ಹಬ್ಬದಾಚರಣೆಯಲ್ಲಿ ಕಾನೂನು ಉಲ್ಲಂಘಿಸದಿರಿ

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ: ಡಿವೈಎಸ್ಪಿ ಸಂತೋಷ್‌ಕುಮಾರ್‌

Team Udayavani, Sep 1, 2019, 3:23 PM IST

1-September-33

ಹೊಳಲ್ಕೆರೆ: ಗೌರಿ-ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ಚಿತ್ರದುರ್ಗ ಡಿವೈಎಸ್ಪಿ ಸಂತೋಷ್‌ಕುಮಾರ್‌ ಮಾತನಾಡಿದರು.

ಹೊಳಲ್ಕೆರೆ: ಗೌರಿಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಬೇಕೆಂಬುದು ಎಲ್ಲರ ಆಶಯವಾಗಿದೆ. ಪ್ರತಿಯೊಬ್ಬರೂ ಕಾನೂನು ಪಾಲನೆ ಮೂಲಕ ಹಬ್ಬವನ್ನು ಆಚರಿಸಲು ಪೊಲೀಸ್‌ ಇಲಾಖೆ ಸಹಕಾರ ನೀಡಲಿದೆ ಎಂದು ಚಿತ್ರದುರ್ಗ ಡಿವೈಎಸ್ಪಿ ಸಂತೋಷ್‌ಕುಮಾರ್‌ ತಿಳಿಸಿದರು.

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ನಡೆದ ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆಯ ಆಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಟ್ಟಣ ಹಾಗೂ ಹಳ್ಳಿಯ ವ್ಯಾಪ್ತಿಯಲ್ಲಿರುವ ಯಾವುದೇ ಸಂಘಟನೆಗಳು ‘ಬನಾಯೇಂಗೆ ಮಂದಿರ್‌’ ಹಾಡುಗಳನ್ನು ಹಾಕದಂತೆ ನಿರ್ಬಂಧಿಸಲಾಗಿದೆ. ಹಬ್ಬದಾಚರಣೆಯಿಂದ ಶಾಂತಿ, ಸೌಹಾರ್ದತೆ, ಪರಸ್ಪರ ವಿಶ್ವಾಸ, ಭಾವೈಕ್ಯತೆ ಸೃಷ್ಟಿಯಾಗಬೇಕು. ಹಬ್ಬಗಳನ್ನು ಹಿಂದೂ, ಮುಸ್ಲಿಂ, ಕ್ರೈಸ್ತ ಎನ್ನುವ ಭಾವನೆಯಿಂದ ಆಚರಣೆ ಮಾಡದೆ ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಸಂಘಟನಾತ್ಮಕವಾಗಿ ಮಾಡಬೇಕೆಂದರು.

