಗೆ ಪರಿಹಾರ ಒದಗಿಸಲು ಮುಂದಾಗಬೇಕು. ಇಲ್ಲದಿದ್ದಲ್ಲಿ ಸಂಬಂಧಪಟ್ಟ ಅ ಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಕೇಂದ್ರ ಸ್ಥಾನದಲ್ಲಿರಿ

ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಮಾತನಾಡಿ, ತಾಲೂಕಿನ ಕೃಷಿ, ತೋಟಗಾರಿಕೆ, ಸಿಡಿಪಿಒ, ಶಿಕ್ಷಣ ಇಲಾಖೆ ಸೇರಿದಂತೆ ಬಹುತೇಕ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಲ್ಲ ಸೇರಿದಂತೆ ಎಂಬ ಆರೋಪವೂ ಕೇಳಿ ಬರುತ್ತಿದ್ದು, ಸಾರ್ವಜನಿಕರಿಗೆ ಉತ್ತರ ನೀಡಿ ನೀಡಿ ಸಾಕಾಗಿದೆ. ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು, ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಅನಿವಾರ್ಯ ಎಂದು ಖಡಕ್‌ ಎಚ್ಚರಿಕೆ ನೀಡಿದರು.

59 ಮನೆಗಳಿಗೆ ಹಾನಿ

‌ತಹಶೀಲ್ದಾರ ಎನ್‌.ತಿಪ್ಪೇಸ್ವಾಮಿ ಮಾತನಾಡಿ, ತಾಲೂಕಿನಲ್ಲಿ ಕಳೆದ ಒಂದನೇ ತಾರೀಖೀನಿಂದ 59 ಒಟ್ಟು ಮನೆಗಳು ಸೇರಿದಂತೆ 61 ಹೆಕ್ಟೇರ್‌ ಭೂಮಿಯಲ್ಲಿನ ಬೆಳೆ ಹಾನಿಯಾಗಿದೆ. ಇದರಲ್ಲಿ 29 ಮನೆಗಳ ಸಮೀಕ್ಷೆ ಕಾರ್ಯ ಮುಗಿದಿದ್ದು, ಒಟ್ಟು 9 ಮನೆಗಳಿಗೆ 5200 ಸಾವಿರ ರೂ. ಪರಿಹಾರ ನೀಡಲಾಗಿದೆ. 20 ಮನೆಗಳನ್ನು ಇತರೆ ಕಾರಣಗಳಿಂದಾಗಿ ತಿರಸ್ಕೃಸರಿಸಲಾಗಿದೆ ಎಂದರು.

ನಿರಾಶ್ರಿತರಿಗೆ ಸೂಕ್ತ ವಸತಿ

ತಾಲೂಕಿನಲ್ಲಿ ಮಳೆ ಅವಾಂತರ ಸೃಷ್ಟಿ ಮಾಡುತ್ತಿದ್ದರೂ ಗ್ರಾಮೀಣ ಭಾಗದಲ್ಲಿ ಪಿಡಿಒ ಸೇರಿದಂತೆ ಅಧಿಕಾರಿಗಳು ಕಚೇರಿ ಬಿಟ್ಟು ಸರ್ವೇ ಕಾರ್ಯ ನಡೆಸುತ್ತಿಲ್ಲ ಎಂಬ ದೂರುಗಳ ಕೇಳಿ ಬರುತ್ತಿವೆ. ಕಚೇರಿ ಬಿಟ್ಟು ಹೊರಬಂದು ಮನೆ ಬಿದ್ದಿರುವ ನಿರಾಶ್ರಿತರಿಗೆ ಸೂಕ್ತ ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಬೇಕೆಂದರು.

ಸಿಬ್ಬಂದಿ ಕೊರತೆ

ಮಳೆಯಿಂದ ಹಾನಿಗೊಳಗಾದ ಬೆಳೆ ಹಾನಿ ಕುರಿತಂತೆ ಮಾಹಿತಿ ಪಡೆದುಕೊಳ್ಳಲು ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಆದ್ದರಿಂದ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ಹಾನಿ ಅರ್ಜಿ ಪಡೆದು ನೀಡಿದಲ್ಲಿ ಅನೂಕೂಲವಾಗಲಿದೆ ಎಂದು ಕೃಷಿ ಇಲಾಖೆ ಸಹಾಕಯ ನಿರ್ದೇಶಕ ಎ.ಡಿ.ವೀರಭದ್ರಪ್ಪ ಹೇಳಿದರು. ಆಗ, ಮನೆ ಹಾನಿ, ಬೆಳೆ ಹಾನಿ ಅರ್ಜಿಯನ್ನು ಗ್ರಾಮ ಲೆಕ್ಕಾ ಧಿಕಾರಿಗಳು ಪಡೆಯಲು ಸಾಧ್ಯವೇ ಎಂಬ ಚರ್ಚೆಗಳು ಸಭೆಯಲ್ಲಿ ನಡೆದವು.

ಶಿಥಿಲ ಕಟ್ಟಡಗಳ ಮಾಹಿತಿ ನೀಡಿ

ನಿರಂತರ ಮಳೆಯಿಂದ ಶಾಲೆಗಳ ಕೊಠಡಿಗಳು ಶಿಥಿಲಗೊಂಡಿವೆ. ಇದರ ಬಗ್ಗೆ ಖುದ್ದಾಗಿ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಕೂಲಂಕಷ ಮಾಹಿತಿ ಪಡೆದುಕೊಂಡು ಅಲ್ಲಿನ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಯಾವುದೇ ಅನುಹುತವಾಗದಂತೆ ನೋಡಿಕೊಳ್ಳಬೇಕೆಂದು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.