ವೈದ್ಯರ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ

ಧಾರವಾಡದಲ್ಲಿ ಉತ್ತಮ ಸ್ಪಂದನೆ; ಹುಬ್ಬಳ್ಳಿಯಲ್ಲಿ ಸಿಗಲಿಲ್ಲ ಬೆಂಬಲ•ಖಾಸಗಿ ಆಸ್ಪತ್ರೆಗಳಲ್ಲಿ ಹೊರ ವಿಭಾಗ ಬಂದ್‌

Team Udayavani, Aug 1, 2019, 12:11 PM IST

ಧಾರವಾಡ: ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯ ಹೊರ ರೋಗಿಗಳ ವಿಭಾಗ ಬಂದ್‌ ಮಾಡಲಾಗಿತ್ತು.

ಹುಬ್ಬಳ್ಳಿ: ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ವಿಧೇಯಕ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿದ್ದ ದೇಶವ್ಯಾಪಿ ಮುಷ್ಕರಕ್ಕೆ ನರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ನಗರದಲ್ಲಿ 50ಕ್ಕೂ ಅಧಿಕ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳು, ಐಸಿಯು, ಇತರೆ ಸೇವೆಗಳು ಹೊರತು ಪಡಿಸಿ ಹೊರ ರೋಗಿಗಳ ವಿಭಾಗ ಸಂಪೂರ್ಣ ಬಂದ್‌ ಆಗಿತ್ತು. ಇದರಿಂದಾಗಿ ಕಿಮ್ಸ್‌ ಆಸ್ಪತ್ರೆ, ಪಾಲಿಕೆ ಆಸ್ಪತ್ರೆ ಹಾಗೂ ಎಸ್‌ಡಿಎಂ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಸಂಖ್ಯೆ ಪ್ರತಿದಿನಗಿಂತ ಶೇ.8-10ರಷ್ಟು ಮಾತ್ರ ಹೆಚ್ಚಾಗಿತ್ತು ಎಂದು ತಿಳಿದುಬಂದಿದೆ.

ಖಾಸಗಿ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಕಿಮ್ಸ್‌ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗದಲ್ಲಿ ರೋಗಿಗಳಿಗೆ ಗುರುವಾರ ಬೆಳಗಿನ 6:00ಗಂಟೆ ವರೆಗೆ ದಿನದ 24 ತಾಸು ಸೇವೆ ಒದಗಿಸಲು ವ್ಯವಸ್ಥೆ ಮಾಡಿಕೊಳ್ಳಲಾದ್ದು, ರಜೆಗೆ ತೆರಳಿದ್ದ ವೈದ್ಯರಲ್ಲಿ ಸೇವೆಗೆ ಅವಶ್ಯವುಳ್ಳವರನ್ನು ವಾಪಸು ಕರೆಯಿಸಿಕೊಳ್ಳಲಾಗಿದೆ.

ನಗರದಲ್ಲಿನ 50ಕ್ಕೂ ಅಧಿಕ ಖಾಸಗಿ ಆಸ್ಪತ್ರೆಗಳ ಹಾಗೂ 250ಕ್ಕೂ ಹೆಚ್ಚು ಕ್ಲಿನಿಕ್‌ಗಳ 800ಕ್ಕೂ ಅಧಿಕ ವೈದ್ಯರು ಇಂದಿನ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದರು. ಇದರಿಂದ ಕೆಲವು ರೋಗಿಗಳು ಚಿಕಿತ್ಸೆ ದೊರೆಯದೆ ಪರದಾಡಬೇಕಾಯಿತು. ಕಿಮ್ಸ್‌ ಆಸ್ಪತ್ರೆಯ ಒಪಿಡಿ ವಿಭಾಗದಲ್ಲೂ ಎಂದಿನಂತೆ ರೋಗಿಗಳಿದ್ದರೆ ಹೊರತು ಅಷ್ಟಾಗಿ ಕಾಣಸಿಕೊಳ್ಳಲಿಲ್ಲ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