ಕಲಬುರಗಿ ವಿಮಾನ ಯಾನ ಸೇವೆ ಆರಂಭಿಸಲು ಎಚ್ ಕೆಸಿಸಿಐ ಆಗ್ರಹ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧ್ಯಕ್ಷರಿಗೆ ಪತ್ರ

Team Udayavani, Jul 10, 2019, 11:06 AM IST

1–July-10

ಕಲಬುರಗಿ ವಿಮಾನ ನಿಲ್ದಾಣದ ಹೊರ ನೋಟ.

ಕಲಬುರಗಿ: ಸಂಪೂರ್ಣ ಪೂರ್ಣಗೊಂಡಿರುವ ನಗರದ ವಿಮಾನ ನಿಲ್ದಾಣದಿಂದ ಸಾರ್ವಜನಿಕ ವಿಮಾನ ಹಾರಾಟಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೈದ್ರಾಬಾದ್‌ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್ಕೆಸಿಸಿಐ) ಆಗ್ರಹಿಸಿದೆ.

ಎಚ್ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ ಹಾಗೂ ಗೌರವ ಕಾರ್ಯದರ್ಶಿ ಶಶಿಕಾಂತ ಪಾಟೀಲ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ಗುರುಪ್ರಸಾದ ಮೋಹನ್‌ಪಾತ್ರ ಅವರಿಗೆ ಪತ್ರ ಬರೆದು ನಿಲ್ದಾಣ ಪೂರ್ಣಗೊಂಡ ಹಾಗೂ ಮಾಡಬೇಕಿರುವ ಒಪ್ಪಂದ ಅಂತಿಮಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದ ಕಾಮಗಾರಿ 2008ರಲ್ಲಿ ಕೈಗೆತ್ತಿಕೊಂಡಲಾಗಿದೆ. ಅದನ್ನು 2012ರಲ್ಲಿ ಪೂರ್ತಿಗೊಳಿಸುವ ಉದ್ದೇಶ ಹೊಂದಲಾಗಿತ್ತು. ಆದರೆ ಕಾರಣಾಂತರಗಳಿಂದ ಅದನ್ನು ಪೂರ್ತಿಗೊಳಿಸದೇ, ಮುಂದೂಡಲಾಗುತ್ತಿತ್ತು. ಆದರೆ ಈಗ ವಿಮಾನ ನಿಲ್ದಾಣದ ಕಾಮಗಾರಿ ಪೂರ್ತಿಗೊಂಡಿದ್ದು, ವಿಮಾನ ಹಾರಾಟಕ್ಕೆ ಸಿದ್ದವಾಗಿದೆ.

