ಕಾರ್ಮಿಕರ ವೇತನ ವಿಳಂಬವಾದ್ರೆ ಪಿಡಿಒ ಹೊಣೆ

•ರೋಜಗಾರ್‌ ದಿನಾಚರಣೆ ಸಭೆ•ಒಟ್ಟು 109 ಕಾಮಗಾರಿ 20.19 ಲಕ್ಷ ರೂ. ವೆಚ್ಚ

Team Udayavani, Aug 20, 2019, 1:18 PM IST

hv-tdy-1

ಬ್ಯಾಡಗಿ: ಗುಂಡೇನಹಳ್ಳಿ ಗ್ರಾಮದಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆಯಲ್ಲಿ ಬಸವರಾಜ ಅಮಾತಿ ಮಾತನಾಡಿದರು.

ಬ್ಯಾಡಗಿ: ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸದೇ ಕೂಲಿ ಕಾರ್ಮಿಕರ ವೇತನ ನೀಡಲು ವಿಳಂಬವಾದಲ್ಲಿ ಅದಕ್ಕೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳನ್ನೇ ನೇರವಾಗಿ ಹೊಣೆಯನ್ನಾಗಿಸಲಾಗುವುದು ಎಂದು ಸಾಮಾಜಿಕ ಲೆಕ್ಕಪರಿಶೋಧನೆ ತಾಲೂಕು ಸಂಯೋಜಕ ಬಸವರಾಜ ಅಮಾತಿ ಎಚ್ಚರಿಸಿದರು.

ತಾಲೂಕಿನ ಗುಂಡೇನಹಳ್ಳಿ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ನಡೆದ ನರೇಗಾ ಯೋಜನೆ ಹಾಗೂ ಸಾಮಾಜಿಕ ಭದ್ರತೆ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ವಿಶೇಷ ರೋಜ್‌ಗಾರ್‌ ದಿನಾಚರಣೆ ಸಭೆಯಲ್ಲಿ ಮಾತನಾಡಿದ ಅವರು, ನರೇಗಾ ಯೋಜನೆಯಡಿ ಗ್ರಾಪಂಗಳು ಎಂಐಎಸ್‌ ಹಾಗೂ ಎಫ್‌ಟಿಒ ಮಾಡಿಕೊಂಡಲ್ಲಿ ಕೂಲಿಕಾರ್ಮಿಕರಿಗೆ ಶೀಘ್ರವಾಗಿ ಅನುದಾನ ಬಿಡುಗಡೆಯಾಗಲು ಸಹಕಾರಿಯಾಗುತ್ತದೆ. ಇಲ್ಲದೇ ಹೋದಲ್ಲಿ ಅನಗತ್ಯ ವಿಳಂಬಕ್ಕೆ ನೇರ ಹೊಣೆಯನ್ನಾಗಿಸುಲಾಗುತ್ತದೆ. ಯೋಜನೆಯಡಿ ಕಾಮಗಾರಿ ನಿರ್ವಹಿಸಿದ ಕೂಲಿಕಾರ್ಮಿಕರಿಗೆ ವೇತನ ಬಿಡುಗಡೆ ಮೊದಲ ಆದ್ಯತೆ ಮಾಡಿಕೊಳ್ಳಬೇಕು. ಬಳಿಕವಷ್ಟೇ ಸಾಮಗ್ರಿಗಳ ವೆಚ್ಚದ ಮೊತ್ತವನ್ನು ಬಿಡುಗಡೆಗೊಳಿಸಲು ಕ್ರಮವಹಿಸುವಂತೆ ಸೂಚನೆ ನೀಡಿದರು.

