ನೀರು ಉದ್ಯೋಗ ಮೊದಲ ಆದ್ಯತೆಯಾಗಲಿ

Team Udayavani, May 5, 2019, 2:57 PM IST

Udayavani Kannada Newspaper

ಹಾವೇರಿ: ಜಿಲ್ಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಉದ್ಯೋಗ ನೀಡುವುದು ಆದ್ಯತೆಯ ಕೆಲಸವಾಗಿ ಕಾರ್ಯ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಬರ ಪರಿಸ್ಥಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆದು ನೀರು ಪೂರೈಸಬೇಕು ಹಾಗೂ ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಆಯಾ ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ತಾಪಂ ಇಒಗಳು ಹಾಗೂ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಸದಾ ನಿಗಾವಹಿಸಬೇಕು ಎಂದು ಸೂಚಿಸಿದರು.

ಕುಡಿಯುವ ನೀರು ಪೂರೈಕೆಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಬಿಡುಗಡೆ ಮಾಡಿದ ನೀರನ್ನು ಕೃಷಿ ಬಳಕೆಗೆ ಉಪಯೋಗಿಸದಂತೆ ಎಚ್ಚರ ವಹಿಸಬೇಕು. ನದಿ ಪಾತ್ರದ ಪಂಪ್‌ಸೆಟ್‌ಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಮಳೆಗಾಲ ಪ್ರಾರಂಭವಾಗುವ ವರೆಗೆ ಜಿಲ್ಲೆಯಲ್ಲಿ ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಪಶು ಪಾಲನಾ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಬರ ಪರಿಸ್ಥಿತಿಯಲ್ಲಿ ಕೂಲಿಕಾರರಿಗೆ ಉದ್ಯೋಗ ಅರಿಸಿ ಗುಳೆ ಹೋಗುವುದನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚು ಕಾಮಗಾರಿಗಳನ್ನು ಸೃಜಿಸಿ ಕೂಲಿಕಾರರಿಗೆ ಉದ್ಯೋಗ ಒದಗಿಸುವಂತೆ ಅವರು ಸೂಚಿಸಿದರು.

ಜಿಲ್ಲೆಯ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಮೇವಿನ ಸಮಸ್ಯೆ ಕುರಿತಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಸಹಾಯವಾಣಿ 1077 (08375 249102) 24×7 ಸಹಾಯವಾಣಿ ತೆರೆಯಲಾಗಿದೆ. ತಾಲೂಕು ಮಟ್ಟದಲ್ಲಿ ಸಹ ಸಹಾಯವಾಣಿ ಆರಂಭಿಸಲಾಗಿದೆ. ಇದೇ ರೀತಿಯಲ್ಲಿ ಜಿಲ್ಲೆಯ ಎಲ್ಲ ತಾಪಂ, ನಗರಸಭೆ, ಪುರಸಭೆ ಹಾಗೂ ಪಪಂಗಳಲ್ಲಿ ಸಹ ಸಹಾಯವಾಣಿ ತೆರೆಯಬೇಕು ಎಂದು ಸೂಚನೆ ನೀಡಿದರು.

205 ಸಮಸ್ಯಾತ್ಮಕ ಹಳ್ಳಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯ ನಿರ್ವಾಹಕ ಎಂಜಿನಿಯರ್‌ ಮಾತನಾಡಿ, ಜಿಲ್ಲೆಯಲ್ಲಿ 205 ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಲಾಗಿದೆ. 57 ಗ್ರಾಮಗಳಲ್ಲಿ 116 ಖಾಸಗಿ ಕೊಳವೆ ಬಾವಿಗಳನ್ನು ಒಪ್ಪಂದದ ಆಧಾರದ ಮೇಲೆ ಪಡೆಯಲಾಗಿದೆ. ಅಗತ್ಯಕ್ಕೆ ತಕ್ಕಂತೆ ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮಾತನಾಡಿ, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸದ್ಯ ಟ್ಯಾಂಕರ್‌ ಮೂಲಕ ನೀರು ಪೂರೈಸುತ್ತಿಲ್ಲ ಹಾಗೂ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದಿಲ್ಲ. ಮುಂಬರುವ ದಿನಗಳಲ್ಲಿ ಅಂತಹ ಸಮಸ್ಯೆಗಳು ಉದ್ಭವಿಸಿದಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ನಗರ, ಪಟ್ಟಣ ಪ್ರದೇಶಗಳಲ್ಲಿ 2018 19ನೇ ಸಾಲಿನಲ್ಲಿ ಎಸ್‌ಎಫ್‌ಸಿ ಅನುದಾನದಲ್ಲಿ 180 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, 54 ಕಾಮಗಾರಿಗಳಿಗೆ ಟೆಂಡರ್‌ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಸ್ತುತ 3.26 ಲಕ್ಷ ಮೆಟ್ರಿಕ್‌ ಟನ್‌ ಮೇವು 25 ವಾರಗಳಿಗೆ ಸಾಕಾಗುಷ್ಟು ದಾಸ್ತಾನು ಇದೆ. ಸಾಕಷ್ಟು ಪ್ರಮಾಣದಲ್ಲಿ ಮೇವು ಲಭ್ಯವಿರುವುದರಿಂದ ಮೇವು ಬ್ಯಾಂಕ್‌ ಹಾಗೂ ಗೋಶಾಲೆಗಳನ್ನು ಆರಂಭಿಸುವುದು ಸದ್ಯ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಕಂಡುಬಂದರೆ ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

732 ಶುದ್ಧ ನೀರಿನ ಘಟಕ
ಬ್ಯಾಡಗಿ ತಾಲೂಕಿನಲ್ಲಿ 85, ಹಾನಗಲ್ 126, ಹಾವೇರಿ  108, ಹಿರೇಕೆರೂರು 125, ರಾಣೇಬೆನ್ನೂರು 143, ಸವಣೂರು 63 ಹಾಗೂ ಶಿಗ್ಗಾವಿ ತಾಲೂಕಿನಲ್ಲಿ 82 ಗ್ರಾಮಗಳು ಸೇರಿ 732 ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಹಾನಗಲ್ಲ ತಾಲೂಕಿನ ಎರಡು, ಹಾವೇರಿ, ರಾಣಿಬೆನ್ನೂರು ಹಾಗೂ ಸವಣೂರ ತಾಲೂಕಿನ ತಲಾ ಒಂದು ಶುದ್ಧ ನೀರಿನ ಘಟಕ ಸೇರಿ ಐದು ಘಟಕಗಳು ದುರಸ್ತಿಯಲ್ಲಿವೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.