ಈಗಾಗಲೇ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಕಲಬುರಗಿ ವಿಮಾನ ನಿಲ್ದಾಣಕ್ಕೆ ಎಎನ್‌ಎಸ್‌ ಸೇವೆ ಒದಗಿಸುವ ಕುರಿತು ಕಳೆದ ಜನವರಿ 21ರಂದು ಸಿಎನ್‌ಎಸ್‌, ಎಟಿಎಂ ಒಪ್ಪಂದಕ್ಕೆ ರುಜುವಾತು ಹಾಕಿದೆ. ಜತೆಗೆ ಪ್ರಾಧಿಕಾರದ ತಾಂತ್ರಿಕ ತಂಡ ಕಳೆದ ಜನವರಿ 3ರಂದು ಕಲಬುರಗಿ ವಿಮಾನ ನಿಲ್ದಾಣ ಕಾರ್ಯಗತಗೊಳಿಸಲು ಅವಶ್ಯವಿರುವ ಸಿಎನ್‌ಎಸ್‌-ಎಟಿಎಂ ಉಪಕರಣ ಮತ್ತು ಭೌತಿಕ ಮೂಲಭೂತ ಸೌಕರ್ಯಗಳ ಕಾಮಗಾರಿ ಕುರಿತು ಪರಿಶೀಲನೆ ಮಾಡಿದೆ. ಇದರ ಜತೆಗೆ ಬ್ಯುರೋ ಆಫ್‌ ಸಿವಿಲ್ ಎವಿಯೇಷನ್‌ ಸೆಕ್ಯುರಿಟಿ ಮತ್ತು ಡೈರೆಕ್ಟರ್‌ ಜನರಲ್ ಆಫ್‌ ಸಿವಿಲ್ ಎವಿಯೆಷನ್‌ ಅಧಿಕಾರಿಗಳ ತಂಡ ತಪಾಸಣೆ ಕೂಡ ಮಾಡಿದೆ. ಎಎಐ ಮಾದರಿಯಂತೆ ಬೆಂಗಳೂರಿನ ಕರ್ನಾಟಕ ಔದ್ಯೋಗಿಕ ಮತ್ತು ಮೂಲಭೂತ ಸೌಕರ್ಯಾಭಿವೃದ್ಧಿ ವ್ಯವಸ್ಥಾಪಕ ನಿರ್ದೇಶಕರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಎಸ್‌ಪಿವಿ ರಚಿಸುವ ಕುರಿತು ಒಡಂಬಡಿಕೆ ಸಲ್ಲಿಸಿ ಕಲಬುರಗಿ ವಿಮಾನ ನಿಲ್ದಾಣವನ್ನು ವಾಣಿಜ್ಯ ಉದ್ದೇಶಕ್ಕೆ ಉಪಯೋಗಿಸಲು ಅನುಮತಿ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸಿದ್ದಾರೆ. ಮುಂದುವರಿದ ಭಾಗವಾಗಿ ಕರ್ನಾಟಕ ಸರಕಾರದ ಬೆಂಗಳೂರಿನ ಮೂಲಭೂತ ಸೌಕರ್ಯಾಭಿವೃದ್ಧಿ ಇಲಾಖೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಕಳೆದ ಮೇ 21ರಂದು ಪತ್ರದ ಮೂಲಕ ಅವಶ್ಯಕವಿರುವ ಕ್ರಮ ತೆಗೆದುಕೊಂಡು ರಾಜ್ಯದ ಅಧಿಕಾರಿಗಳು ಮತ್ತು ಎಎಐದವರು ಚರ್ಚಿಸಿ ಅಂತಿಮಗೊಳಿಸಬೇಕು ಎಂದು ವಿನಂತಿಸಿದ್ದಾರೆ. ಕಾರಣ ಈ ಎಲ್ಲ ಅಂಶಗಳನ್ನು ಅವಲೋಕಿಸಿ ಕಲಬುರಗಿ ವಿಮಾನ ನಿಲ್ದಾಣಕ್ಕೆ ಪರವಾನಗಿ ನೀಡಿ ಸಾರ್ವಜನಿಕರ ಉಪಯೋಗಕ್ಕಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಹೈದ್ರಾಬಾದ್‌ ಕರ್ನಾಟಕ ಪ್ರದೇಶ ಸಂವಿಧಾನದ ಅನುಚ್ಛೇದ 371(ಜೆ)ದಡಿ ಭಾರತ ಸರಕಾರದಿಂದ ವಿಶೇಷ ಸ್ಥಾನಮಾನ ಮಂಜೂರು ಮಾಡಿರುವುದರಿಂದ ಹಾಗೂ ವಾಣಿಜ್ಯ ಚಟುವಟಿಕೆಗಳು ಶೀಘ್ರ ಗತಿಯಲ್ಲಿ ಅಭಿವೃದ್ಧಿ ಹೊಂದಲು, ಆದ್ಯತೆ ಮೇರೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಅನುಮತಿ ನೀಡುವ ಮತ್ತು ಕರ್ನಾಟಕ ಸರಕಾರದ ಜತೆಯಲ್ಲಿ ಎಸ್‌ಪಿವಿ ರಚಿಸುವ ಕುರಿತು ಒಡಂಬಡಿಕೆ ಪ್ರಕ್ರಿಯೆಯನ್ನು ಶೀಘ್ರವಾಗಿ ಅಂತಿಮಗೊಳಿಸುವ ಮೂಲಕ ಈ ಭಾಗದ ಜನರ ಆಶೋತ್ತರಕ್ಕೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.