ಕಳೆದ ಅಕ್ಟೋಬರ್‌ನಿಂದ ಪ್ರಸಕ್ತ ವರ್ಷದ ಮಾರ್ಚ್‌ ವರೆಗೆ ನರೇಗಾ ಯೋಜನೆಯಡಿ ಗ್ರಾಮ ಪಂಚಾಯತ್‌ ಸೇರಿದಂತೆ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸಿರುವ ಕಾಮಗಾರಿಗಳ ಲೆಕ್ಕ ಪರಿಶೋಧನೆ ನಡೆಸಲಾಗಿದ್ದು, ಒಟ್ಟು 109 ಕಾಮಗಾರಿ ನಿರ್ವಹಿಸಿ ಅದಕ್ಕಾಗಿ 20.19 ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ರೇಷ್ಮೆ ಇಲಾಖೆ ಅನುಷ್ಠಾನಗೊಳಿಸಿರುವ ಕಾಮಗಾರಿ ಕಡತವನ್ನು ನೀಡದೇ ಇರುವುದರಿಂದ, ಕಾಮಗಾರಿ ವೆಚ್ಚ 57282 ರೂ.ಗಳನ್ನು ಆಕ್ಷೇಪಣೆಯಲ್ಲಿಡಲಾಗಿದ್ದು, ಅರಣ್ಯ ಇಲಾಖೆ ಅನುಷ್ಠಾನಗೊಳಿಸಿರುವ ಗುಂಡೇನಹಳ್ಳಿ ಹಾಗೂ ಅರಬಗೊಂಡ ಗ್ರಾಮಗಳ ಗುಡ್ಡದ ಪ್ರದೇಶದಲ್ಲಿ ಮಣ್ಣು ಮತ್ತು ನೀರು ಸಂರಕ್ಷಣೆ ಕಾಮಗಾರಿಗೆ ಬಳಸಿರುವ 82239 ಸಾವಿರ ರೂ.ಗಳನ್ನು ವಸೂಲಾತಿಗೆ ಸೂಚಿಸಿದೆ ಎಂದು ಸಭೆಗೆ ತಿಳಿಸಿದರು.

ಕೃಷಿ ಇಲಾಖೆಯ ಅಧಿಕಾರಿ ಹಿಮಾಚಲ ಮಾತನಾಡಿ, ಅತಿವೃಷ್ಟಿಯಿಂದ ಬೆಳೆಹಾನಿಗೊಳಗಾದ ರೈತರು ತಮ್ಮ ಹೊಲದ ಪೋಟೋದೊಂದಿಗೆ ಕೃಷಿ ಅಧಿಕಾರಿಗಳಿಗೆ ಪರಿಹಾರಕ್ಕೆ ಅರ್ಜಿ ಸಲ್ಲಿಸಬೇಕು ಮತ್ತು ಕೃಷಿ ಇಲಾಖೆಯಲ್ಲಿ ಅರ್ಹ ಫಲಾನುಭವಿ ರೈತರಿಗೆ ರಿಯಾಯಿತಿ ದರದಲ್ಲಿ ಬೀಜ ಹಾಗೂ ಔಷಧಿ ಸೇರಿದಂತೆ ವಿವಿಧ ಕೃಷಿ ಪರಿಕರಗಳನ್ನು ನೀಡಲಾಗುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಭೆಯಲ್ಲಿ ಮನವಿ ಮಾಡಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ರಹಮತ್‌ಬಿ ಮಾತನಾಡಿ, ನರೇಗಾ ಯೋಜನೆಯಡಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳು ಪ್ರಗತಿಯ ಹಂತದಲ್ಲಿವೆ. ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಕೂಲಿ ಕೆಲಸ ಸೇರಿದಂತೆ ವೇತನವನ್ನು ಒದಗಿಸಲಾಗುತ್ತಿದೆ ಎಂದರು. ಗ್ರಾಪಂ ಅಧ್ಯಕ್ಷ, ರೇಣುಕಾ ಭರಡಿ, ಉಪಾಧ್ಯಕ್ಷ ರವಿ ಹೊಸ್ಮನಿ, ಸದಸ್ಯರಾದ ಸುರೇಶ ದೇವಿಹೊಸೂರ, ಗುಡ್ಡಪ್ಪ ಆನ್ವೇರಿ, ಫಕ್ಕಿರಪ್ಪ ಹುರಕಡ್ಲಿ, ನರೇಗಾ ಎಂಜಿನಿಯರ್‌ ಮಂಜು ದೊಡ್ಡಗೌಡ್ರ, ಮಲ್ಲೇಶ ಅಳಲಗೇರಿ, ಮಂಜು ಡಮ್ಮಳ್ಳಿ, ಗ್ರಾಪಂ ಸಿಬ್ಬಂದಿ ಹನುಮಂತ ಸಭೆಯಲ್ಲಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.