ಯೂರಿಯಾ ಅಭಾವ


Team Udayavani, Aug 1, 2019, 1:11 PM IST

1-Agust-29

ಎಚ್.ಕೆ. ನಟರಾಜ
ಗೊಬ್ಬರ ಗಲಾಟೆಯಿಂದ ಗೋಲಿಬಾರ್‌ ಕುಖ್ಯಾತಿಯ ಹಾವೇರಿ ಜಿಲ್ಲೆಯಲ್ಲಿ ಈ ವರ್ಷ ಮತ್ತೆ ‘ಯೂರಿಯಾ ಗೊಬ್ಬರ’ದ ಅಭಾವ ಸೃಷ್ಟಿಯಾಗಿದೆ. ಇದು ರೈತರ ನಿದ್ರೆಗೆಡಿಸಿದೆ. ಗೊಬ್ಬರಕ್ಕಾಗಿ 2008ರಲ್ಲಿ ಗಲಾಟೆಯಾಗಿ ಲಾಠಿ ಪ್ರಹಾರ ನಡೆದು ಇಬ್ಬರು ರೈತರು ಬಲಿಯಾಗಿದ್ದರು. ಇಷ್ಟೆಲ್ಲಾ ಆಗಿದ್ದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು, ಸಾಕಷ್ಟು ಮುಂಜಾಗ್ರತೆ ವಹಿಸಿ ಗೊಬ್ಬರ ದಾಸ್ತಾನು ಮಾಡುವಲ್ಲಿ ಮೈ ಮರೆತಿರುವುದು ಖೇದಕರ.

ಹಾವೇರಿ: ಜಿಲ್ಲೆಯಲ್ಲಿ ಕೃಷಿಗೆ ಅಗತ್ಯ ಯೂರಿಯಾ ಗೊಬ್ಬರ ಅಭಾವ ತಲೆದೋರಿದ್ದು ಗೊಬ್ಬರ ಸಿಗದೆ ರೈತರು ಪರದಾಡುವಂತಾಗಿದೆ.

ಇತ್ತ ಕೃಷಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ರೈತರನ್ನು ಕೆರಳಿಸಿದೆ.

ಕಳೆದ ಒಂದು ವಾರದಿಂದ ಮಳೆ ನಿರಂತರ ಸುರಿಯುತ್ತಿರುವುದರಿಂದ ಯೂರಿಯಾ ಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ. ಬೇಡಿಕೆ ಇದ್ದಾಗ ಯೂರಿಯಾ ಗೊಬ್ಬರ ಕೊರತೆಯಾಗಿರುವುದರಿಂದ ರೈತ ಕಂಗಾಲಾಗಿದ್ದಾನೆ.

ಕೆಲ ರಸಗೊಬ್ಬರ ಅಂಗಡಿಗಳಲ್ಲಿ ಯೂರಿಯಾ ಗೊಬ್ಬರವೊಂದನ್ನೇ ಕೇಳಿದರೆ ‘ಸ್ಟಾಕ್‌ ಇಲ್ಲ’ ಎಂಬ ಉತ್ತರ ಬರುತ್ತಿದ್ದು ಯೂರಿಯಾ ಗೊಬ್ಬರ ಜತೆಗೆ ಬೇರೆ ಗೊಬ್ಬರ, ಕೀಟನಾಶಕ ಖರೀದಿಸುತ್ತೇನೆಂದರೆ ಮಾತ್ರ ಯೂರಿಯಾ ಗೊಬ್ಬರ ಸಿಗುವಂತಹ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಅಧಿಕಾರಿಗಳು ಹಾಗೂ ವರ್ತಕರನ್ನು ರೈತರು ಸಂಶಯ ದೃಷ್ಟಿಯಿಂದ ನೋಡುವಂತಾಗಿದೆ.

