8 ಸಾವಿರ ಕೋಟಿ ಉಪಕರ ಸಂಗ್ರಹ

ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಕಾರ್ಮಿಕರ ಕಲ್ಯಾಣಕ್ಕಾಗಿ ನಿಧಿ ಹಣ ಬಳಕೆ

Team Udayavani, Sep 5, 2019, 2:54 PM IST

5-spectember-15

ಹುಬ್ಬಳ್ಳಿ: ಧಾರವಾಡದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಅಸುನೀಗಿದ ಕಟ್ಟಡ ಕಾರ್ಮಿಕರ ಕುಟುಂಬದವರಿಗೆ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಪರಿಹಾರ ಧನ ಚೆಕ್‌ ವಿತರಿಸಿದರು.

ಹುಬ್ಬಳ್ಳಿ: ರಾಜ್ಯದಲ್ಲಿ ಕಟ್ಟಡ ನಿರ್ಮಾತೃಗಳಿಂದ 8,000 ಕೋಟಿ ರೂ. ಕಟ್ಟಡ ಕಾರ್ಮಿಕರ ಉಪಕರ ಸಂಗ್ರಹವಾಗಿದೆ. ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಮಂಡಳಿ ವತಿಯಿಂದ ಕಾರ್ಮಿಕರ ಕಲ್ಯಾಣಕ್ಕಾಗಿ ಈ ನಿಧಿ ಬಳಸಲಾಗುವುದು ಎಂದು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಹೇಳಿದರು.

ಇಲ್ಲಿನ ಗೋಕುಲ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಬುಧವಾರ ನಿರ್ಮಾತೃಗಳು ಹಾಗೂ ಗುತ್ತಿಗೆದಾರರೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಮಹಾರಾಷ್ಟ್ರ ನಂತರ ಕರ್ನಾಟಕದಲ್ಲಿ ಅತೀ ಹೆಚ್ಚು ಕಾರ್ಮಿಕ ಉಪಕರ ಸಂಗ್ರಹವಾಗಿದೆ. ಸುಪ್ರಿಂಕೋರ್ಟ್‌ ನಿರ್ದೇಶನದಂತೆ ಸಂಗ್ರಹವಾದ ಉಪಕರವನ್ನು ಕಾರ್ಮಿಕ ಕಲ್ಯಾಣ ಯೋಜನೆಗಳಿಗೆ ಬಳಸಲಾಗುವುದು. ರಾಜ್ಯದಲ್ಲಿ 20 ಲಕ್ಷ ನೋಂದಾಯಿತ ಕಾರ್ಮಿಕರಿದ್ದು, ಇದೂವರೆಗೆ ಮಂಡಳಿಯಿಂದ 500 ಕೋಟಿ ರೂ.ಗಳನ್ನು ಕಾರ್ಮಿಕರ ಕಲ್ಯಾಣಕ್ಕಾಗಿ ವಿನಿಯೋಗಿಸಲಾಗಿದೆ. ರಾಜ್ಯಾದ್ಯಂತ ಸುಮಾರು 5 ಲಕ್ಷಕ್ಕೂ ಅಧಿಕ ಕಾರ್ಮಿಕರು ಇದರ ಸದುಪಯೋಗ ಪಡೆದಿದ್ದಾರೆ ಎಂದರು.

ಬಹುತೇಕ ಅಸಂಘಟಿತ ಕಾರ್ಮಿಕರು ಮಂಡಳಿಯಲ್ಲಿ ನೋಂದಣಿ ಮಾಡಿಕೊಂಡಿಲ್ಲ. ನಿರ್ಮಾತೃಗಳು ಹಾಗೂ ಗುತ್ತಿಗೆದಾರರು ತಮ್ಮ ಬಳಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ತಪ್ಪದೇ ನೋಂದಣಿ ಮಾಡಿಸಬೇಕು. ರಾಜ್ಯದಲ್ಲಿ 21,19,399 ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಒಂದು ವರ್ಷದಲ್ಲಿ 90 ದಿನಗಳ ಕಾಲ ಕಟ್ಟಡ ಕಾರ್ಮಿಕ ಕೆಲಸದಲ್ಲಿ ತೊಡಗಿರುವವರು ಸೇವಾ ಸಿಂಧು ಅಂತರ್ಜಾಲ ಮೂಲಕ, ಫಾರ್ಮ್ ನಂ.5ರಡಿ ನೋಂದಣಿಗೆ ಅರ್ಜಿ ಸಲ್ಲಿಸಬಹುದು. ಒಮ್ಮೆ ನೋಂದಣಿ ಮಾಡಿದರೆ 3 ವರ್ಷಗಳ ಕಾಲ ನೋಂದಣಿ ಅಸ್ತಿತ್ವದಲ್ಲಿ ಇರುತ್ತದೆ. ನಂತರ ನೋಂದಣಿ ನವೀಕರಿಸಬೇಕು. ಪ್ರತಿವರ್ಷ 25 ರೂ. ಶುಲ್ಕ ಪಾವತಿಸಬೇಕಾಗುತ್ತದೆ ಎಂದರು.

