ಹಾವೇರಿ ಜಿಲ್ಲೆಯಲ್ಲಿ ಗರಿಗೆದರಿದ ಸಚಿವ ಸ್ಥಾನ ನಿರೀಕ್ಷೆ

ಯಾರಿಗೆ ಸಿಗಲಿದೆ ಮಂತ್ರಿಗಿರಿ?­ |ಬಿ.ಸಿ. ಪಾಟೀಲ ಹೆಸರು ಮುಂಚೂಣಿ| ­ವಾರಾಂತ್ಯದಲ್ಲಿ ಸಂಪುಟ ರಚನೆ ಸಾಧ್ಯತೆ

Team Udayavani, Jul 30, 2021, 8:02 PM IST

rgrretre

ಹಾವೇರಿ: ಜಿಲ್ಲೆಯವರೇ ಆಗಿರುವ ಬಸವರಾಜ ಬೊಮ್ಮಾಯಿ ಅವರು 30ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಜಿಲ್ಲೆಯಲ್ಲೂ ಸಚಿವ ಸ್ಥಾನದ ನಿರೀಕ್ಷೆ ಗರಿಗೆದರಿದ್ದು, ಸಂಪುಟ ರಚನೆ ಸಂದರ್ಭದಲ್ಲಿ ಮಂತ್ರಿಗಿರಿ ಭಾಗ್ಯ ಯಾರಿಗೆ ಸಿಗಲಿದೆ ಎಂಬ ಕುತೂಹಲ ಹೆಚ್ಚಿದೆ.

ಈ ಹಿಂದಿನ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಪ್ರಭಾವಿ ಗೃಹ ಖಾತೆ ಪಡೆದಿದ್ದ ಜಿಲ್ಲೆಯ ಬಸವರಾಜ ಬೊಮ್ಮಾಯಿ ಅವರೇ ಇದೀಗ ಮುಖ್ಯಮಂತ್ರಿಗಳಾಗಿದ್ದಾರೆ. ಸಿಎಂ ತವರು ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಕನಿಷ್ಟ ಒಬ್ಬರಿಗೆ ಇಲ್ಲವೇ ಇಬ್ಬರಿಗೆ ಸಚಿವ ಸ್ಥಾನ ನೀಡುವ ಮಾತುಗಳು ಕೇಳಿ ಬರುತ್ತಿವೆ.

ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಹಿರೇಕೆರೂರ ಕ್ಷೇತ್ರದ ಶಾಸಕ ಬಿ.ಸಿ. ಪಾಟೀಲ ಹಾಗೂ ಹಾವೇರಿ ಶಾಸಕ ನೆಹರು ಓಲೇಕಾರ ಹಾಗೂ ವಿಪ ಸದಸ್ಯ ಆರ್‌. ಶಂಕರ ಅವರಲ್ಲಿ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬ ಕುತೂಹಲ ಚರ್ಚೆಗೆ ಗ್ರಾಸವಾಗಿದೆ.

ಬಿ.ಸಿ. ಪಾಟೀಲ ಮುಂಚೂಣಿಯಲ್ಲಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲು ಜಿಲ್ಲೆಯ ಬಿ.ಸಿ. ಪಾಟೀಲ ಹಾಗೂ ಆರ್‌. ಶಂಕರ ತಮ್ಮ ಶಾಸಕ ಸ್ಥಾನವನ್ನು ತ್ಯಾಗ ಮಾಡಿದ್ದರು. ಅದರಲ್ಲಿ ಬಿ.ಸಿ. ಪಾಟೀಲ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಆಯ್ಕೆಯಾಗಿ ಬಿಎಸ್‌ವೈ ಸರ್ಕಾರದಲ್ಲಿ ಕೃಷಿ ಸಚಿವರಾಗಿ ಈವರೆಗೆ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅಲ್ಲದೇ ಆರ್‌. ಶಂಕರ ವಿಧಾನಸಭಾ ಕ್ಷೇತ್ರವನ್ನು ತ್ಯಾಗ ಮಾಡಿ ವಿಪ ಸದಸ್ಯರಾಗಿ ಆಯ್ಕೆಯಾಗಿ ತೋಟಗಾರಿಕೆ ಹಾಗೂ ರೇಷ್ಮೆ ಖಾತೆ ಸಚಿವರಾಗಿದ್ದರು. ಇದೀಗ ಇವರಿಬ್ಬರು ಮಾಜಿಗಳಾಗಿದ್ದು, ಶೀಘ್ರದಲ್ಲಿಯೇ ರಚನೆಯಾಗಲಿರುವ ಬೊಮ್ಮಾಯಿ ಅವರ ಸಂಪುಟದಲ್ಲಿ ಮರಳಿ ಸಚಿವ ಸ್ಥಾನ ಭದ್ರಪಡಿಸಿಕೊಳ್ಳಬೇಕಿದೆ. ಇವರಿಬ್ಬರಲ್ಲಿ ಸದ್ಯ ಬಿ.ಸಿ. ಪಾಟೀಲ ಮುಂಚೂಣಿಯಲ್ಲಿದ್ದು, ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ. ವಿಪ ಸದಸ್ಯ ಆರ್‌. ಶಂಕರ ಅವರು ಸಚಿವ ಸ್ಥಾನದಿಂದ ವಂಚಿತವಾಗುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು, ಕಾಯ್ದು ನೋಡಬೇಕಿದೆ.

