ಗ್ರಾಪಂ ಸಭಾಂಗಣವೇ ಗ್ರಂಥಾಲಯಕ್ಕೆ ಆಸರೆ

ಸೊನ್ನದಲ್ಲಿ ಅರ್ಧಕ್ಕೆ ನಿಂತಿದೆ ಕಟ್ಟಡಗಾಳಿ-ಬೆಳಕಿಗಿಲ್ಲಿಲ್ಲ ಯಾವುದೇ ತೊಂದರೆ

Team Udayavani, Nov 23, 2019, 4:59 PM IST

23-November-29

ವಿಜಯಕುಮಾರ ಎಸ್‌.ಕಲ್ಲಾ
ಜೇವರ್ಗಿ:
ತಾಲೂಕಿನ ಸೊನ್ನ ಗ್ರಾಮದ ಜನತೆಯ ಜ್ಞಾನ ದೇಗುಲವಾದ ಗ್ರಂಥಾಲಯ ಕಟ್ಟಡ ಕಾಮಗಾರಿ ಏಳು ವರ್ಷ ಕಳೆದರೂ ಗ್ರಾ.ಪಂ ಆಡಳಿತದ ನಿರ್ಲಕ್ಷ್ಯದಿಂದ ಅರ್ಧಕ್ಕೆ ನಿಂತಿದೆ.

ಕಳೆದ 2012ರಲ್ಲಿ ಗ್ರಾ.ಪಂನ ಬಿಆರ್‌ಜಿಎಫ್‌ ಅನುದಾನದಡಿ 5 ಲಕ್ಷ ರೂ. ವೆಚ್ಚದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಆದರೆ ಗುತ್ತಿಗೆದಾರನ ಹಾಗೂ ಅ ಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಂಥಾಲಯ ಕಟ್ಟಡ ಮಾತ್ರ ಪೂರ್ಣಗೊಳ್ಳದೇ ಈವರೆಗೂ ಅರ್ಧಕ್ಕೆ ನಿಂತಿದೆ.

ಗ್ರಾಮ ಪಂಚಾಯತ ಕಾರ್ಯಾಲಯ ಪಕ್ಕದಲ್ಲೇ ಇರುವ ಗ್ರಂಥಾಲಯ ಕಟ್ಟಡಕ್ಕೆ ಅಡಿಪಾಯ ಹಾಕಿ ಅರ್ಧ ಗೋಡೆ ಕಟ್ಟಿದ್ದು ಬಿಟ್ಟರೆ ಇನ್ಯಾವ ಕೆಲಸವೂ ನಡೆದಿಲ್ಲ. ಗ್ರಾಮದಲ್ಲಿ 2003ರಲ್ಲಿ ಆರಂಭವಾಗಿರುವ ಗ್ರಂಥಾಲಯದಲ್ಲಿ ಸದ್ಯ 620 ಜನರು ಸದಸ್ಯತ್ವ ಪಡೆದಿದ್ದು, ಸದಸ್ಯತ್ವ ಪಡೆದವರಿಗೆ ಮೂರು ಪುಸ್ತಕಗಳನ್ನು 15 ದಿನಗಳವರೆಗೆ ನೀಡಲಾಗುತ್ತದೆ. ನಿತ್ಯ ಪತ್ರಿಕೆ ಹಾಗೂ ಪುಸ್ತಕ ಓದಲು 20ಕ್ಕೂ ಹೆಚ್ಚು ಓದುಗರು ಬರುತ್ತಿದ್ದಾರೆ. ಗ್ರಂಥಾಲಯದಲ್ಲಿ 3,525 ಪುಸ್ತಕಗಳಿದ್ದು, ಇದರಲ್ಲಿ ಸಾಹಿತ್ಯ, ಕಾದಂಬರಿ, ಕಥೆ, ಹನಿಗವನ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲ ಆಗುವಂತ ಪುಸ್ತಕಗಳಿವೆ. ಜತೆಗೆ ದಿನಪತ್ರಿಕೆಗಳು, ವಾರ, ಪಾಕ್ಷಿಕ, ಮಾಸಿಕ ಪತ್ರಿಕೆಗಳು ಓದುಗರಿಗೆ ಲಭ್ಯ ಇವೆ.

ಕಟ್ಟಡ ಅಪೂರ್ಣಗೊಂಡ ಹಿನ್ನೆಲೆಯಲ್ಲಿ ಗ್ರಾ.ಪಂ ಸಭಾಂಗಣದಲ್ಲಿ ತಾತ್ಕಾಲಿಕವಾಗಿ ಗ್ರಂಥಾಲಯ ನಡೆಸುತ್ತಿರುವುದರಿಂದ ಗ್ರಾ.ಪಂ ಸಿಬ್ಬಂದಿ ಹಾಗೂ ಸದಸ್ಯರಿಗೆ ತೊಂದರೆಯಾಗುತ್ತಿದೆ. ಸ್ಥಳ ಅಭಾವದ ಕಾರಣ ಪುಸ್ತಕಗಳನ್ನು ಮೂರು ಕಪಾಟುಗಳಲ್ಲಿ ಇಡಲಾಗಿದೆ. ಆಸನ, ಗಾಳಿ, ಬೆಳಕಿಗೆ ಯಾವುದೇ ತೊಂದರೆ ಇಲ್ಲ. ಆದರೆ ಓದುಗರು ಪುಸ್ತಕಗಳನ್ನು ಆಯ್ಕೆ ಮಾಡಿಕೊಳ್ಳಲು ವ್ಯವಸ್ಥಿತ ಜಾಗವೇ ಇಲ್ಲದಂತಾಗಿದೆ.

ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕಾಗಿ ಹಲವು ಬಾರಿ ಶಾಸಕ ಡಾ|ಅಜಯಸಿಂಗ್‌ ಅವರಿಗೆ ಸೊನ್ನ ಸಿದ್ಧಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಡಾ| ಶಿವಾನಂದ ಸ್ವಾಮೀಜಿ ನೇತೃತ್ವದಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಗ್ರಾ.ಪಂ ಅಧಿಕಾರಿಗಳು ಸಾರ್ವಜನಿಕರಿಗೆ, ಗ್ರಾಮಕ್ಕೆ ಮೂಲ ಸೌಲಭ್ಯ ಒದಗಿಸುವ ಜತೆಗೆ ಗ್ರಾಮದ ಯುವಕರು, ಓದುಗರು, ಸಾಹಿತ್ಯಾಸಕ್ತರು ಮತ್ತು ಹಿರಿಯ ಜೀವಿಗಳ ಮುಖ್ಯ ಕೇಂದ್ರವಾಗಿರುವ ಗ್ರಂಥಾಲಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.