ಸಿಗದ ಸಹಾಯಧನ: ತಪ್ಪದ ಅಲೆದಾಟ

ಅಧಿಕಾರಿಗಳ ಕಾರ್ಯವೈಖರಿಗೆ ಬೇಸತ್ತ ಫಲಾನುಭವಿಗಳು •ನೆಪವೊಡ್ಡಿ ನುಣುಚಿಕೊಳ್ಳುತ್ತಿರುವ ಅಧಿಕಾರಿಗಳು

Team Udayavani, Jul 26, 2019, 1:02 PM IST

26-July-23

ಹುಮನಾಬಾದ: ಕಾರ್ಮಿಕ ನಿರೀಕ್ಷಕ ಕಚೇರಿಯಲ್ಲಿ ಕುಳಿತ ಅರ್ಜಿದಾರರು.

ಶಶಿಕಾಂತ ಕೆ.ಭಗೋಜಿ
ಹುಮನಾಬಾದ:
ಕಾರ್ಮಿಕ ಇಲಾಖೆಯಿಂದ ಲಭಿಸುವ ವಿವಿಧ ಸಹಾಯಧನ ಸಕಾಲಕ್ಕೆ ಫಲಾನುಭವಿಗಳ ಖಾತೆಗೆ ಬರದಿರುವುದರಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ನಿತ್ಯ ತಾಲೂಕು ಕಚೇರಿಗೆ ಅಲೆದು ಸುಸ್ತಾಗಿದ್ದಾರೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಿಂದ ದೊರೆಯುವ ವಿವಿಧ ಸೌಲಭ್ಯ ಬರಲಿ, ಬಾರದಿರಲಿ ಯೋಜನೆಗಳ ಕುರಿತು ಸಾರ್ವಜನಿಕ ಸ್ಥಳಗಳಲ್ಲಿ ದೊಡ್ಡದಾಗಿ ನಾಮಫಲಕ ಅಳವಡಿಸುವುದು ಮಾತ್ರ ತಪ್ಪುವುದಿಲ್ಲ. ಹಾಗೆ ಅಳವಡಿಸಿದ ನಾಮಫಲಕ ಗಮನಿಸಿ, ಬಡ ಕೂಲಿ ಕಾರ್ಮಿಕರು ಸರ್ಕಾರದಿಂದ ತಮಗೆ ಏನೆಲ್ಲ ಸೌಲಭ್ಯ ಸಿಗಬಹುದೆಂಬ ನಿರೀಕ್ಷೆಯಿಂದ ಇಲಾಖೆ ಕೇಳುವ ನಮೂನೆಯಲ್ಲಿ ಕಾರ್ಮಿಕರ ಗುರುತಿನ ಚೀಟಿ, ಮಕ್ಕಳ ವಿದ್ಯಾರ್ಥಿ ವೇತನ, ವಿವಾಹ ಸಹಾಯಧನ, ಮೃತಪಟ್ಟ ಹಾಗೂ ಅವರ ಅಂತ್ಯಕ್ರಿಯೆ ಸಂಬಂಧ ಸಿಗುವ ಸಹಾಯಧನಕ್ಕಾಗಿ ತಿಂಗಳುಗಟ್ಟಲೇ ಅಲೆಯುತ್ತಿದ್ದಾರೆ.

ಅಧಿಕಾರಿಗಳಿಗೆ ಶಾಪ: ಹೀಗೆ ಅಲೆದಾಡುವ ಕಾರ್ಮಿಕರಿಗೆ ಸಹಾಯಧನ ಖಾತೆಗೆ ಜಮಾ ಆಗುವ ಖಚಿತ ದಿನಾಂಕದ ಮಾಹಿತಿ ನೀಡದಿರುವ ಕಾರಣ ಇಂದು ಹೇಳಬಹುದು, ನಾಳೆ ಹೇಳಬಹುದೆಂಬ ನಿರೀಕ್ಷೆಯಿಂದ ಅಧಿಕಾರಿಗಳು ನೀಡುವ ಭರವಸೆಗಳಿಗೆ ಬೇಸತ್ತು ಹಿಡಿಶಾಪ ಹಾಕುತ್ತಿದ್ದಾರೆ.

ಗೂಬೆ ಕೂರಿಸುವ ಕೆಲಸ: ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದರೂ ತಮ್ಮ ಖಾತೆಗೆ ಹಣ ಜಮಾ ಆಗದಿರುವ ಕುರಿತು ಬ್ಯಾಂಕ್‌ ಅಧಿಕಾರಿಗಳನ್ನು ವಿಚಾರಿಸಿದರೆ ಇದರಲ್ಲಿ ನಮ್ಮದೇನೂ ಇಲ್ಲ, ಸಂಬಂಧಪಟ್ಟವರು ಹಣ ಜಮಾ ಮಾಡಿದರೆ ತಕ್ಷಣ ಕೊಡುತ್ತೇವೆ ಎನ್ನುತ್ತಿದ್ದಾರೆ.

