ಸಂಸ್ಕಾರ-ವಿವೇಕವಿಲ್ಲದ ಶಿಕ್ಷಣ ಅರ್ಥಹೀನ: ಗೋವಿಂದಪ್ಪ

ಅಧಿಕಾರ-ಅಂತಸ್ತಿಗಿಂತ ವ್ಯಕ್ತಿತ್ವವೇ ದೊಡ್ಡದು ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಲಿ

Team Udayavani, Jun 24, 2019, 5:08 PM IST

24-June-42

ಹೊಸದುರ್ಗ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಉದ್ಘಾಟಿಸಿದರು.

ಹೊಸದುರ್ಗ: ಪಕ್ಷ ಹಾಗೂ ಜಾತಿ ಆಧಾರಿತ ಅಂಶಗಳು ಪಠ್ಯಪುಸ್ತಕಗಳಲ್ಲಿ ಅಳವಡಿಕೆಯಾಗುತ್ತಿರುವುದು ಶಿಕ್ಷಣ ಕ್ಷೇತ್ರದ ಅಧಃಪತನಕ್ಕೆ ಕಾರಣವಾಗುತ್ತಿದೆ ಎಂದು ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ವಿಷಾದಿಸಿದರು.

ಪಟ್ಟಣದ ಶಿವಗಂಗಾ ಕಲ್ಯಾಣಮಂಟಪದಲ್ಲಿ ಕನಕ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ಭಾನುವಾರ ನಡೆದ ಕನಕ ಪ್ರತಿಭಾ ಪುರಸ್ಕಾರ ಹಾಗೂ ಕನಕ ಕೃಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಥಮಿಕ ಹಂತದ ಶಿಕ್ಷಣ ಪದ್ಧತಿ ಹದಗೆಟ್ಟಿದೆ. ಒಂದನೇ ತರಗತಿಯಿಂದ ಪ್ರೌಢ ಶಿಕ್ಷಣದವರೆಗೂ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಪ್ರಕ್ರಿಯೆ ಶೈಕ್ಷಣಿಕ ವ್ಯವಸ್ಥೆಯನ್ನೇ ಅಣಕಿಸುವಂತಿದೆ.ಇದರಿಂದಾಗಿ ಸಾಕಷ್ಟು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಾಗುಣಿತ, ಅಕ್ಷರ ಜ್ಞಾನವೇ ಇರುವುದಿಲ್ಲ. ಇನ್ನು ಪರೀಕ್ಷೆಗಳಲ್ಲಿ ಪ್ರಶ್ನೆಗಳನ್ನೇ ತಪ್ಪಾಗಿ ನೀಡುವ ಶಿಕ್ಷಣ ತಜ್ಞರ ಬುದ್ಧಿವಂತಿಕೆ ಯಾವ ಮಟ್ಟಕ್ಕಿದೆ ಎಂಬುದನ್ನು ಊಹಿಸಲು ಸಾಧ್ಯವಾಗುತ್ತಿಲ್ಲ ಎಂದರು.

ಶಿಕ್ಷಣ ಮತ್ತು ಕೃಷಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ. ಸಂಸ್ಕಾರ, ವಿವೇಕವಿಲ್ಲದ ಶಿಕ್ಷಣ ಪ್ರಯೋಜನರಹಿತವಾದದ್ದು.ಸಂಸ್ಕಾರ, ಸಂಸ್ಕೃತಿ ಹೀನ ವ್ಯಕ್ತಿಯಿಂದ ಸಮಾಜದ ಪ್ರಗತಿಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕೆಟ್ಟ ನಡವಳಿಕೆ, ವರ್ತನೆಗಳು ಬದಲಾಗದಿದ್ದಲ್ಲಿ ಇಡೀ ಸಮಾಜವೇ ದೊಡ್ಡ ಅಪಾಯಎದುರಿಸಬೇಕಾಗುತ್ತದೆ. ಅಧಿಕಾರ, ಸ್ಥಾನಮಾನಕ್ಕಿಂತ ವ್ಯಕ್ತಿತ್ವ ದೊಡ್ಡದು ಎಂಬುದನ್ನು ಎಲ್ಲರೂ ಮನಗಾಣಬೇಕು ಎಂದು ತಿಳಿಸಿದರು.

ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಡಾ| ಕೆ. ಅನಂತ್‌ ಮಾತನಾಡಿ, ನೌಕರರು ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು. ವರ್ಷದಲ್ಲಿ ಎರಡು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಮಕ್ಕಳಲ್ಲಿ ಶಿಕ್ಷಣದ ಬಗ್ಗೆ ಪ್ರೀತಿ ಮೂಡುವಂತೆ ಮಾಡಬೇಕು. ಸಮುದಾಯದ ಶೈಕ್ಷಣಿಕ ಹಾಗೂ ಸಂಘಟನಾತ್ಮಕ ಬೆಳವಣಿಗೆಯ ಬಗ್ಗೆ ನೌಕರ ವರ್ಗದಲ್ಲಿ ಚರ್ಚೆಗಳಾಗಬೇಕು ಎಂದರು.

ಎನ್‌.ಆರ್‌. ಪುರ ಕನ್ನಡ ಸಾಹಿತ್ಯ ಪರಿಷತ್‌ ಕಾರ್ಯದರ್ಶಿ ಎಚ್. ಲೋಹಿತ್‌ಕುಮಾರ್‌ ಮಾತನಾಡಿ, ಹಿಂದುಳಿದ ವರ್ಗಕ್ಕೆ ಸೇರಿದವನೆಂಬ ಕಾರಣಕ್ಕೆ ಕನಕದಾಸರಿಗೆ ಸಮಾಜದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯದೇ ಇರುವುದು ವಿಷಾದನೀಯ. ಶ್ರೀಮಠದ ಮಾರ್ಗದರ್ಶನದಲ್ಲಿ ಮುನ್ನಡೆದರೆ ಸಮುದಾಯದ ಬೆಳವಣಿಗೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕನಕ ನೌಕರರ ಸಂಘದ ಅಧ್ಯಕ್ಷ ಎಂ. ಶಶಿಧರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ವಜ್ರಪ್ಪ, ತಾಲೂಕು ಕುರುಬರ ಸಂಘದ ಅಧ್ಯಕ್ಷ ನಾಗೇನಹಳ್ಳಿ ಮಂಜುನಾಥ್‌, ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಡಾ| ಎಂ.ಎಚ್. ಕೃಷ್ಣಮೂರ್ತಿ, ಕನಕ ಬ್ಯಾಂಕ್‌ ಉಪಾಧ್ಯಕ್ಷ ಡಾ| ಬಿ.ಎಚ್. ಹನುಮಂತಪ್ಪ, ತಾಪಂ ಸದಸ್ಯರಾದ ಕರಿಬಸಮ್ಮ, ದೇವರಾಜ್‌, ಬಾಗೂರು ಗ್ರಾಪಂ ಅಧ್ಯಕ್ಷ ಲೋಹಿತ್‌ಕುಮಾರ್‌, ಟಿಎಪಿಸಿಎಂಎಸ್‌ ನಿರ್ದೇಶಕ ಕಾರೇಹಳ್ಳಿ ಬಸವರಾಜ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಪ್ಪ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿ. ಮಹಂತಪ್ಪ, ಕೃಷಿ ಅಧಿಕಾರಿ ಈಶ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಓರಗಲ್ಲಪ್ಪ, ಗೊರವಿನಕಲ್ಲು ರಾಜಣ್ಣ, ಮಾಚೇನಹಳ್ಳಿ ರಾಮಕೃಷ್ಣ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.