ಎಲ್ಲೆಡೆ ಆಯುಷ್ಮಾನ್‌ ಯೋಜನೆ ಪಸರಿಸಲಿ

| ಚಿಕಿತ್ಸೆ ಪಡೆದವರೊಂದಿಗೆ ದೀಪಾವಳಿ ಆಚರಣೆ | 2,66,315 ಜನರಿಗೆ ಕಾರ್ಡ್‌ ವಿತರಣೆ | ನೋಂದಣಿಗೆ 102 ಕೇಂದ್ರ ಸ್ಥಾಪನೆ

Team Udayavani, Oct 31, 2019, 1:14 PM IST

31-October-13

ಹುಬ್ಬಳ್ಳಿ: ಆಯುಷ್ಮಾನ್‌ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕುರಿತು ಜಾಗೃತಿ ಹಾಗೂ ನೋಂದಣಿ ಮಾಡಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರು ಶಿಬಿರ ಆಯೋಜಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಇಲ್ಲಿನ ಭವಾನಿ ನಗರದ ಅವರ ನಿವಾಸದ ಮುಂಭಾಗದಲ್ಲಿ ಆಯುಷ್ಮಾನ್‌ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಚಿಕಿತ್ಸೆ ಪಡೆದವರೊಂದಿಗೆ ದೀಪಾವಳಿ ಹಬ್ಬದ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಯುಷ್ಮಾನ್‌ ಭಾರತ ಜಗತ್ತಿನಲ್ಲೇ ದೊಡ್ಡ ಆರೋಗ್ಯ ಯೋಜನೆಯಾಗಿದೆ. ದೇಶದಲ್ಲಿ ಈಗಾಗಲೇ ಸುಮಾರು 50 ಲಕ್ಷ ಜನರು ಈ ಯೋಜನೆಯಡಿ ಚಿಕಿತ್ಸೆ ಪಡೆದಿದ್ದು, ಸುಮಾರು 7,901 ಕೋಟಿ ರೂ. ಚಿಕಿತ್ಸಾ ವೆಚ್ಚ ಭರಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಬಡವರೂ ಕೂಡ ಚಿಕಿತ್ಸೆ ಪಡೆಯುವಂತಹ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಇನ್ನೂ ಸಾಕಷ್ಟು ಸಂಖ್ಯೆಯಲ್ಲಿ ನೋಂದಣಿಯಾಗಬೇಕಿದೆ.

ಜಿಲ್ಲೆಯಲ್ಲಿ 13 ಲಕ್ಷ ಜನರಿಗೆ ಕಾರ್ಡ್‌ ನೀಡಬೇಕಾಗಿದ್ದು, 2,66,315 ಜನರಿಗೆ ಮಾತ್ರ ಕಾರ್ಡ್‌ ನೀಡಲಾಗಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರು, ಸಾಮಾಜಿಕ ಕಾರ್ಯಕರ್ತರು ಈ ಯೋಜನೆ ಕುರಿತು ಜಾಗೃತಿ ಹಾಗೂ ನೋಂದಣಿ ಮಾಡಿಸುವ ನಿಟ್ಟಿನಲ್ಲಿ ವಿಶೇಷ ಶಿಬಿರ ಆಯೋಜಿಸಬೇಕು ಎಂದರು.

ಬಿಪಿಎಲ್‌ ಹಾಗೂ ಎಪಿಎಲ್‌ ಕಾರ್ಡ್‌ದಾರರು ಈ ಯೋಜನೆ ಪಡೆಯಬಹುದಾಗಿದೆ. ಬಿಪಿಎಲ್‌ ಕಾರ್ಡ್‌ ದಾರರಿಗೆ 5 ಲಕ್ಷ ರೂ. ಎಪಿಎಲ್‌ ಕಾರ್ಡ್‌ದಾರರಿಗೆ 1.5 ಲಕ್ಷ ರೂ. ವರೆಗೆ ಚಿಕಿತ್ಸೆ ವೆಚ್ಚ ಭರಿಸಲಾಗುವುದು. ಈ ಯೋಜನೆ ಪ್ರತಿಯೊಬ್ಬರಿಗೂ ತಲುಪಬೇಕು ಎನ್ನುವ ಕಾರಣಕ್ಕೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಪ್ರಧಾನ ಮಂತ್ರಿಗಳು ಸೂಚಿಸಿದ ಮೇರೆಗೆ ಆಯೋಜನೆ ಮಾಡಿದ್ದು, ಪ್ರತಿಯೊಂದು ವಾರ್ಡು ಹಾಗೂ ಗ್ರಾಮಗಳಲ್ಲಿ ಶಿಬಿರ ಆಯೋಜಿಸಿ ಕಾರ್ಡ್‌ ದೊರೆಯುವಂತೆ ಮಾಡಬೇಕು ಎಂದು
ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ| ಯಶವಂತ ಮಾತನಾಡಿ, ಜಿಲ್ಲೆಯಲ್ಲಿ 9,635 ಫಲಾನುಭವಿಗಳು ಇದರ ಲಾಭ ಪಡೆದಿದ್ದು, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಿಗೆ ಯೋಜನೆಯಡಿ 33 ಕೋಟಿ ರೂ. ಪಾವತಿಸಲಾಗಿದೆ. ಈ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರಕಾರಿ ಆಸ್ಪತ್ರೆಯಿಂದ ಶಿಫಾರಸು ಕಡ್ಡಾಯವಾಗಿರುತ್ತದೆ.

ಇಲ್ಲಿ ದೊರೆಯುವ ಸೌಲಭ್ಯಗಳನ್ನು ಪಡೆದ ನಂತರ ಇಲ್ಲದ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗುವುದು. ಫಲಾನುಭವಿಗಳು ಕಡ್ಡಾಯವಾಗಿ ಶಿಫಾರಸು ಪತ್ರ ಪಡೆದ ನಂತರ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು. ಈ ಯೋಜನೆಗೆ ನೋಂದಣಿ ಮಾಡಲು ಜಿಲ್ಲೆಯಲ್ಲಿ 102
ಕೇಂದ್ರಗಳಿದ್ದು, ಇನ್ನಷ್ಟು ಹೆಚ್ಚಿಸುವ ಚಿಂತನೆ ನಡೆದಿದೆ. ಯಾರಾದರೂ ಶಿಬಿರ ಆಯೋಜಿಸಲು ಮುಂದೆ ಬಂದರೆ ಎಲ್ಲಾ ವ್ಯವಸ್ಥೆ ಮಾಡಿಕೊಡಲಾಗುವುದು ಎಂದರು.

ಬಿಜೆಪಿ ಮುಖಂಡರಾದ ನಾಗೇಶ ಕಲಬುರ್ಗಿ, ಸುಧೀರ್‌ ಸರಾಫ್‌, ಡಾ| ಮಹೇಶ ನಾಲವಾಡ, ಡಿ.ಕೆ. ಚವ್ಹಾಣ, ಮಲ್ಲಿಕಾರ್ಜುನ ಸಾವಕಾರ, ಶಿವಾನಂದ ಮುತ್ತಣ್ಣವರ ಇನ್ನಿತರರಿದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.