ಟಿಬಿ ಡ್ಯಾಂನಿಂದ ನದಿಗೆ ಲಕ್ಷ ಕ್ಯೂಸೆಕ್‌ ನೀರು

Team Udayavani, Sep 8, 2019, 6:29 PM IST

ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ಶನಿವಾರ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರನ್ನು ಹೊರಬಿಡಲಾಗಿದೆ. ಒಳ ಹರಿವು ಹೆಚ್ಚಿದ ಪರಿಣಾಮ ಜಲಾಶಯದ 30 ಕ್ರಸ್ಟ್‌ ಗೇಟ್ ತೆರೆದು ನೀರನ್ನು ನದಿಗೆ ಹರಿಬಿಡಲಾಗಿದೆ.

ಮಲೆನಾಡು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಜಲಾಶಯದ ಒಳಹರಿವು ಹೆಚ್ಚುತ್ತಲೇ ಇದೆ. ಶನಿವಾರ 1 ಲಕ್ಷ ಕ್ಯೂಸೆಕ್‌ ಗೂ ಅಧಿಕ ನೀರು ಜಲಾಶಯಕ್ಕೆ ಹರಿದುಬಂದಿದೆ. ಒಳ ಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆ ಇರುವುದರಿಂದ ಜಲಾಶಯದಲ್ಲಿ ನೀರಿನ ಸಮತೋಲನ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗಿದೆ. ನದಿಗೆ ಹೆಚ್ಚುವರಿ ನೀರು ಹರಿಬಿಟ್ಟಿರುವುದರಿಂದ ನದಿ ಪಾತ್ರದ ಗ್ರಾಮದ ಜನ ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತುಂಗಭದ್ರಾ ಜಲಮಂಡಳಿ ಅಧಿಕಾರಿಗಳು ಸೂಚಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