ಕೋವಿಡ್‌ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ

Team Udayavani, Jul 5, 2020, 2:44 PM IST

ಕೋವಿಡ್‌ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ

ಹಾನಗಲ್ಲ: ಕೋವಿಡ್‌-19 ಮಹಾಮಾರಿ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಇದನ್ನು ತಡೆಗಟ್ಟಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯವಶ್ಯ. ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜಾಗೃತಿ ಮೂಡಿಸಬೇಕು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ಶನಿವಾರ ತಾಪಂ ಸಭಾಭವನದಲ್ಲಿ ವಿವಿಧ ಇಲಾಖೆಗಳ ಸಭೆ ನಡೆಸಿ, ಕೋವಿಡ್‌, ಕೃಷಿ, ಉದ್ಯೋಗ ಖಾತ್ರಿ ಯೋಜನೆಗಳ ಕುರಿತು ಇಲಾಖೆ ಅಧಿಕಾರಿಗಳ ವರದಿ ಪಡೆದು ನಂತರ ಮಾತನಾಡಿದ ಅವರು, ಈಗಾಗಲೇ ಕೋವಿಡ್‌ ವಾರಿಯರ್ಸ್‌ ಪಟ್ಟಣದ 6 ಆಶಾ ಕಾರ್ಯಕರ್ತೆಯರಿಗೆ ಸೋಕು ದೃಢಪಟ್ಟಿದೆ. ಎಲ್ಲ ಆಶಾ ಕಾರ್ಯಕರ್ತೆಯರಿಗೆ ಸಾಮೂಹಿಕವಾಗಿ ತಪಾಸಣೆ ನಡೆಸಬೇಕು. ಇದರೊಂದಿಗೆ ಎಲ್ಲ ಇಲಾಖೆಯ ಸಿಬ್ಬಂದಿಗಳಿಗೂ ಕೂಡ ತಪಾಸಣೆ ನಡೆಸಬೇಕು ಎಂದರು.

ಸರಕಾರಿ ಆಸ್ಪತ್ರೆ ವೈದ್ಯರು ಸೇರಿದಂತೆ ಸಿಬ್ಬಂದಿ ಹೋಮ್‌ ಕ್ವಾರೈಂಟೇನ್‌ ಆಗಿದ್ದಾರೆ. ಹೀಗಾಗಿ ಸಿಬ್ಬಂದಿ ಕೊರತೆ ಇದೆ. ಕೋವಿಡ್‌ ಸೋಂಕನ್ನು ಪರೀಕ್ಷೆ ಮಾಡಿದ ಮೇಲೆ ಡಾಟಾ ಎಂಟ್ರಿ ಮಾಡಲು ಆಪರೇಟರ್‌ ಬೇಕಾಗಿದ್ದಾರೆ. ಕ್ವಾರೈಂಟೇನ್‌ಗೊಳಗಾದವರನ್ನು ಸ್ಥಳಾಂತರ ಗೊಳಿಸಲು ಪ್ರತ್ಯೇಕ ವಾಹನದ ವ್ಯವಸ್ಥೆಯಾಗಬೇಕು. ಕೋವಿಡ್‌ ಸೋಂಕಿತರನ್ನು ಕರೆದೊಯ್ಯಲು ಆಂಬ್ಯುಲೆನ್ಸ್‌ ವ್ಯವಸ್ಥೆಯಾಗಬೇಕು. ಸಿಗ್ಗಾವಿ, ಹಿರೇಕೇರೂರ ಮಾದರಿಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪಿಸಬೇಕು. ಕಂಟೋನ್ಮೆಂಟ್‌ ಜೂನ್‌ನಲ್ಲಿರುವವರಿಗೆ ಆಹಾರ ಕಿಟ್‌ ಪೂರೈಸುವ ಕುರಿತು ತಾಲೂಕು ವೈದ್ಯಾದಿಕಾರಿಗಳು ಸಭೆಯ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ಸಂಸದರು, ಆಶಾ ಕಾರ್ಯಕರ್ತೆಯರ ಕೊರತೆ ನೀಗಿಸಲು ಮೂರು ಎನ್‌ ಜಿಓಗಳು ಮುಂದೆ ಬಂದಿದ್ದು, ಅವರನ್ನೂ ಬಳಸಿಕೊಳ್ಳುವ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದರು.

15ನೇ ಹಣಕಾಸು ಯೋಜನೆಯ ಹಣ ಬಿಡುಗಡೆಯಾಗಿದ್ದು, ಇದರ ಲೆಕ್ಕ ಪುಸ್ತಕ ಪ್ರತ್ಯೇಕವಾಗಿರಬೇಕು. ಕೂಡಲೆ 21 ಗ್ರಾಪಂಗಳು ಯೋಜನೆ ಸಿದ್ಧಪಡಿಸಿ ಕಾರ್ಯೋನ್ಮುಖರಾಗಬೇಕು. ಈ ಯೋಜನೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಅವಕಾಶವಿದ್ದು, ಸ್ವಚ್ಛತೆಗೆ ಬಳಸಿಕೊಳ್ಳುವ ಅವಕಾಶವಿದೆ ಎಂದು ತಾಪಂ ಇಒ ಚನ್ನಪ್ಪ ರಾಯಣ್ಣನವರ ಸೂಚಿಸಿದರು.

ವೈದ್ಯಾಧಿಕಾರಿ ರವೀಂದ್ರಗೌಡ ಪಾಟೀಲ, ತಾಪಂ ಇಒ ಚನ್ನಪ್ಪ ರಾಯಣ್ಣನವರ, ಸಿಪಿಐ ಶಿವಶಂಕರ ಗಣಾಚಾರಿ ಹಾಗೂ ಎಲ್ಲ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.