ಹೇಳಿಕೆ ಅಷ್ಟೇ, ಶಿಸ್ತು ಕ್ರಮವಿಲ್ಲ: ಬೀಜ, ಗೊಬ್ಬರವನ್ನು ನಿಗದಿತ ದರದಲ್ಲಿಯೇ ಮಾರಾಟ ಮಾಡಬೇಕು. ಚೀಲದ ಮೇಲೆ ನಮೂದಿಸಿರುವ ಬೆಲೆಗೆ ಮಾರಾಟ ಮಾಡಿ, ರಸೀದಿ ಕೊಡಬೇಕು. ತಪ್ಪಿದರೆ ಶಿಸ್ತು ಕ್ರಮ ಜರುಗಿಸುತ್ತೇವೆ ಎನ್ನುವ ಹೇಳಿಕೆಯನ್ನು ಪ್ರತಿ ವರ್ಷ ಕೃಷಿ ಅಧಿಕಾರಿಗಳು ಸಂಪ್ರದಾಯದಂತೆ ಮಾಧ್ಯಮಗಳ ಮೂಲಕ ಕೊಡುತ್ತಲೇ ಬಂದಿದ್ದಾರೆ. ಆದರೆ, ವಾಸ್ತವದಲ್ಲಿ ಈ ಸೂಚನೆ ಪಾಲನೆಯಾಗುತ್ತಲೇ ಇಲ್ಲ. ಕೆಲ ವರ್ತಕರು ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯುತ್ತಲೇ ಇದ್ದಾರೆ ಎಂಬ ಆರೋಪವೂ ವ್ಯಾಪಕವಾಗಿ ಕೇಳಿ ಬಂದಿದೆ.

ಕಾಳಸಂತೆಯಲ್ಲಿ ಮಾರಾಟ:ಯೂರಿಯಾ ಗೊಬ್ಬರ ಅಭಾವ ಪರಿಸ್ಥಿತಿಯನ್ನು ಮನಗಂಡ ಕೆಲ ಮಾರಾಟಗಾರರು ತಮ್ಮಲ್ಲಿರುವ ಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಯೂರಿಯಾ ಗೊಬ್ಬರ ಮಾರಲಾಗುತ್ತಿದೆ ಎಂಬ ವದಂತಿ ವ್ಯಾಪಕವಾಗಿ ಹಬ್ಬಿದೆ. ಇಷ್ಟಾದರೂ ಕೂಡ ಜಿಲ್ಲಾಡಳಿತ, ಕೃಷಿ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಅನ್ನದಾತರನ್ನು ಕೆರಳಿಸಿದೆ.

ಗಡ್ಡಕ್ಕೆ ಬೆಂಕಿ ಹತ್ತಿದಾಗ: ಒಂದು ಕಾರ್ಯಕ್ರಮ ಮಾಡಬೇಕಾದರೆ ಹತ್ತಾರು ಪೂರ್ವಭಾವಿ ಸಭೆ ಮಾಡಿ ಚರ್ಚಿಸುವ ಅಧಿಕಾರಿಗಳು, ಬಹುಸಂಖ್ಯಾತ ರೈತವರ್ಗದ ಕೃಷಿ ಚಟುವಟಿಕೆ ಆರಂಭವಾಗುವ ಮುಂಗಾರು ಪೂರ್ವ ರೈತರೊಂದಿಗೆ ಒಂದೇ ಒಂದು ಸಭೆ ನಡೆಸುವುದಿಲ್ಲ. ರೈತರ ಬೇಕು ಬೇಡಿಕೆಗಳನ್ನು ಕೇಳುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಕೃಷಿ ಪರಿಕರ, ಸೌಲಭ್ಯಗಳನ್ನು ವ್ಯವಸ್ಥೆ ಮಾಡಿಕೊಳ್ಳಲು ಆಸಕ್ತಿ ವಹಿಸುವುದಿಲ್ಲ. ‘ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡಿದರು’ ಎನ್ನುವಂತೆ ಮಳೆ ಬಿದ್ದ ಮೇಲೆಯೇ ಕೃಷಿ ಬಗ್ಗೆ ಕಣ್ಣು ಹಾಯಿಸುವ ಅಧಿಕಾರಿಗಳ ನಡೆ ರೈತರ ಕಣ್ಣು ಕೆಂಪಾಗಿಸಿದೆ.

ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ಅಭಾವ ಇಲ್ಲ. ಜಿಲ್ಲೆಗೆ 28000 ಟನ್‌ ಯೂರಿಯಾ ಗೊಬ್ಬರ ಅಗತ್ಯವಿದ್ದು 29500 ಟನ್‌ ಸರಬರಾಜಾಗಿದೆ. ಇದರಲ್ಲಿ 25000ಟನ್‌ ವಿತರಣೆಯಾಗಿದ್ದು ಇನ್ನೂ 4500ಟನ್‌ ದಾಸ್ತಾನು ಇದೆ. ಈ ಬಾರಿ ಮಳೆ ವಿಳಂಬವಾಗಿದ್ದರಿಂದ ಹೆಚ್ಚಿನ ರೈತರು ಮೆಕ್ಕೆಜೋಳದತ್ತ ವಾಲಿದ್ದಾರೆ. ಹೀಗಾಗಿ ಈ ಬಾರಿ ಇನ್ನಷ್ಟು ಯೂರಿಯಾ ಬೇಕಾಗುವ ಸಾಧ್ಯತೆ ಇರುವುದರಿಂದ ಬೇರೆ ಜಿಲ್ಲೆಯಿಂದ ತರಿಸುವ ವ್ಯವಸ್ಥೆ ಮಾಡುತ್ತಿದ್ದೇವೆ. ಯೂರಿಯಾ ಅಭಾವ ಸೃಷ್ಟಿಸುವವರ ಬಗ್ಗೆ ರೈತರು ಮಾಹಿತಿ ನೀಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಮಂಜುನಾಥ,
ಜಂಟಿ ನಿರ್ದೇಶಕರು, ಕೃಷಿ ಇಲಾಖೆ

ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ಅಭಾವ ಸೃಷ್ಟಿಯಾಗಿದೆ. ಇದು ಕೃತಕ ಅಭಾವವೋ, ವಾಸ್ತವ ಸ್ಥಿತಿಯೋ ಗೊತ್ತಾಗುತ್ತಿಲ್ಲ. ಕೆಲ ಅಂಗಡಿಗಳಲ್ಲಿ ಯೂರಿಯಾ ಜತೆ ಬೇರೆ ಗೊಬ್ಬರ ಖರೀದಿಸಿದರಷ್ಟೇ ಯೂರಿಯಾ ಸಿಗುತ್ತಿದೆ. ಇನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಈ ಹಿಂದೆ ಗೊಬ್ಬರಕ್ಕಾಗಿಯೇ ನಡೆದ ಹೋರಾಟದಲ್ಲಿ ಗೋಲಿಬಾರ್‌ ನಡೆದಿತ್ತು. ಈಗ ಮತ್ತೆ ರೈತರು ಯೂರಿಯಾ ಗೊಬ್ಬರಕ್ಕಾಗಿ ಹೋರಾಟ ಮಾಡುವ ಪರಿಸ್ಥಿತಿ ಬಂದಿರುವುದು ಖೇದಕರ.
ಮಲ್ಲಿಕಾರ್ಜುನ ಬಳ್ಳಾರಿ,
 ರೈತ ಮುಖಂಡ

ಕೃತಕ ಅಭಾವ ಶಂಕೆ
ಕೃಷಿ ಇಲಾಖೆ ‘ಯೂರಿಯಾ ಗೊಬ್ಬರ ದಾಸ್ತಾನು ಇದೆ’ ಎಂದರೆ ರಸಗೊಬ್ಬರ ವ್ಯಾಪಾರಸ್ಥರು ಮಾತ್ರ ‘ಯೂರಿಯಾ ಗೊಬ್ಬರ ದಾಸ್ತಾನು ಇಲ್ಲ’ ಎನ್ನುತ್ತಿದ್ದಾರೆ. ಈ ದ್ವಂದ್ವ ಹೇಳಿಕೆಯಿಂದ ಮಾರುಕಟ್ಟೆಯಲ್ಲಿ ನಿಜವಾಗಿಯೂ ಯೂರಿಯಾ ಕೊರತೆ ಇದೆಯೋ ಅಥವಾ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆಯೋ ಎಂಬ ಶಂಕೆ ಮೂಡಿಸಿದೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.