ಶಾಸಕರು ಸುಳ್ಳು ಹೇಳ್ಳೋದು ಬಿಡ್ಲಿ

ಆಧಾರ ರಹಿತ ಟೀಕೆ ಬಿಟ್ಟು ಅಭಿವೃದ್ಧಿ ಕಡೆ ಗಮನ ಹರಿಸಲಿ

Team Udayavani, Jul 7, 2019, 10:01 AM IST

07-July-3

ಜಗಳೂರು: ಮಾಜಿ ಶಾಸಕ ಎಚ್.ಪಿ. ರಾಜೇಶ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಗಳೂರು: ಹಾಲಿ ಶಾಸಕರು ಅಭಿವೃದ್ದಿಯ ಕಡೆ ಆಸಕ್ತಿ ತೋರುತ್ತಿಲ್ಲ. ಬಹು ಗ್ರಾಮ ಕುಡಿಯುವ ನೀರಿನ ಕಡತ ಇಲ್ಲ ಎಂದು ಜನತೆಗೆ ಸುಳ್ಳು ಹೇಳುತ್ತಿದ್ದಾರೆ. ಆ ಕಡತವನ್ನು ನಾನು ನೀಡುತ್ತೇನೆ. ಕಡತ ನೀಡಿದ ಮೇಲೆ ಶಾಸಕನ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕು. ಕಡತ ಸಿಗಲಿಲ್ಲವೆಂದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಶಾಸಕ ಎಚ್.ಪಿ ರಾಜೇಶ್‌ ಹಾಲಿ ಶಾಸಕರಿಗೆ ಸವಾಲು ಹಾಕಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಅಧಿಕಾರಾವಧಿಯಲ್ಲಿ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸಿಸಿ ರಸ್ತೆ, ಸಂಪರ್ಕ ರಸ್ತೆ ಸಮುದಾಯ ಭವನ ವಸತಿ ಶಾಲೆಗಳನ್ನು ನಿರ್ಮಿಸಿದ್ದೇನೆ. ನೂತನವಾಗಿ ಕೆರೆ ಮತ್ತು ಚೆಕ್‌ ಡ್ಯಾಂ ನಿರ್ಮಿಸಿದ್ದೇನೆ ಎಂದರು.

ಹಾಲಿ ಶಾಸಕರು ಆಧಾರರಹಿತವಾಗಿ ನನ್ನ ಮೇಲೆ ಟೀಕೆ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕೆಲಸ ಮಾಡಿ ತೋರಿಸಲಿ. 5 ಕೋಟಿ ರೂ. ಕೆರೆ ಕಾಮಗಾರಿ ಹೆಸರಿನಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ನಾವು 1.56 ಕೋಟಿ ರೂ. ವೆಚ್ಚದಲ್ಲಿ ಕೆರೆಯ ಸುತ್ತ ವಾಕ್‌ಪಾತ್‌, ತಡೆಗೋಡೆ, ನಿರ್ಮಿಸಿ ಸಂರಕ್ಷಿಸಲಾಗಿದ್ದು, 55 ಲಕ್ಷ ರೂ. ವೆಚ್ಚದಲ್ಲಿ ರಂಗಪುರ ಗ್ರಾಮದ ಸಮೀಪದ ಚೆಕ್‌ ಡ್ಯಾಂ ನಿರ್ಮಿಸಿ ಈ ಭಾಗದ ನೀರು ಕೆರೆಗೆ ಬರುವಂತೆ ಮಾಡಿದ್ದೇವೆ ಎಂದರು.

35 ಲಕ್ಷ ರೂ.ಗಳಲ್ಲಿ ಟ್ರೀ ಪಾರ್ಕ್‌ ಅಭಿವೃದ್ಧಿ ಮಾಡಲಾಗಿದೆ. ಟ್ರೀ ಪಾರ್ಕ್‌ನಲ್ಲಿ ಗೋಲ್ಮಾಲ್ ನಡೆದಿದೆ ಎಂದಿದ್ದಾರೆ. ಟ್ರೀ ಪಾಕ್‌ ರ್ ಕಾಮಗಾರಿ ಕುರಿತು ಎಸಿಬಿ, ಲೋಕಾಯುಕ್ತ ಸೇರಿ ಇಲಾಖಾ ವಿಚಾರಣೆ ನಡೆದಿದ್ದು, ಯಾವುದೇ ಹಗರಣ ನಡೆದಿಲ್ಲ ಎಂದು ಹೇಳಿದ್ದಾರೆ. ಇವರು ಕೂಡ ತನಿಖೆ ನಡೆಸಲಿ ಎಂದರು.

ಕೆಪಿಸಿಸಿ ಎಸ್‌ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಮಾತನಾಡಿ, ತಾಲೂಕಿನಲ್ಲಿ ಅಧಿಕಾರಿಗಳು ಕಚೇರಿಯಲ್ಲಿ ಕೆಲಸ ನಿರ್ವಹಿಸದೆ ಜನಸಾಮಾನ್ಯರನ್ನು ಅಲೆದಾಡಿಸುತ್ತಿದ್ದಾರೆ. ಅಲ್ಲದೆ ನಿತ್ಯ ಫೈಲ್ ಹಿಡಿದು ಶಾಸಕರ ಮನೆ ಮುಂದೆ ನಿಲ್ಲುತ್ತಾರೆ. ಹೀಗಾದರೆ ಜನಸಾಮಾನ್ಯರ ಸಮಸ್ಯೆ ಬಗೆಹರಿಸುವವರು ಯಾರು?. ಭೀಕರ ಬರಗಾಲದಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಅಭಾವ ಉಂಟಾಗಿದ್ದು, ಅದನ್ನು ನಿಭಾಯಿಸುವಲ್ಲಿ ತಾಲೂಕು ಆಡಳಿತ ವಿಫಲವಾಗಿ ನೆಪಮಾತ್ರಕ್ಕೆ ಗೋಶಾಲೆ ತೆರೆಯಲಾಗಿದೆ ಎಂದು ಆರೋಪಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ತಿಪ್ಪೇಸ್ವಾಮಿ ಗೌಡ, ಪ್ರಧಾನ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ತಾಪಂ ಉಪಾಧ್ಯಕ್ಷ ಮುದೇಗೌಡ್ರು ಬಸವರಾಜಪ್ಪ, ತಾಪಂ ಸದಸ್ಯ ಬಿದರಕೆರೆ ಬಸವರಾಜ್‌, ಯುವ ಕಾಂಗ್ರೆಸ್‌ ಉಪಾಧ್ಯಕ್ಷ ಗುಡ್ಡದಲಿಂಗನಹಳ್ಳಿ ನಾಗರಾಜ್‌, ಮುಖಂಡರಾದ ಬಿ.ಲೋಕೇಶ ,ಬೈರೇಶ್‌, ವೀರಣ್ಣಗೌಡ, ವೆಂಕಟೇಶ್‌ ಪ್ರಕಾಶ್‌, ದಾದಾಪೀರ್‌, ರೇಣುಕೇಶ್‌ ,ಆದರ್ಶ, ಯುಸೂಫ್‌ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.