- Tuesday 10 Dec 2019
ಶೀಘ್ರದಲ್ಲೇ ಕೆರೆಗಳಿಗೆ ಭದ್ರಾ ನೀರು: ಚಂದ್ರಪ್ಪ
ಭದ್ರಾ ಮೇಲ್ದಂಡೆ ಯೋಜನೆ ಅಡಿ ಹಳ್ಳಿಗಳಿಗೆ ಶಾಶ್ವತವಾಗಿ ನೀರಿನ ಸೌಲಭ್ಯ
Team Udayavani, Jun 26, 2019, 5:17 PM IST
ಹೊಳಲ್ಕೆರೆ: ಭೂಸ್ವಾಧೀನದಾರರ ಅಹವಾಲು ಸ್ವೀಕಾರ ಸಭೆಯಲ್ಲಿ ಶಾಸಕ ಎಂ. ಚಂದ್ರಪ್ಪ ಮಾತನಾಡಿದರು.
ಹೊಳಲ್ಕೆರೆ: ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ರೈತರು ಮುಕ್ತ ಮನಸ್ಸಿನಿಂದ ನೀರಾವರಿ ಸೌಲಭ್ಯ ಕಲ್ಪಿಸಿಕೊಡಲು ಭೂಮಿ ನೀಡಲುಸಿದ್ಧರಿದ್ದಾರೆ. ಹಾಗಾಗಿ ತಾಲೂಕಿನ ಕೆರೆಗಳಿಗೆ ಶೀಘ್ರದಲ್ಲೇ ಭದ್ರಾ ನೀರು ಹರಿಯಲಿದೆ ಎಂದು ಶಾಸಕ ಎಂ. ಚಂದ್ರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಚನ್ನಸಮುದ್ರ ಗ್ರಾಮದ ಸಿದ್ಧರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಡೆದ ಭೂಸ್ವಾಧೀನದಾರರ ಅಹವಾಲು ಸ್ವೀಕಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲೆ ನೂರು ವರ್ಷಗಳ ಇತಿಹಾಸದಲ್ಲಿ 76 ವರ್ಷ ಬರಗಾಲವನ್ನು ಕಂಡಿದೆ. ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಜಿಲ್ಲೆಗೆ ಭದ್ರಾ ನೀರು ಹರಿಸಬೇಕೆಂದು ಕನಸು ಕಂಡಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 650 ಕೋಟಿ ರೂ. ಅನುದಾನ ನೀಡಿ ಕಾಮಗಾರಿಗೆ ಚಾಲನೆ ನೀಡಿದ್ದರು. ಅಧಿಕಾರಿಗಳ ನಿರಾಸಕ್ತಿಯ ಪರಿಣಾಮ ಅನುಷ್ಠಾನದಲ್ಲಿ ವಿಳಂಬವಾಗಿತ್ತು. ಹೊಳಲ್ಕೆರೆ ಕಡೆಗೆ ಹೋಗುವ ಚಾನಲ್ ಕೆಲಸ ಶೇ. 75ರಷ್ಟು ಪೂರ್ಣಗೊಳ್ಳುವ ಹಂತದಲ್ಲಿದೆ. ಜನರು ಭೂಮಿ ನೀಡಿದ ತಕ್ಷಣ ಚಾನಲ್ ಪೂರ್ಣಗೊಳಿಸಿ ತಾಲೂಕಿನ ಕೆರೆಗಳಿಗೆ ನೀರು ಹರಿಸಲಾಗುತ್ತದೆ ಎಂದರು.
ಚನ್ನಸಮುದ್ರ, ಬೊಮ್ಮನಹಳ್ಳಿ ಸೇರಿದಂತೆ ಸುತ್ತಲಿನ ಹಳ್ಳಿಗಳಿಗೆ ಚಾನಲ್ ಹಾದು ಹೊಗುವುದರಿಂದ ಭೂಮಿಗೆ ಬೆಲೆ ಬಂದಿದೆ. ಈಗಿನ ಸರ್ಕಾರ 1/4 ರಷ್ಟು ಪರಿಹಾರ ನೀಡುತ್ತಿದೆ. ಪರಿಹಾರ ಕಡಿಮೆಯಾದರೆ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಹೇಳಿದರು. ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಅಡಿಕೆ ತೋಟಗಳು ನೀರಿಲ್ಲದೆ ಒಣಗುತ್ತಿವೆ. ಹಳ್ಳಿಗಳಲ್ಲಿ ಜನರು ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದಾರೆ. ನೀರಿಲ್ಲ ಎಂದರೆ ರೈತರಿಗೆ ಉಳಿಗಾಲವಿಲ್ಲ. ಹಾಗಾಗಿ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು.
ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಚುರುಕಾಗಿ ನಡೆಯುತ್ತಿದೆ. ಅದಕ್ಕಾಗಿ ರೈತರು ಜಮೀನು ನೀಡುವುದು ಅನಿವಾರ್ಯವಾಗಿದೆ. ಸರ್ಕಾರ ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕು. ಹೊಸದುರ್ಗ ಕ್ಷೇತ್ರದಲ್ಲಿ ರೈತರ ಜಮೀನುಗಳು ಜಾಸ್ತಿ ಪ್ರಮಾಣದಲ್ಲಿ ಭೂಸ್ವಾಧೀನಗೊಂಡಿವೆ. ಹಾಗಾಗಿ ಹೆಚ್ಚಿನ ಪರಿಹಾರಕ್ಕೆ ಹೋರಾಟ ನಡೆಸಬೇಕಿದೆ ಎಂದರು. ಅಪರ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಸುಮಾರು 35 ರೈತರ ಜಮೀನುಗಳನ್ನು ಗುರುತಿಸಿ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಗಂಗಮ್ಮ ಅವರ 30 ಗುಂಟೆ, ಶಿವಣ್ಣ ಅವರ 20 ಗುಂಟೆ ಹೊರತುಪಡಿಸಿದರೆ ಬೇರೆ ಎಲ್ಲ ಜಮೀನುಗಳು 10 ರಿಂದ 15 ಗುಂಟೆ ಇದೆ ಎಂದು ತಿಳಿಸಿದರು.
