ಉಕ್ಕಿ ಹರಿದಿದ್ದ ನದಿಗಳಲ್ಲಿ ನೀರಿನ ಕೊರತೆ

Team Udayavani, Feb 4, 2020, 3:45 PM IST

hv-tdy-1

ಹಾವೇರಿ: ಕೇವಲ ಮೂರು ತಿಂಗಳ ಹಿಂದಷ್ಟೇ ಉಕ್ಕಿ ಹರಿದಿದ್ದ ನದಿಗಳು ಈಗ ನೀರಿಲ್ಲದೇ ಬರಿದಾಗುತ್ತಿದ್ದು, ರೈತರು ನೀರಿಗಾಗಿ ಈ ವರ್ಷವೂ ಪರಿತಪಿಸುವ ಪರಿಸ್ಥಿತಿ ಎದುರಾಗಿದೆ.

ಕಳೆದ ಆಗಸ್ಟ್‌ ಹಾಗೂ ಅಕ್ಟೋಬರ್‌ ತಿಂಗಳಲ್ಲಾದ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಹರಿದ ವರದಾ, ಕುಮದ್ವತಿ, ಧರ್ಮಾ, ತುಂಗಭದ್ರಾ ನದಿಗಳೆಲ್ಲವೂ ಅಪಾಯಮಟ್ಟ ಮೀರಿ ತುಂಬಿ ಹರಿದಿದ್ದವು. ನದಿ ಸುತ್ತಲಿನ ಪ್ರದೇಶವೆಲ್ಲ ಜಲಸಮಾ ಧಿಯಾಗುವಂತೆ ಮಾಡಿದ್ದವು. ಆ ನದಿಗಳೇ ಈಗ ನೀರಿಲ್ಲದೆ ಒಡಲು ಒಣಗಿಸಿಕೊಳ್ಳುವ ಸ್ಥಿತಿ ತಲುಪಿವೆ.

ನಾಲ್ಕೈದು ವರ್ಷಗಳಿಂದ ಜಿಲ್ಲೆಯಲ್ಲಿ ನಿರಂತರ ಬರಗಾಲ ಆವರಿಸಿತ್ತು. ಸಮರ್ಪಕ ಮಳೆ ಆಗದೆ ಇರುವುದರಿಂದ ಅಕ್ಟೋಬರ್‌ ಇಲ್ಲವೇ ನವೆಂಬರ್‌ ತಿಂಗಳಿನಲ್ಲಿಯೇ ನದಿ ಬಾಂದಾರಗಳಿಗೆ ಗೇಟ್‌ ಹಾಕಲಾಗುತ್ತಿತ್ತು. ಈ ಬಾರಿ ಆಗಸ್ಟ್‌ ಹಾಗೂ ಅಕ್ಟೋಬರ್‌ನಲ್ಲಿ ಸುರಿದ ಅತಿವೃಷ್ಟಿಯಿಂದ ಬಾಂದಾರಗಳಿಗೆ ಗೇಟ್‌ ಈ ಅವಧಿಯಲ್ಲಿ ಅಳವಡಿಸಿಲ್ಲ. ಆದರೆ, ಮಳೆ ಕಡಿಮೆಯಾದ ಒಂದೇ ತಿಂಗಳಲ್ಲಿ ನದಿಗಳಲ್ಲಿನ ನೀರು ಅಪಾರ ಪ್ರಮಾಣದಲ್ಲಿ ಖಾಲಿಯಾಗಿದೆ.

