ಜಯದೇವ ಆಸ್ಪತ್ರೆ ಇನ್ನೊಂದು ಶಾಖೆ ತೆರೆಯಲ್ಲ

ಮೂರು ವರ್ಷದಲ್ಲಿ ಕಲಬುರಗಿಯಲ್ಲಿ ಸ್ವಂತ ಕಟ್ಟಡಮುಖ್ಯಮಂತ್ರಿಗಳಿಂದ ಅಡಿಗಲ್ಲು

Team Udayavani, Nov 27, 2019, 10:55 AM IST

27-November-2

ಕಲಬುರಗಿ: ರಾಜ್ಯದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಇನ್ನೊಂದು ಶಾಖೆ ತೆರೆಯುವ ಪ್ರಸ್ತಾಪ ಹಾಗೂ ಯೋಜನೆ ಸಂಸ್ಥೆಯ ಮುಂದಿಲ್ಲ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ| ಸಿ.ಎಸ್‌. ಮಂಜುನಾಥ ತಿಳಿಸಿದರು.

150 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆಸ್ಪತ್ರೆ ಕಟ್ಟಡ ನಿರ್ಮಾಣದ ಸ್ಥಳ ವೀಕ್ಷಿಸಿದ ನಂತರ ಜಯದೇವ ಆಸ್ಪತ್ರೆಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬೆಂಗಳೂರು, ಮೈಸೂರು ಹಾಗೂ ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಕಾರ್ಯ ನಿರ್ವಹಿಸುತ್ತಿವೆ.

ಇವುಗಳ ವೈದ್ಯಕೀಯ ಸೇವೆಯನ್ನು ಮತ್ತಷ್ಟು ಬಲವರ್ಧನೆಯೊಂದಿಗೆ ಮುನ್ನಡೆಸಲಾಗುವುದು. ಹೀಗಾಗಿ ಹೊಸ ಆಸ್ಪತ್ರೆ ಸ್ಥಾಪನೆಗೆ ಮುಂದಾಗುವುದಿಲ್ಲ. ರಾಜ್ಯವಲ್ಲದೇ ಹೊರ ರಾಜ್ಯದಲ್ಲೂ ಜಯದೇವ ಆಸ್ಪತ್ರೆ ಶಾಖೆ ತೆರೆಯಬೇಕೆಂಬ ಬೇಡಿಕೆಗಳು ಬರುತ್ತಿವೆ. ಆದರೆ ಎಲ್ಲೂ ಸ್ಥಾಪನೆಗೆ ಮುಂದಾಗುವುದಿಲ್ಲ. ಬೆಂಗಳೂರು ಆಸ್ಪತ್ರೆಯಲ್ಲಿ ದಿನಾಲು 1700 ಜನರಿಗೆ ಹೃದ್ರೋಗ ಸಂಬಂಧ ಪರೀಕ್ಷೆ ಕೈಗೊಂಡರೇ ಮೈಸೂರಲ್ಲಿ 600 ಹಾಗೂ ಕಲಬುರಗಿ ಆಸ್ಪತ್ರೆಯಲ್ಲಿ 400 ಜನರು ಆಸ್ಪತ್ರೆ ಸೇವೆ ಪಡೆಯುತ್ತಿದ್ದಾರೆ ಎಂದರು.

ಮೂರು ವರ್ಷದೊಳಗೆ ಜಯದೇವ ಹೃದ್ರೋಗ ಆಸ್ಪತ್ರೆಯು ಕಲಬುರಗಿಯಲ್ಲಿ ಸುಸಜ್ಜಿತ ಸ್ವಂತ ಕಟ್ಟಡದೊಳಗೆ ಕಾರ್ಯಾರಂಭ ಆಗಲಿದೆ. 150 ಕೋಟಿ ವೆಚ್ಚದಲ್ಲಿ 300 ಹಾಸಿಗೆಯುಳ್ಳ ಸುಸಜ್ಜಿತ ಆಸ್ಪತ್ರೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ 150 ಕೋಟಿ ರೂ. ನೆರವಿನಿಂದ ನಗರದ ಮುಖ್ಯ ರಸ್ತೆಯ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಆವರಣದ ವಿಶಾಲವಾದ ಏಳು ಎಕರೆ ಜಾಗದಲ್ಲಿ ಎಲ್ಲ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಜಯದೇವ ಆಸ್ಪತ್ರೆ ತಲೆ ಎತ್ತಲಿದೆ. ಈಗ ಕಾರ್ಯನಿರ್ವಹಿಸುತ್ತಿರುವ ಜಾಗ ಕಲಬುರಗಿ ಜಿಲ್ಲಾಸ್ಪತ್ರೆಗೆ ಸೇರಿದ್ದು, ಇಕ್ಕಟ್ಟಾಗಿದೆ. ಸ್ವಂತ ಕಟ್ಟಡವಾದಲ್ಲಿ ಮತ್ತಷ್ಟು ಸೇವೆ ವಿಸ್ತಾರವಾಗಲಿದೆ ಎಂದರು.

ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಗೆ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ದಿನನಿತ್ಯ 350ರಿಂದ 400 ರೋಗಿಗಳನ್ನು ಪರೀಕ್ಷಿಸಲಾಗುತ್ತಿದೆ. ಆರಂಭಗೊಂಡ ಮೂರುವರೆ ವರ್ಷದಲ್ಲಿ ಎರಡು ಲಕ್ಷ ಜನರು ಹೊರ ರೋಗಿಗಳಾಗಿ ಹೃದ್ರೋಗ ಪರೀಕ್ಷೆಯ ವೈದ್ಯಕೀಯ ಸೇವೆ ಪಡೆದಿದ್ದಾರೆ. 16351 ಒಳರೋಗಿಗಳಿಗೆ ಹೃದ್ರೋಗ ಚಿಕಿತ್ಸೆ ನೀಡಿದರೆ, 411 ರೋಗಿಗಳಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ನೀಡಲಾಗಿದೆ ಎಂದರು. ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಬರುವ ಫೆಬ್ರವರಿಯಲ್ಲಿ ಸಿಎಂ ಯಡಿಯೂರಪ್ಪ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಲಿದ್ದಾರೆ ಎಂದರು.

ಇದೇ ವೇಳೆ ಆಸ್ಪತ್ರೆಯ ನೂತನ ಕಟ್ಟಡದ ನೀಲಿ ನಕ್ಷೆಯನ್ನು ಡಾ| ಸಿ.ಎನ್‌.ಮಂಜುನಾಥ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಬಿಡುಗಡೆಗೊಳಿಸಿದರು. ಡಾ| ಬಾಬುರಾವ್‌ ಹುಡಗೀಕರ್‌, ಕಾರ್ಡಿಯೋಲಾಜಿ ಮುಖ್ಯಸ್ಥ ಡಾ| ವೀರೇಶ ಪಾಟೀಲ, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಚಿಕ್ಕತಿಮ್ಮಯ್ಯ, ಸಾರ್ವಜನಿಕ ಸಂಪರ್ಕಾಧಿಕಾರಿ ಸಂತೋಷ ತೇಗಲತಿಪ್ಪಿ , ಎಚ್‌ ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ, ಶರಣು ಪಪ್ಪಾ ಹಾಗೂ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.