ಕೈದಿಗಳಿಗೆ ನೆಚ್ಚಿನ-ಮೆಚ್ಚಿನ ಟೀಚರ್‌

ವೃತ್ತಿಯಿಂದ ಶಿಕ್ಷಕರಲ್ಲಪ್ರವೃತ್ತಿಯಿಂದ ಅಪ್ಪಟ ಗುರುಮಾತೆ21 ಕೈದಿಗಳಿಗೆ ಅಕ್ಷರಾಭ್ಯಾಸ

Team Udayavani, Sep 5, 2019, 3:34 PM IST

5-spectember-19

ಹಾವೇರಿ: ಕಾರಾಗೃಹದ ಕೈದಿಗಳಿಗೆ ಅಕ್ಷರಾಭ್ಯಾಸ ಮಾಡಿಸುತ್ತಿರುವ ರಾಜೇಶ್ವರಿ ಸಾರಂಗಮಠ.

ಎಚ್.ಕೆ. ನಟರಾಜ
ಹಾವೇರಿ: ಇವರು ಶಿಕ್ಷಕ ವೃತ್ತಿಯ ಕೋರ್ಸ್‌ ಕಲಿತವರಲ್ಲ, ಎಲ್ಲಿಯೂ ಶಿಕ್ಷಕಿಯಾಗಿ ಕೆಲಸ ಮಾಡಿದವರಲ್ಲ. ಆದರೆ ಕೈದಿಗಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಕೈದಿಗಳ ಪಾಲಿಗೆ ನೆಚ್ಚಿನ-ಮೆಚ್ಚಿನ ‘ಟೀಚರ್‌’ ಆಗಿದ್ದಾರೆ.

ಹೌದು. ಇಲ್ಲಿಯ ರಾಜೇಶ್ವರಿ ರವಿ ಸಾರಂಗಮಠ ಎಂಬುವರು ಕಲಿತದ್ದು ಪಿಯುಸಿಯಾದರೂ ಇಲ್ಲಿಯ ಕಾರಾಗೃಹದಲ್ಲಿರುವ ಕೈದಿಗಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಅಚ್ಚುಮೆಚ್ಚಿನ ಶಿಕ್ಷಕಿಯಾಗಿ ಗಮನ ಸೆಳೆದಿದ್ದಾರೆ.

ಇಲ್ಲಿಯ ಜಿಲ್ಲಾ ಕಾರಾಗೃಹದಲ್ಲಿ ಅನಕ್ಷರಸ್ಥ 32 ಬಂಧಿಗಳಿಗೆ ಕಳೆದ ವರ್ಷ ಆರು ತಿಂಗಳು ಕಾಲ ಅಕ್ಷರ ಕಲಿಸುವ ಕಾಯಕ ಮಾಡಿದ್ದು, ಇವರಲ್ಲಿ 21 ಜನರು ಮೂಲ ಸಾಕ್ಷರತಾ ಪರೀಕ್ಷೆ ಬರೆದಿದ್ದಾರೆ.

ಬಾಲ್ಯದಿಂದಲೂ ನಾಟಕ, ಹಾಡು, ಏಕಪಾತ್ರಾಭಿನಯ ಹಾಗೂ ಸಮಾಜ ಸೇವೆಯ ಗುಂಗು ಹತ್ತಿಸಿಕೊಂಡ ರಾಜೇಶ್ವರಿ, 1998ರಲ್ಲಿ ‘ಕನ್ನಡ ನಾಡು ಸಾಕ್ಷರರ ನಾಡು’ ಸಾಕ್ಷರತಾ ಆಂದೋಲನ ಮೂಲಕ ಅಕ್ಷರ ಕಲಿಸುವ ಪಯಣ ಆರಂಭಿಸಿದರು. 2001ರಲ್ಲಿ ಹಾನಗಲ್ಲ ತಾಲೂಕಿನ ಗುರುರಾಯ ಪಟ್ಟಣದಲ್ಲಿ (ಆಗಿನ ಬಾಳೂರ ರಾಸ್ತಾ ತಾಂಡಾ) ಮುಂದುವರಿಕೆ ಸಾಕ್ಷರತಾ ಶಿಕ್ಷಣ ಪ್ರೇರಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ಅನಕ್ಷರಸ್ಥ ಗ್ರಾಮ ಪಂಚಾಯಿತಿ ಸದಸ್ಯರಿಗೆ 2005ರಲ್ಲಿ ಅಕ್ಷರಾಭ್ಯಾಸ, 2006ರಲ್ಲಿ ನಿರಂತರ ಮುಂದುವರಿಕೆ ಶಿಕ್ಷಣ ಕೇಂದ್ರ ಬಾಹ್ಯ ಮೌಲ್ಯಮಾಪನದಲ್ಲಿ ರಾಜೇಶ್ವರಿಯವರು ಭಾಗಿಯಾಗಿದ್ದರು. ಇವರ ಈ ಸೇವೆ ಪರಿಗಣಿಸಿದ ಬೆಂಗಳೂರಿನ ಲೋಕ ಶಿಕ್ಷಣ ನಿರ್ದೇಶನಾಲಯದ ಸಾಕ್ಷರತಾ ಮಿಷನ್‌ 2011ರಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.

ವಿಶೇಷವೆಂದರೆ 2009ರಲ್ಲಿ ಗುತ್ತಲ ಗ್ರಾಮದಲ್ಲಿ ಎಂದೂ ಶಾಲೆಗೆ ಹೋಗದ ವಿಕಲಚೇತನೆ ವಿಜಯಾ ಮೈಲಾರ ಕಳ್ಳಿಮಠ ಎಂಬುವರಿಗೆ ಅಕ್ಷರಾಭ್ಯಾಸ ನೀಡಿ, ಎಸ್‌ಎಸ್‌ಎಲ್ಸಿ ಪರೀಕ್ಷೆ ಕಟ್ಟುವ ಮಟ್ಟಿಗೆ ಪ್ರಯತ್ನ ನಡೆಸಿದ್ದು ಇಲ್ಲಿ ಉಲ್ಲೇಖನೀಯ.

ಕೇವಲ ಸಾಕ್ಷರಾಭ್ಯಾಸ ಮಾಡಿಸುವ ಶಿಕ್ಷಕಿಯಾಗಿ ಅಷ್ಟೇ ಅಲ್ಲ ಲೇಖಕಿಯೂ ಆಗಿದ್ದಾರೆ. ‘ಹೆಣ್ಣು ಪ್ರಣತಿ’, ‘ಹೆಣ್ಣು ಹೃದಯ’, ‘ವಿಕಲಚೇತನ ಗ್ರಾಮೀಣ ಪ್ರತಿಭೆ ವಿಜಯಾ’ ಎಂಬ ಕೃತಿಗಳನ್ನು ರಚಿಸಿದ್ದಾರೆ. ಕಳೆದ ವರ್ಷ ‘ಕಾವ್ಯ ಕಾರಣ’ ಎಂಬ ಪುಸ್ತಕಗಳಲ್ಲಿ ಅವರ ಬಿಡಿ ಲೇಖನಗಳು ಪ್ರಕಟವಾಗಿವೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.