ಇತ್ತೀಚೆಗೆ ಕೆಲವು ಬಾಂದಾರಗಳಿಗೆ ಗೇಟ್‌ ಹಾಕಲಾಗಿದೆಯಾದರೂ ದೊಡ್ಡ ಪ್ರಮಾಣದ ನೀರು ಬಾಂದಾರಗಳಲ್ಲಿ ಉಳಿಯದೇ ಹರಿದು ಹೋಗಿರುವುದು ಸುತ್ತಲಿನ ರೈತರನ್ನು ಕಂಗೆಡಿಸಿದೆ. ಇಷ್ಟು ವರ್ಷ ಸರಿಯಾಗಿ ಮಳೆ ಬಾರದೆ ನೀರಿನ ಕೊರತೆ ಅನುಭವಿಸುತ್ತಿದ್ದ ರೈತರು, ಈ ವರ್ಷಅತಿಯಾದ ಮಳೆಯಾದರೂ ಅದನ್ನು ಸಮರ್ಪಕ ಪ್ರಮಾಣದಲ್ಲಿ ಸಂಗ್ರಹಿಸಿಟ್ಟು ಕೊಳ್ಳಲಾಗದೆ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಆಗ ಹಾಗೆ..ಈಗ ಹೀಗೆ: ಜಿಲ್ಲೆಯಲ್ಲಿ ಹರಿದಿರುವ ತುಂಗಾ, ವರದಾ ನದಿಗಳು ಈ ಬಾರಿ ಅಪಾಯಮಟ್ಟದ ವರೆಗೆ ತುಂಬಿ ಹರಿದವು. ತಾಲೂಕಿನ ನೂರಾರು ಎಕರೆ ಕೃಷಿ ಭೂಮಿಗೆ ನದಿಗಳ ನೀರು ಉಕ್ಕಿ ಬೆಳೆ ಕೂಡ ನಾಶವಾಯಿತು.ಆಗ ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು, ಬೇಸಿಗೆ ಹಂಗಾಮಿನಲ್ಲಾದರೂ ಬೆಳೆ ಬೆಳೆದು ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳಬೇಕು ಎಂದು ರೈತರು ಲೆಕ್ಕಹಾಕಿದ್ದರು. ಆದರೆ, ನದಿಯಲ್ಲಿನ ನೀರು ದೊಡ್ಡ ಪ್ರಮಾಣದಲ್ಲಿ ಹರಿದು ಹೋಗಿರುವುದರಿಂದ ರೈತರ ಬೇಸಿಗೆ ಬೆಳೆಯ ನಿರೀಕ್ಷೆಯೂ ಹುಸಿಯಾದಂತಾಗಿದೆ.

50 ಬ್ಯಾರೇಜ್‌ಗಳು: ಜಿಲ್ಲೆಯಲ್ಲಿ ವರದಾ ನದಿಯ 16, ಕುಮದ್ವತಿ ನದಿಯ 10, ಧರ್ಮಾ ನದಿಯ 12, ಹಳ್ಳಗಳು 12 ಹೀಗೆ 50 ಬ್ಯಾರೇಜ್‌ಗಳಿವೆ. ಇವುಗಳಲ್ಲಿ ವರದಾ, ಧರ್ಮಾ ನದಿಗಳ ಬ್ಯಾರೇಜ್‌ ಗಳು ಜಿಲ್ಲೆಯ ರೈತರಿಗೆ ಹೆಚ್ಚು ವರದಾನವಾಗಿದ್ದು, ಈ ಬ್ಯಾರೇಜ್‌ಗಳಿಗೆಲ್ಲ ಸಕಾಲದಲ್ಲಿ ಗೇಟ್‌ ಹಾಕಿದರೆ ವರದಾ ನದಿಯ ಕಳಸೂರ, ಮನ್ನಂಗಿ, ನಾಗನೂರ, ಸಂಗೂರ, ಆಡೂರ, , ಕೂಸನೂರ, ಶೇಷಗಿರಿ, ಹೊಂಕಣ, ಮಕರಳ್ಳಿ, ಗೊಂದಿ, ಕರಜಗಿ, ಹಿರೇಮರಳಿಹಳ್ಳಿ, ಹೊಸರಿತ್ತಿ, ಬೆಳವಿಗಿ, ಮರೊಳಗಳ ಗ್ರಾಮಗಳ ಸಾವಿರಾರು ಹೆಕ್ಟೇರ್‌ ರೈತರ ಕೃಷಿ ಭೂಮಿಗೆ, ಜನ, ಜಾನುವಾರುಗಳಿಗೆ ಅನುಕೂಲವಾಗುತ್ತದೆ. ಅತಿವೃಷ್ಠಿಯಾದ ಈ ವರ್ಷವೂ ರೈತರು ನೀರಿನ ಸಮಸ್ಯೆ ಎದುರಿಸುವಂತಾದದ್ದು ವಿಪರ್ಯಾಸ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.