ಒನ್‌ ಸ್ಟಾಪ್‌ ಸೆಂಟರ್‌ನಲ್ಲಿ ತ್ವರಿತ ಸೇವೆ ನೀಡಿ

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ಇಲಾಖೆ ಸೇವೆ ಲಭ್ಯ: ಡಿಸಿ ಭಾಜಪೇಯಿ

Team Udayavani, Jan 5, 2020, 3:39 PM IST

5-January-17

ಹಾವೇರಿ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೊಲೀಸ್‌ ಸೇವೆ, ಕಾನೂನು ಸೇವೆ ಹಾಗೂ ಸಮಾಲೋಚನೆ, ತಾತ್ಕಾಲಿಕ ವಸತಿ ಒದಗಿಸುವ ಕೇಂದ್ರ ಸರ್ಕಾರದ ಒನ್‌ ಸ್ಟಾಪ್‌ ಸೆಂಟರ್‌-ಸಖೀ ಕೇಂದ್ರವನ್ನು ಜಿಲ್ಲಾಸ್ಪತ್ರೆಯಲ್ಲಿ ಆರಂಭಿಸಲಾಗಿದ್ದು, ಅಗತ್ಯ ಎಲ್ಲ ಸೌಲಭ್ಯ ತ್ವರಿತವಾಗಿ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಒನ್‌ ಸ್ಟಾಪ್‌ ಸೆಂಟರ್‌ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್‌ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒನ್‌ ಸ್ಟಾಪ್‌ ಸೆಂಟರ್‌ಗೆ ಈಗಾಗಲೇ ಜಿಲ್ಲಾಸ್ಪತ್ರೆ ಆವರಣದಲ್ಲಿ ನಿವೇಶನ ಗುರುತಿಸಲಾಗಿದೆ. ಪ್ರತ್ಯೇಕ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಮಂಜೂರಾತಿ ನೀಡಿದೆ. 53 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಬೇಕಾಗಿದೆ. ಈಗಾಗಲೇ ಒನ್‌ ಸ್ಟಾಪ್‌ ಸೆಂಟರ್‌ ಕಾರ್ಯನಿರ್ವಹಣೆ ಆರಂಭಿಸಲಾಗಿದೆ. ತ್ವರಿತವಾಗಿ ಕೇಂದ್ರದ ಕಾರ್ಯ ನಿರ್ವಹಣೆಗೆ ಪ್ರತ್ಯೇಕ ಕಟ್ಟಡ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.

ಸಾಂತ್ವನ ಕೇಂದ್ರದ ಸಿಬ್ಬಂದಿ ವರ್ಗದವರಿಂದ ಕಾರ್ಯಚಟುವಟಿಕೆ ನಡೆಸಲಾಗುತ್ತಿದೆ. ಪೂರ್ಣ ಪ್ರಮಾಣದ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ತುಂಬಿಕೊಳ್ಳಲು ಕ್ರಮವಹಿಸಲಾಗಿದೆ. ಇಲ್ಲಿನ ಕಾರ್ಯ ನಿರ್ವಹಣೆ ಕುರಿತಂತೆ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ ಮಾಹಿತಿ ನೀಡಿದರು.

ಜಿಲ್ಲಾಸ್ಪತ್ರೆ ಆರೋಗ್ಯ ಅಧಿಕಾರಿಗಳ ಸೇವೆ ಪಡೆಯಲು ಸೂಚನೆ ನೀಡಿದರು ಹಾಗೂ ಈ ಕೇಂದ್ರಕ್ಕೆ ಪ್ರತ್ಯೇಕ ದಿನದ 24ತಾಸು ಪಾಳೆ ಪ್ರಕಾರ ಪೊಲೀಸ್‌ ಸಿಬ್ಬಂದಿಗಳನ್ನು ಒದಗಿಸಲು ಸೂಚಿಸಿದರು. ಕಾನೂನು ಸೇವೆಗೆ ವಕೀಲರ ಸೇವೆಗಾಗಿ ಲಿಖೀತ ಮನವಿ ಸಲ್ಲಿಸಿದರೆ ಕಾನೂನು ಪ್ರಾ ಧಿಕಾರದಿಂದ ಅಗತ್ಯವಾದ ನೆರವು ಒದಗಿಸಲಾಗುವುದು ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀವಿದ್ಯಾ ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ಸ್ಥಾಪಿತವಾಗಿರುವ ಒನ್‌ಸ್ಟಾಪ್‌ ಸೆಂಟರ್‌ ಗಳ ಮೇಲ್ವಿಚಾರಣೆಗಾಗಿ ಜಿಲ್ಲಾ ಧಿಕಾರಿಗಳ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್‌ ಸಮಿತಿ ರಚಿಸಲಾಗಿದ್ದು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾ ಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ,
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿಗಳು, ಬಾರ್‌ ಕೌನ್ಸಿಲ್‌ ಅಧ್ಯಕ್ಷರು, ಜಿಲ್ಲಾ ಆರೋಗ್ಯಾಧಿ ಕಾರಿ,ನಾಗರಿಕ ಸೇವಾ ಸಂಸ್ಥೆಗಳ ಸದಸ್ಯರಾಗಿದ್ದು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಉಪನಿರ್ದೇಶಕರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಧಿಕಾರಿಗಳು ವಿವರಿಸಿದರು. ಸಭೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.