ಮಂಡಳಿಯ ಕೆಲವು ನಿಯಮಾವಳಿಗೆ ತಿದ್ದುಪಡಿ ತರಲಾಗಿದ್ದು, ಕಾರ್ಮಿಕರು ನಿರ್ಮಾಣ ಸ್ಥಳದಲ್ಲಿ ಮೃತಪಟ್ಟರೆ 2 ಲಕ್ಷ ರೂ.ಗಳ ಪರಿಹಾರಧನ ನೀಡಲಾಗುವುದು. ಮಂಡಳಿಯಲ್ಲಿ ಶೈಕ್ಷಣಿಕ, ಮದುವೆ, ಅಂತ್ಯಸಂಸ್ಕಾರ, ವೈದ್ಯಕೀಯ, ಅಪಘಾತ, ಹೆರಿಗೆ, ಉಪಕರಣ ಖರೀದಿ ಸಾಲ, ಪಿಂಚಣಿ, ಅನಿಲ ಭಾಗ್ಯ ಸೇರಿದಂತೆ 15 ಸಾಮಾಜಿಕ ಕಲ್ಯಾಣ ಹಾಗೂ ಭದ್ರತಾ ಯೋಜನೆಗಳಿವೆ. ಮಂಡಳಿ ವತಿಯಿಂದ ಕಾರ್ಮಿಕರ ಮನೆ ನಿರ್ಮಾಣಕ್ಕೆ ನೀಡಲಾಗುತ್ತಿದ್ದ 5 ಲಕ್ಷ ರೂ.ಗಳ ಯೋಜನೆ ರದ್ದು ಪಡಿಸಲಾಗಿದೆ. ಕೇಂದ್ರ ಸರಕಾರ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಲ್ಲಿ 2022ರ ವೇಳೆಗೆ ಸರ್ವರಿಗೂ ಸೂರು ಯೋಜನೆ ಅನುಷ್ಠಾನಗೊಳಿಸಿರುವುದರಿಂದ ಈ ಯೋಜನೆ ಕೈಬಿಡಲಾಗಿದೆ. ಜತೆಗೆ ಸರಕಾರದ ಕೆಲ ಯೋಜನೆಗಳನ್ನು ಹೊರತುಪಡಿಸಿ ಮಂಡಳಿಯು ಕಾರ್ಮಿಕರ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಕಾರ್ಮಿಕ ಇಲಾಖೆಯಿಂದ ಮಂಡಳಿ ಬೇರ್ಪಡಿಸಲಾಗಿದೆ. ಇದರಿಂದ ಹೆಚ್ಚಿನ ಕಲ್ಯಾಣ ಕಾರ್ಯಕ್ರಮ ಕೈಗೊಳ್ಳಬಹುದು ಎಂದರು.

ಪರಿಹಾರ ಧನ ಚೆಕ್‌ ವಿತರಣೆ: ಧಾರವಾಡದ ಕುಮಾರೇಶ್ವರ ನಗರದಲ್ಲಿ ಮಾರ್ಚ್‌ 19ರಂದು ಸಂಭವಿಸಿದ ಬಹುಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಅಸುನೀಗಿದ ಕಟ್ಟಡ ಕಾರ್ಮಿಕರಾದ ಸಲೀಂಶಾ ಎಂ. ಮಕಾಂದಾರ, ಮಹಬೂಬಸಾಬ ಜಿ. ದೇಸಾಯಿ, ಮಹಬೂಬಸಾಬ್‌ ಬಡೇಸಾಬ್‌ ರಾಯಚೂರು, ವಾಘು ವಿಠuಲ ರೋಖೆ, ಜಹಾಂಗೀರಸಾಬ ಹರಿಹರ, ನವಲುದಾಡು ಅವರ ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಧನ ಚೆಕ್‌ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ನಿರ್ಮಾತೃಗಳು ಹಾಗೂ ಕಟ್ಟಡ ಕಾರ್ಮಿಕರು ತಮ್ಮ ಕೆಲ ಸಮಸ್ಯೆಗಳನ್ನು ಹೇಳಿದರು. ಸಂವಾದದಲ್ಲಿ ಕ್ರಡೈ ಅಧ್ಯಕ್ಷ ಸುರೇಶ ಶೇಜವಾಡಕರ, ಬೆಳಗಾವಿ ವಲಯದ ಉಪ ಕಾರ್ಮಿಕ ಆಯುಕ್ತ ವೆಂಕಟೇಶ, ಸಹಾಯಕ ಕಾರ್ಮಿಕ ಆಯುಕ್ತರಾದ ಮೀನಾ ಪಾಟೀಲ, ಅನುರಾಧ, ಗೋವಿಂದರಾಜ ಕುಲಕರ್ಣಿ, ರಾಮ ಮೋಹನ್‌ ಅಯ್ಯರ್‌ ಸೇರಿದಂತೆ ಇತರೆ ನಿರ್ಮಾತೃಗಳು ಹಾಗೂ ಗುತ್ತಿಗೆದಾರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.