ಹೊಸಬರಿಗೆ ಅವಕಾಶ ನೀಡಿದರೆ ಓಲೇಕಾರಗೆ ಯೋಗ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ, ಹಾವೇರಿ ಶಾಸಕ ನೆಹರು ಓಲೇಕಾರ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ದಲಿತ ಅದರಲ್ಲಿಯೂ ಬಲಗೈ ಸಮುದಾದಿಂದ ಉತ್ತರ ಕರ್ನಾಟಕದಿಂದ ಆಯ್ಕೆಯಾದ ಏಕೈಕ ಶಾಸಕರಾಗಿದ್ದು, ಅಲ್ಲದೇ ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಹಿರಿತನ ಹೊಂದಿದ್ದಾರೆ. ಈ ಹಿನ್ನೆಲೆ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂಬುದು ಚಲವಾದಿ ಮಹಾಸಭಾದ ಆಗ್ರಹವಾಗಿದೆ. ಅಲ್ಲದೇ ಆ ಕೋಟಾದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಹೈಕಮಾಂಡ್‌ ಮೂಲಕ ಪ್ರಭಾವ ಬೀರುತಿದ್ದು, ಸಚಿವ ಸ್ಥಾನ ಸಿಗುವ ನಿರೀಕ್ಷೆಯೊಂದಿಗೆ ಅವರು ಸದ್ಯ ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ. ಒಂದೊಮ್ಮೆ ಪಕ್ಷದ ಹೈಕಮಾಂಡ್‌ ಹೊಸಬರಿಗೆ ಅವಕಾಶ ಕಲ್ಪಿಸಲು ಮುಂದಾದರೆ ಓಲೇಕಾರ ಅವರಿಗೂ ಮಂತ್ರಿಗಿರಿಯ ಭಾಗ್ಯ ಒಲಿಯುವ ಸಾಧ್ಯತೆಗಳಿವೆ.

ಸದ್ಯಕ್ಕೆ ಬಿಜೆಪಿ ಸರ್ಕಾರ ರಚಿಸಲು ಕಾರಣೀಕರ್ತರಾಗಿರುವವರಿಗೆ ಮೊದಲ ಆದ್ಯತೆ ನೀಡುವ ಮಾತುಗಳು ಕೇಳಿ ಬರುತ್ತಿದ್ದು, ಅದು ಸಾಧ್ಯವಾದರೆ ನೆಹರು ಓಲೇಕಾರ ಅವರು ಸಚಿವ ಸ್ಥಾನಕ್ಕಾಗಿ ಇನ್ನಷ್ಟು ದಿನ ಕಾಯುವುದು ಅನಿವಾರ್ಯವಾಗಲಿದೆ. ಈ ವಾರಾಂತ್ಯದಲ್ಲಿ ಸಂಪುಟ ರಚನೆಯಾಗಲಿದ್ದು, ಜಿಲ್ಲೆಯ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲಕ್ಕೂ ತೆರೆಬೀಳಲಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.