ದಿಢೀರ್‌ ಏರಿಕೆ ಕಂಡ ತುಂಗಭದ್ರಾ ಒಳಹರಿವು

ಮುಂಗಾರು ಹಂಗಾಮಿಗೆ ನೀರು ಬಿಡುಗಡೆ

Team Udayavani, Aug 8, 2019, 10:57 AM IST

ಹೊಸಪೇಟೆ: ಮೈದುಂಬಿಕೊಂಡಿರುವ ತುಂಗಭದ್ರಾ ಜಲಾಶಯ.

ಹೊಸಪೇಟೆ: ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿ, ತುಂಗಭದ್ರಾ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಬುಧವಾರ ಸಂಜೆ ದಿಢೀರ್‌ ಏರಿಕೆ ಕಂಡಿದ್ದು, 1 ಲಕ್ಷ ಕ್ಯೂಸೆಕ್‌ನಷ್ಟು ನೀರು ಹರಿದು ಬರುತ್ತಿದೆ.

ಕಳೆದ ವಾರದಿಂದ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದಾಗಿ ಈಗಾಗಲೇ ತುಂಗ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ 1ಲಕ್ಷ ಕ್ಯೂಸೆಕ್ಸ್‌ ನೀರು ಹರಿಬಿಡಲಾಗಿದೆ. ಈ ಹಿನ್ನಲೆಯಲ್ಲಿ ತುಂಗಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣ ದ್ವಿಗುಣಗೊಂಡಿದೆ. ಇದೇ ರೀತಿ ಒಳ ಹರಿವು ಹರಿದು ಬಂದಲ್ಲಿ ಇನ್ನು ನಾಲ್ಕಾರು ದಿನಗಳಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆಯಿದೆ ಎಂದು ತುಂಗಭದ್ರಾ ಮಂಡಳಿ ಮೂಲಗಳು ತಿಳಿಸಿವೆ.

ಮುಂಗಾರು ಹಂಗಾಮಿಗೆ ನೀರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕೃಷಿ ಚಟುವಟಿಕೆಗಾಗಿ ತುಂಗಭದ್ರಾ ಜಲಾಶಯದ ಎಲ್ಲ ಕಾಲುವೆಗಳಿಗೆ ಒಟ್ಟು 9800 ಕ್ಯೂಸೆಕ್‌ ನೀರು ಹರಿಸಲು ಕರ್ನಾಟಕ ನೀರಾವರಿ ನಿಗಮದ ತುಂಗಭದ್ರಾ ಯೋಜನಾ ವೃತ್ತ ನಿರ್ಧರಿಸಿದೆ.

ಅಚ್ಚುಕಟ್ಟು ಪ್ರದೇಶದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ, ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆ (ಎಚ್.ಎಲ್.ಸಿ.), ಕೆಳಮಟ್ಟದ ಕಾಲುವೆ (ಎಲ್.ಎಲ್.ಸಿ.) ವಿಜಯನಗರ ಕಾಲುವೆಗಳಿಗೆ ನೀರು ಹರಿಸಲು ಸರ್ಕಾರ ಅನುಮತಿ ಕೊಟ್ಟಿದ್ದು, ಜಲಾಶಯದಲ್ಲಿ ನೀರಿನ ಲಭ್ಯತೆ ಅನುಗುಣವಾಗಿ ಕಾಲುವೆಗಳಿಗೆ 9800 ಕ್ಯೂಸೆಕ್‌ ನೀರು ಹರಿಸಲು ತೀರ್ಮಾನಿಸಲಾಗಿದೆ.

ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಒಳಹರಿವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕೃಷಿ ಚಟುವಟಿಕೆಗೆ ನೀರು ಹರಿಸಲು ಸರ್ಕಾರ ಸಮ್ಮತಿ ಸೂಚಿಸಿದೆ. ರೈತಬಾಂಧವರು, ವಿನಾಕಾರಣ ನೀರು ಪೋಲು ಮಾಡದೇ ನೀರು ಲಘು ನೀರಾವರಿ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು ಎಂದು ತುಂಗಭದ್ರಾ ಯೋಜನೆ ಸೂಪರಿಟೆಂಡೆಂಟ್ ಇಂಜಿನಿಯರ್‌ ಮನವಿ ಮಾಡಿದ್ದಾರೆ.

ಸದ್ಯ ಜಲಾಶಯದಲ್ಲಿ 40 ಟಿ.ಎಂ.ಸಿ. ಅಡಿಗೂ ಅಧಿಕ ನೀರಿನ ಸಂಗ್ರಹವಿದೆ. ಪ್ರಸ್ತುತ 40 ಸಾವಿರ ಕ್ಯುಸೆಕ್‌ಗೂ ಹೆಚ್ಚು ಒಳಹರಿವು ಇದೆ. ಸಚಿವ ಸಂಪುಟ ಬಳಿಕ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಯಾವ ಕಾಲುವೆಗಳಿಗೆ ಎಷ್ಟು ಪ್ರಮಾಣದಲ್ಲಿ, ಎಷ್ಟು ದಿನಗಳ ವರೆಗೆ ನೀರು ಹರಿಸಬೇಕು ಎಂಬ ಕುರಿತು ತೀರ್ಮಾನವಾಗಲಿದೆ.

6 ಟಿ.ಎಂ.ಸಿ ಅಡಿಗೂ ಅಧಿಕ ನೀರು
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರಿ ಹೆಚ್ಚಳ ಉಂಟಾಗಿದೆ. ಬುಧವಾರ ಬೆಳಗ್ಗೆ 40.135 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಸದ್ಯ ಜಲಾಶಯದಲ್ಲಿ 40.135 ಟಿ.ಎಂ.ಸಿ. ಅಡಿ ನೀರು ಸಂಗ್ರಹವಾಗಿದೆ. ಸೋಮವಾರ 16,736 ಕ್ಯುಸೆಕ್‌ ಒಳಹರಿವು ಇತ್ತು. 34.82 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿತ್ತು. ಎರಡು ದಿನದಲ್ಲಿ 6 ಟಿ.ಎಂ.ಸಿ. ಅಡಿಗೂ ಅಧಿಕ ನೀರು ಬಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