ಸಿಪಿಐಎಂ ಕಾರ್ಯಕರ್ತರ ಪ್ರತಿಭಟನೆ

•ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು •ಕೇಂದ್ರ ಸರ್ಕಾರದ ಕ್ರಮಕ್ಕೆ ವಿರೋಧ-ಖಂಡನೆ

Team Udayavani, Aug 8, 2019, 5:03 PM IST

ಹೊಸಪೇಟೆ: ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಸಿಪಿಐಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹೊಸಪೇಟೆ: ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿ ಮತ್ತು 35(ಎ)ಪರಿಚ್ಚೇದದಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಸಿಪಿಐಎಂ ತಾಲೂಕು ಘಟಕದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಶ್ರಮಿಕ ಭನದ ಮುಂಭಾಗದಲ್ಲಿ ಜಮಾವಣೆಗೊಂಡ ಸಿಪಿಐಎಂ ಕಾರ್ಯಕರ್ತರು, ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕೇಂದ್ರ ನಿರ್ಧಾರ ಜನ ವಿರೋಧಿಯಾಗಿದೆ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿದರು.

ಕೇಂದ್ರ ಸರಕಾರ ಜಮ್ಮು ಕಾಶ್ಮೀರದ 370ನೇ ವಿಧಿ ಹಾಗೂ 35ಎ ರದ್ದು ಮಾಡಿದೆ. ಇದನ್ನು ತರಾತುರಿಯಲ್ಲಿ ಮಾಡಿದೆ. ಈ ನಡೆ ಅಲ್ಲಿನ ಸ್ವಯತ್ತೆಗೆ ಧಕ್ಕೆ ನೀಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಪಾಯದ ಎದುರಾಗುವ ಸ್ಥಿತಿ ಬರಬಹುದು. ಕೇಂದ್ರ ಸರಕಾರದ ಆರ್ಥಿಕ ಬಿಕ್ಕಟ್ಟನ್ನು ಎದುರಿಸದೇ ಭಾವನತ್ಮಕ ವಿಚಾರಗಳನ್ನು ಕೆದುಕುತ್ತಿದೆ ಎಂದು ಸಿಪಿಐ(ಎಂ) ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಭಾಸ್ಕರರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಎ.ಕರುಣಾನಿಧಿ, ಎಂ.ಜಂಬಯ್ಯನಾಯಕ, ಯಲ್ಲಾಲಿಂಗ, ಎಂ.ಗೋಪಾಲ, ಶಿವುಕುಮಾರ ಹಾಗೂ ಯಲ್ಲಮ್ಮ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