ತಾಲೂಕು ಅಧಿಕಾರಿಗಳನ್ನು ವಿಚಾರಿಸಿದರೆ ನಾವು ಕಳಿಸಿದ್ದೇವೆ. ನಮ್ಮ ಮೇಲೆ ವಿಶ್ವಾಸ ಇಲ್ಲದಿದ್ದರೆ ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿಗಳಿಗೆ ಕೇಳಿ ಎನ್ನುತ್ತಿದ್ದಾರೆ. ಈ ಕುರಿತು ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿಗಳನ್ನು ವಿಚಾರಿಸಿದರೆ ನಿಮ್ಮ ತಾಲೂಕು ಅಧಿಕಾರಿಗಳು ಅರ್ಜಿಗಳನ್ನು ವಿಳಂಬವಾಗಿ ಕಳಿಸಿದ್ದಾರೆ. ಹಾಗಾಗಿ ವಿಳಂಬವಾಗುತ್ತಿದೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಹೀಗೆ ಅಧಿಕಾರಿಗಳು ಒಬ್ಬರ ಮೇಲೊಬ್ಬರು ಗೂಬೆ ಕೂರಿಸುವ ಮೂಲಕ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತ ವಿನಾಕಾರಣ ನಮ್ಮನ್ನು ಅಲೆದಾಡಿಸುತ್ತಿದ್ದಾರೆ ಎಂದು ಕಚೇರಿಗೆ ಕೆಲಸಕ್ಕೆ ಬಂದ ಐಶ್ವರ್ಯ, ಅಂಬೋಜಿ, ದೇವಾನಂದ, ದಿವ್ಯಾ ಮೊದಲಾದವರು ಆರೋಪಿಸಿದ್ದಾರೆ.

ವಿವಾಹ ಆಗುವವರಿಗೆ ನೀಡಲಾಗುವ 50 ಸಾವಿರ ಸಹಾಯಧನದ 50 ಅರ್ಜಿಗಳು, ವಿದ್ಯಾರ್ಥಿ ವೇತನ ಹಿನ್ನೆಲೆಯಲ್ಲಿ 2017-18 ಮತ್ತು 19ನೇ ಸಾಲಿನ ಅರ್ಜಿ ಸೇರಿ ಒಟ್ಟು 1527 ಅರ್ಜಿ ಬಂದಿವೆ. ಮರಣ ಹೊಂದಿರುವ ಕಾರ್ಮಿಕರ ಅವಲಂಬಿತರಿಗೆ ನೀಡಲಾಗುವ 50 ಸಾವಿರ ಮತ್ತು ಅಂತ್ಯಕ್ರಿಯೆ ಸಹಾಯಧನ 4 ಸಾವಿರ ಸೇರಿ ಒಟ್ಟು 54 ಸಾವಿರ ರೂ. ಸಹಾಯಧನಕ್ಕಾಗಿ 10ಕ್ಕೂ ಅಧಿಕ ಅರ್ಜಿ, ಗರ್ಭಿಣಿಯರ ಸಹಾಯಧನ ಕೋರಿ 5 ಅರ್ಜಿ ಬಂದಿವೆ. ಈ ವರೆಗೆ ಮಂಜೂರಿ ಸಿಕ್ಕಿದ್ದು ಮಾತ್ರ ಬೆರಳೆಣಿಕೆ ಕಾರ್ಮಿಕರಿಗೆ.

ಜಿಲ್ಲೆಯ ಬೀದರ, ಭಾಲ್ಕಿ, ಬಸವಕಲ್ಯಾಣ ಮತ್ತು ಔರಾದ ತಾಲೂಕುಗಳಿಂದ ಬಂದ ಶೇ.90 ಅರ್ಜಿಗಳು ಮಂಜೂರಾಗಿ ಈಗಾಗಲೇ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಈ ವಿಷಯದಲ್ಲಿ ಜಿಲ್ಲಾ ಅಧಿಕಾರಿಗಳು ಹುಮನಾಬಾದ್‌ ತಾಲೂಕನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದ್ದಾರೆ ಎಂದು ಕಾರ್ಮಿಕರು ಆರೋಪಿಸುತ್ತಿದ್ದಾರೆ.

ಫಲಾನುಭವಿಗಳಿಗೆ ಸೌಲಭ್ಯಗಳ ಬಗ್ಗೆ ಗೊಂದಲ ಇರದಂತೆ ಸ್ಪಷ್ಟ ಮಾಹಿತಿ ನೀಡುವುದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಕರ್ತವ್ಯ. ಅರ್ಜಿ ಸಲ್ಲಿಕೆ ಸಂದರ್ಭದಲ್ಲೇ ಸಲ್ಲಿಸಬೇಕಾದ ವಿಧಾನ, ಅರ್ಜಿ ಸಲ್ಲಿಕೆಗೆ ಇರುವ ಕಾಲಮಿತಿ, ಇತ್ಯಾದಿಗಳ ಬಗ್ಗೆ ಸ್ಪಷ್ಟ ಮಾರ್ಗದರ್ಶನ ನೀಡಿ, ಸಕಾಲಕ್ಕೆ ಮೇಲಧಿಕಾರಿಗಳಿಗೆ ಪಟ್ಟಿ ಕಳುಹಿಸಿ ಅಲೆದಾಡುವುದನ್ನು ತಪ್ಪಿಸಬೇಕು. ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆನ್ನುವುದು ಸಹಾಯಧನ ವಂಚಿತ ಕಾರ್ಮಿಕರ ಒತ್ತಾಸೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.