ಶುದ್ಧ ಕುಡಿಯುವ ನೀರಿನ ಘಟಕ ಬಂದ್‌!

ಎಲ್ಲ ಘಟಕಗಳಿಗೆ ಬೀಗ•ಕಲುಷಿತ ನೀರು ಸೇವನೆಯಿಂದ ಜನ ಅಸ್ವಸ್ಥ•ಕ್ರಮಕ್ಕೆ ಒತ್ತಾಯ

Team Udayavani, May 25, 2019, 4:04 PM IST

25-May-23

ಹೊಸಪೇಟೆ: ನಗರದ 35 ವಾರ್ಡ್‌ ವಾಲ್ಮೀಕಿ ಕಲ್ಯಾಣ ಮಂಟಪ ಹಿಂಭಾಗದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಮುಚ್ಚಿರುವುದು.

ಹೊಸಪೇಟೆ: ಸುಡು ಬಿಸಿಲಿನ ತಾಪ, ಕುಡಿಯುವ ನೀರಿನ ಅಭಾವದ ನಡುವೆ ನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳು ದಿಢೀರ್‌ ಸ್ಥಗಿತಗೊಂಡು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.

ನಗರದ ವಿವಿಧೆಡೆ ಕಾರ್ಯನಿರ್ವಹಿಸುತ್ತಿದ್ದ 70ಕ್ಕೂ ಆಧಿಕ ಶುದ್ಧ ಕುಡಿಯುವ ಘಟಕಗಳನ್ನು ನಗರಸಭೆ ಮುಚ್ಚಿಸಿರುವ ಪರಿಣಾಮ ಸಾರ್ವಜನಿಕರು, ನೀರಿನ ಘಟಕ ಹುಡುಕಿಕೊಂಡು ತಿರುಗಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಅನುಮತಿ ಪಡೆಯದೆ ನೀರಿನ ಘಟಕಗಳನ್ನು ನಡೆಸಲಾಗುತ್ತಿದೆ ಎಂದು ನಗರಸಭೆ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮುಚ್ಚುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಒಂದೆರೆಡು ಬಿಟ್ಟರೆ, ಉಳಿದೆಲ್ಲ ಶುದ್ಧ ನೀರಿನ ಘಟಕಗಳ ಬಾಗಿಲಿಗೆ ಬೀಗ ಜಡಿಯಲಾಗಿದೆ. ಇದರಿಂದಾಗಿ ಸಾರ್ವಜನಿಕರು ಶುದ್ಧ ನೀರಿಗಾಗಿ ಸಾರ್ವಜನಿಕರು ಬೀದಿ, ಬೀದಿ ಅಲೆಯುವಂತಾಗಿದ್ದು, ನಗರಸಭೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ದಿನಕ್ಕೆ ಬೇಕಿದೆ 3.5ಲಕ್ಷ ಲೀಟರ್‌ ನೀರು: ನಗರದಲ್ಲಿ ಒಟ್ಟು 70 ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಪ್ರತಿ ನಿತ್ಯ ಮೂರುವರೆ ಲಕ್ಷ ಲೀಟರ್‌ ನೀರು ಖರ್ಚಾಗುತ್ತಿದೆ. 5 ರೂ. ಕ್ಕೆ 20 ಲೀಟರ್‌ ನೀರು ಮಾರಾಟ ಮಾಡುತ್ತವೆ. ಇತ್ತೀಚೆಗೆ ಕಡಿಮೆ ಬೆಲೆಯಲ್ಲಿ ಶುದ್ಧ ನೀರು ಸಿಗುವುದರಿಂದ ಘಟಕಗಳ ಮೇಲೆ ಜನರ ಅವಲಂಬನೆ ಹೆಚ್ಚಾಗಿದೆ.

