ಪುಂಡರಿಗೆ ಖಾಕಿ ಖಡಕ್‌ ಎಚ್ಚರಿಕೆ

ಉಪಟಳ ಕಡಿವಾಣಕ್ಕೆ ಗೂಂಡಾ ಕಾಯ್ದೆ ಬಳಕೆ •ಗಡಿಪಾರಿಗೂ ಕ್ರಮ

Team Udayavani, Sep 11, 2019, 5:15 PM IST

Udayavani Kannada Newspaper

ಕಲಬುರಗಿ: ಪೊಲೀಸ್‌ ಆಯುಕ್ತಾಲಯ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಪುಂಡರ ಉಪಟಳಕ್ಕೆ ಕಡಿವಾಣ ಹಾಕಲು ಗೂಂಡಾ ಕಾಯ್ದೆ ಪರಿಣಾಮಕಾರಿ ಬಳಸಿಕೊಂಡು, ಗಡಿಪಾರು ಮಾಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ ಎಚ್ಚರಿಕೆ ನೀಡಿದರು.

ಆಯುಕ್ತಾಲಯದ ಮೊದಲ ಪೂರ್ಣ ಪ್ರಮಾಣದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಹೆದರಿಕೆ ಮನೋಭಾವ ಇದ್ದು, ಇದನ್ನು ಹೋಗಲಾಡಿಸಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಪ್ರತಿ ಬಡಾವಣೆಗೂ ಪೊಲೀಸರು ಭೇಟಿ ನೀಡಿ, ಜನರ ಸಂಪರ್ಕದಲ್ಲಿ ಇರುತ್ತಾರೆ. ಪ್ರತಿಯೊಂದು ಮನೆಯ ಮೊಬೈಲ್ ಸಂಖ್ಯೆ ಪಡೆಯಲಾಗುವುದು. ಜತೆಗೆ ಆಯಾ ಬಡಾವಣೆಯಲ್ಲಿ ಗಸ್ತಿನಲ್ಲಿರುವ ಪೊಲೀಸ್‌ ಪೇದೆಯ ನಂಬರ್‌ನ್ನು ಮನೆಯವರಿಗೆ ನೀಡಲಾಗುವುದು. ಕಳ್ಳತನ, ದರೋಡೆ, ಅನಾಹುತ, ಅಹಿತಕರ ಪ್ರಕರಣಗಳಿಗೆ ಸಿಲುಕಿಕೊಂಡ ಜನರು ಶೀಘ್ರವೇ ಪೊಲೀಸರನ್ನು ಸಂಪರ್ಕಿಸಲು ಅನುಕೂಲವಾಗುತ್ತದೆ. ಅಲ್ಲದೇ, ಪ್ರತಿ ಮನೆಗೂ ಜಾಗೃತಿ ಮೂಡಿಸುವ ಕರಪತ್ರಗಳನ್ನು ಪೊಲೀಸರು ತಲುಪಿಸಲಿದ್ದಾರೆ ಎಂದರು.

ಸಂಚಾರ ವ್ಯವಸ್ಥೆ ಸುಧಾರಣೆ: ನಗರದಲ್ಲಿ ವಾಹನ ಸಂಚಾರದ ಸಮಸ್ಯೆ ಗಮನಕ್ಕೆ ಬಂದಿದ್ದು, ಸಂಚಾರ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡಲಾಗುವುದು. ಸಿಗ್ನಲ್, ಒನ್‌ವೇ ರಸ್ತೆಗಳು, ವಾಹನ ನಿಲ್ದಾಣಗಳ ಬಗ್ಗೆ ಮಾಹಿತಿ ಪಡೆದು ಜನರಿಗೆ ಅನುಕೂಲವಾಗುವ ರೀತಿಯಲ್ಲಿ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಡ್ಡಾದಿಡ್ಡಿ ಆಟೋ ಚಾಲನೆ ಮತ್ತು ಎಲ್ಲೆಲ್ಲೆಂದರಲ್ಲಿ ಆಟೋ ನಿಲ್ಲಿಸುವುದಕ್ಕೂ ಕಡಿವಾಣ ಹಾಕಲಾಗುವುದು. ಇದಕ್ಕಾಗಿ ಆಟೋ ಚಾಲಕರ ಸಂಘಟನೆಗಳು ಮತ್ತು ಸಾರ್ವಜನಿಕರ ಸಭೆ ನಡೆಸಲಾಗುವುದು. ಆಟೋ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮ ಕೈಗೊಳ್ಳಲಾಗುವುದು. ಆಟೋದಲ್ಲಿ ಆರಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋದಲ್ಲಿ ಆಟೋದ ಆರ್‌ಸಿ ಮತ್ತು ಚಾಲಕರ ಪರವಾನಗಿ ರದ್ದು ಮಾಡಲಾಗುವುದು ಎಂದು ಎಚ್ಚರಿಸಿದರು.

ಪೊಲೀಸ್‌ ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಡಿ. ಕಿಶೋರಬಾಬು, ಸಹಾಯಕ ಪೊಲೀಸ್‌ ಆಯುಕ್ತ ವಿಜಯಕುಮಾರ ಸಿ.ಎಚ್. ಇದ್ದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.