ಪಟ್ಟಣದ ಶ್ರೀ ಗಜಾನನ ಉತ್ಸವ ಸಮಿತಿ ಹಮ್ಮಿಕೊಳ್ಳುವ 11 ದಿನಗಳ ಗಣೇಶೋತ್ಸವಕ್ಕೆ ಪೊಲೀಸ್‌ ರಕ್ಷಣೆ ನೀಡಲಾಗುತ್ತದೆ. ಜತೆಗೆ ಹಿಂದೂ ಮಹಾಗಣಪತಿ ವಿಸರ್ಜನೆಗೂ ಕಾನೂನು ಬದ್ಧವಾಗಿರುವ ರಕ್ಷಣೆ ನೀಡಲು ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಪ್ರತಿಯೊಬ್ಬರೂ ಕಾನೂನುಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡು ಸಮಾಜದಲ್ಲಿ ಆಶಾಂತಿ ಸೃಷ್ಟಿಸುವಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಾಲೂಕಿನಲ್ಲಿರುವ ಯಾವುದೇ ಹಳ್ಳಿಯಿಂದ ಪಟ್ಟಣದವರೆಗೆ ಎಲ್ಲಿಯೇ ಗಣಪತಿ ಪ್ರತಿಷ್ಠಾಪಿಸಿದ್ದರೂ ಬೆಸ್ಕಾಂ, ಪಟ್ಟಣ ಪಂಚಾಯತ್‌, ಗ್ರಾಮದ ವ್ಯಾಪ್ತಿರುವವರು ಗ್ರಾಪಂ ಅಧಿಕಾರಿ ಹಾಗೂ ಪೊಲೀಸ್‌ ಇಲಾಖೆಯಿಂದ ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು. ನಿರ್ಲಕ್ಷ್ಯ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಶಾಂತಿಸಭೆಯಲ್ಲಿ ತಹಶೀಲ್ದಾರ್‌ ನಾಗರಾಜ್‌, ಸಿಪಿಐ ರವೀಶ್‌, ಪಿಎಸ್‌ಐ ಮೋಹನ್‌, ಬೆಸ್ಕಾಂ ಇಂಜಿನಿಯರ್‌ ತಿಪ್ಪೇಸ್ವಾಮಿ, ಪಟ್ಟಣ ಪಂಚಾಯತ್‌ ಆರೋಗ್ಯಾಧಿಕಾರಿ ಪರಮೇಶ್ವರಪ್ಪ, ಗಜಾನನ ಸಮಿತಿ ಕಾರ್ಯಧ್ಯಕ್ಷ ಕೆ.ಸಿ. ರಮೇಶ್‌, ಪಪಂ ಸದಸ್ಯರಾದ ಬಿ.ಎಸ್‌. ರುದ್ರಪ್ಪ. ಪಿ.ಎಚ್. ಮುರುಗೇಶ್‌, ವಿಜಯ್‌, ಆಶೋಕ್‌, ವಿಜಯಸಿಂಹ ಖಟ್ರೋತ್‌,

ಸೈಯ್ಯದ್‌ ಸಜೀಲ್, ಸೈಯ್ಯದ್‌ ಮನ್ಸೂರ್‌, ಮುಖಂಡರಾದ ಜಯಸಿಂಹ ಖಟ್ರೋತ್‌, ಬಸವರಾಜ್‌ ಯಾದವ್‌, ನ್ಯಾಯವಾದಿ ಎಸ್‌. ವೇದಮೂರ್ತಿ, ಪತ್ರಕರ್ತ ಎಸ್‌.ಬಿ. ಶಿವರುದ್ರಪ್ಪ, ಹಿಂದೂ ಮಹಾಸಭಾ ಗಣಪತಿ ಉತ್ಸವದ ಮುಖಂಡ ಗಿರೀಶ್‌, ಶೇಖರ್‌, ನಟರಾಜ್‌ ಆಚಾರ್‌, ಮಂಜುನಾಥ, ಕಾಟಲಿಂಗಪ್ಪ ಮತ್ತಿತರರು ಭಾಗವಹಿಸಿದ್ದರು.

ಗಣಪತಿ ವಿಸರ್ಜನೆಗೆ ಡಿಜೆ ಸೌಂಡ್‌ ಸಿಸ್ಟಂ ಹಾಕಲು ಅವಕಾಶ ಇಲ್ಲ. ಗ್ರಾಮೀಣ ಭಾಗದಲ್ಲಿರುವ ಗಣೇಶೋತ್ಸವ ಸಮಿತಿಗಳು ವಿಸರ್ಜನೆ ಕಾಲಕ್ಕೆ ಎರಡು ಸಣ್ಣ ಮೈಕ್‌ ಬಳಸಬಹುದು. ಗಣಪತಿ ಮೂರ್ತಿಗಳ ವಿಸರ್ಜನೆಯನ್ನು ಸಂಜೆ 6 ಗಂಟೆಯೊಳಗೆ ಪೂರ್ಣಗೊಳಿಸಬೇಕು.
ಸಂತೋಷ್‌ಕುಮಾರ್‌,
  ಚಿತ್ರದುರ್ಗ ಡಿವೈಎಸ್ಪಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.