ನಗರದ ವಿವಿಧ ಬಡಾವಣೆಯ ನಿವಾಸಿಗಳ ಜತೆಗೆ ರಸ್ತೆಬದಿಯ ಗೂಡಂಗಡಿಗಳು, ಸಣ್ಣ ಹೋಟೆಲ್ಗಳು ಘಟಕಗಳ ನೀರನ್ನೇ ಉಪಯೋಗಿಸುತ್ತಿದ್ದು, ಇದೀಗ ಪೇಚಿಗೆ ಸಿಲುಕಿದ್ದಾರೆ. ಕೆಲವು ಘಟಕಗಳು ನೀರು ಇಲ್ಲ ಎಂದು ಫ‌ಲಕ ಹಾಕಿದ್ದರೆ, ಮತ್ತೆ ಕೆಲವು ಘಟಕಗಳು ಸಂಪೂರ್ಣವಾಗಿ ಮುಚ್ಚಿವೆ. ಒಂದೆಡೆ ಸಿಗದಿದ್ದರೆ ಮತ್ತೂಂದು ಕಡೆಯಾದರೂ ಸಿಗಬಹುದು ಎಂದು ಜನ ಘಟಕದಿಂದ ಘಟಕಗಳಿಗೆ ಓಡಾಡಿದರೂ ನೀರು ಸಿಗದೇ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಮನೆ ದಾರಿ ಹಿಡಿಯುತ್ತಿದ್ದಾರೆ. ಎಂ.ಪಿ. ಪ್ರಕಾಶ್‌ ನಗರ, ಪಟೇಲ್ ನಗರ ಸೇರಿದಂತೆ ಕೆಲವೆಡೆ ಸಾರ್ವಜನಿಕರು ನೀರು ಕೊಡುವಂತೆ ಒತ್ತಾಯ ಮಾಡಿದರು. ಈಗ ಕಡು ಬೇಸಿಗೆ. ಇಂತಹ ಸಂದರ್ಭದಲ್ಲಿ ಘಟಕಗಳನ್ನು ಮುಚ್ಚಿಸಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಘಟಕಗಳ ಮಾಲೀಕರು ವಾಸ್ತವ ಸ್ಥಿತಿ ಕುರಿತು ಮನವರಿಕೆ ಮಾಡಿಕೊಡಲು ಯತ್ನಿಸಿದರು.

ಈಗಲೂ ನಗರದ ಅನೇಕ ಕಡೆಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದೆ. ಇತ್ತೀಚೆಗೆ ಚಿತ್ತವಾಡ್ಗಿಯಲ್ಲಿ ಅನೇಕ ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಅವುಗಳಿಗೆ ಮುಕ್ತಿ ಹಾಡಬೇಕು. ಜನರಿಗೆ ಯಾವುದೇ ರೀತಿಯ ಸಮಸ್ಯೆಯಿಲ್ಲದೆ ಶುದ್ಧ ಕುಡಿಯುವ ನೀರು ಪೂರೈಸುವ ಕೆಲಸವಾಗಬೇಕು ಎಂದು ಒತ್ತಾಯಿಸಿದರು.

ನೀರಿನ ಘಟಕಗಳನ್ನು ಮುಚ್ಚಿಸಿರುವುದ ರಿಂದ ಜನರಿಗೆ ಎಷ್ಟು ತೊಂದರೆ ಆಗುತ್ತಿದೆ ಎನ್ನುವುದು ಜಿಲ್ಲಾಧಿಕಾರಿಗಳಿಗೆ ಗೊತ್ತಾಗುತ್ತಿಲ್ಲ. ಒಂದು ವೇಳೆ ಸಮಸ್ಯೆ ಗೊತ್ತಾಗಿದ್ದರೆ ಬೇಸಿಗೆಯಲ್ಲಿ ಘಟಕಗಳನ್ನು ಮುಚ್ಚಿಸಿರುತ್ತಿರಲಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಹೋಟೆಲ್ ನಲ್ಲಿ ನಿತ್ಯ ಎಂಟರಿಂದ ಹತ್ತು ಕ್ಯಾನ್‌ ನೀರು ಖರ್ಚಾಗುತ್ತದೆ. 5 ರೂ. ಒಂದು ಕ್ಯಾನ್‌ (20 ಲೀಟರ್‌ ) ನೀರು ಖರೀದಿಸುತ್ತೇನೆ. ಈಗ ಖಾಸಗಿ ಘಟಕಗಳು ಮುಚ್ಚಿರುವುದರಿಂದ ಸಮಸ್ಯೆಯಾಗುತ್ತಿದೆ. ಖಾಸಗಿ ಘಟಕಗಳು ತೆರೆಯುವವರೆಗೆ ಹೋಟೆಲ್ ಬಂದ್‌ ಮಾಡಲು ತೀರ್ಮಾನಿಸಿದ್ದೇನೆ.
ಮಾಲೀಕ ಮಂಜುನಾಥಗೂಡಂಗಡಿ
ಹೋಟೆಲ್ ಮಾಲೀಕರು

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.