ಜಿಪಂ ಸದಸ್ಯ ಮಹೇಶ್, ಭೂಸ್ವಾಧಿಧೀನಾಧಿಕಾರಿ ಶ್ರೀಧರ್, ಮುಖ್ಯ ಇಂಜಿನಿಯರ್ ಸೋಮಶೇಖರ್, ತಹಶೀಲ್ದಾರ್ ನಾಗರಾಜ್, ಇಂಜಿನಿಯರ್ ಶಶಿಕಿರಣ್, ಎಲ್.ಬಿ. ರಾಜಶೇಖರ್ ಇದ್ದರು.
ಈ ವಿಭಾಗದಿಂದ ಇನ್ನಷ್ಟು
-
ದೇವನಹಳ್ಳಿ: ನಗರ, ತಾಲೂಕು ಸೇರಿದಂತೆ ಜಿಲ್ಲಾದ್ಯಂತ ಶ್ರೀರಾಮ ಭಕ್ತ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಬೆಳಿಗ್ಗೆಯಿಂದಲೇ ಆಂಜನೇಯಸ್ವಾಮಿ...
-
ಹೊಸಕೋಟೆ: ಪ್ರತಿಯೊಬ್ಬ ನಾಗರೀಕ ಪ್ರಜೆಯೂ ಕಾನೂನಿನ ಬಗ್ಗೆ ತಿಳಿವಳಿಕೆ ಹೊಂದಬೇಕಾದ್ದು ಅಗತ್ಯವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ವಿನಾಯಕ ಎನ್. ಮಾಯಣ್ಣನವರ್...
-
ಗುಂಡ್ಲುಪೇಟೆ: ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಯಲ್ಲಿರುವ ತಾಲೂಕಿನ ಆಡಿನಕಣಿವೆ ಗಿರಿಜನ ಕಾಲೋನಿಯಲ್ಲಿ ಅಗತ್ಯ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಮಂಗಲ ಗ್ರಾಮ...
-
ಹಾಸನ: ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಯ...
-
ಹುಣಸೂರು: ಕಷ್ಟ ಸಾಧ್ಯವಾದುದನ್ನು ಬಹಳ ಸುಲಭವಾಗಿ ಮಾಡುವುದೇ ಪ್ರತಿಭೆ ಎನಿಸಿದ್ದು, ಎಲ್ಲಾ ಮಕ್ಕಳಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ಇದನ್ನು ಶಿಕ್ಷಕರು...
ಹೊಸ ಸೇರ್ಪಡೆ
-
ಬೆಂಗಳೂರು: ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ 104 ಸ್ಥಾನ ಗೆದ್ದರೂ ಸರ್ಕಾರ ರಚಿಸಲಾಗದೆ 14 ತಿಂಗಳು ಪ್ರತಿಪಕ್ಷದಲ್ಲಿದ್ದು, ಬದಲಾದ ರಾಜಕೀಯ ಸನ್ನಿವೇಶದಲ್ಲಿ...
-
ಬೆಂಗಳೂರು: ಕೂಸು ಹುಟ್ಟುವ ಮುನ್ನ ಕುಲಾವಿ ಎಂಬಂತೆ ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರದ ಪತನದ ಕನಸು ಕಂಡಿದ್ದ ಕಾಂಗ್ರೆಸ್ ನಾಯಕರಿಗೆ ಮತದಾರ "ಶಾಕ್' ನೀಡಿದ್ದು,...
-
ಬೆಂಗಳೂರು: ಆಪರೇಷನ್ ಕಮಲ ಕಾರ್ಯಾಚರಣೆಯಡಿ ಮೂರು ಸ್ಥಾನ ಕಳೆದು ಕೊಂಡು ಐದು ಸ್ಥಾನ ಗೆಲ್ಲುತ್ತೇವೆಂದು ಉಪ ಸಮರದ ಅಖಾಡಗಿಳಿದಿದ್ದ ಜೆಡಿಎಸ್ ಶೂನ್ಯ ಸಂಪಾದನೆ...
-
ಹುಬ್ಬಳ್ಳಿ: ಬಿಜೆಪಿಗೆ ಬಲ ನೀಡುವ ತಾಣವೆಂದೇ ಗುರುತಿಸಿಕೊಂಡಿರುವ ಉತ್ತರ ಕರ್ನಾಟಕದಲ್ಲಿ, ಉಪ ಚುನಾವಣೆ ಫಲಿತಾಂಶದಿಂದ ಕಮಲ ಮತ್ತಷ್ಟು ಅರಳಿದೆ. ಪ್ರಸ್ತುತ...
-
ಬರ್ಹಿ/ಬೊಕಾರೋ: ಕರ್ನಾಟಕದ ವಿಧಾನಸಭೆಗೆ 2018ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಜನರ ತೀರ್ಪನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ತಿರುಚಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ...