ಈಶಾನ್ಯ ಸಾರಿಗೆ 85 ಬಸ್‌ ಸಂಚಾರ ಸ್ಥಗಿತ

ಪ್ರತಿ ದಿನ ಅಂದಾಜು 14 ಲಕ್ಷ ರೂ. ನಷ್ಟ •ಧರ್ಮಸ್ಥಳ-ಮಂಗಳೂರಿಗೆ ಒಂದೇ ಬಸ್‌

Team Udayavani, Aug 7, 2019, 9:53 AM IST

7-Agust-1

ಕಲಬುರಗಿ: ಉತ್ತರ ಕರ್ನಾಟಕ ಮತ್ತು ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಹಲವು ರಸ್ತೆಗಳು ಜಲಾವೃತ ಆಗಿರುವುದರಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಇಕೆಆರ್‌ಟಿಸಿ) 85 ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಕಳೆದ ಮೂರ್‍ನಾಲ್ಕು ದಿನಗಳಿಂದ ಪ್ರತಿ ದಿನ 13ರಿಂದ 14 ಲಕ್ಷ ರೂ. ನಷ್ಟ ಉಂಟಾಗಿದೆ.

ನೆರೆಯ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿಗೆ ನಿತ್ಯವೂ ನೀರು ಹರಿಸಲಾಗುತ್ತಿದೆ. ಪರಿಣಾಮ ರಾಜ್ಯದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ನೀರು ಬಿಡಲಾಗುತ್ತಿದ್ದು, ಹೈದ್ರಾಬಾದ ಕರ್ನಾಟಕ ಭಾಗದ ರಾಯಚೂರು, ಯಾದಗಿರಿ ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿವೆ. ಜತೆಗೆ ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳು ಮಹಾ ಪ್ರವಾಹಕ್ಕೆ ನಲುಗಿವೆ. ಆದ್ದರಿಂದ ಈ ಭಾಗಗಳಲ್ಲಿ ಎನ್‌ಇಕೆಆರ್‌ಟಿಸಿ ವ್ಯಾಪ್ತಿಯ ವಿಜಯಪುರ ಸೇರಿದಂತೆ ಏಳು ಜಿಲ್ಲೆಗಳಿಂದ ಪ್ರಯಾಣಿಸಬೇಕಿದ್ದ ಹಲವು ಬಸ್‌ಗಳ ಸಂಚಾರ ರದ್ದು ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ರಾಯಚೂರು-ಕಲಬುರಗಿ ರಾಜ್ಯ ಹೆದ್ದಾರಿಯ ಕೊಳ್ಳೂರು ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ಸಂಚರಿಸುತ್ತಿದ್ದ 35 ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಯಚೂರಿನಿಂದ ದೇವದುರ್ಗ ಮೂಲಕ ಶಹಾಪುರ, ಕಲಬುರಗಿಗೆ ಬರುವ ಬಸ್‌ಗಳು ಜಾಲಹಳ್ಳಿ, ತಿಂಥಣಿ ಮಾರ್ಗವಾಗಿ ಅನಿವಾರ್ಯತೆ ಎದುರಾಗಿದೆ. ಆದರೆ, ರಾಯಚೂರು, ಯಾದಗಿರಿ, ಕಲಬುರಗಿ ಮಧ್ಯೆ ಸಾಕಷ್ಟು ರೈಲುಗಳ ಸಂಚಾರ ಇರುವುದರಿಂದ ಬಸ್‌ ಅವಲಂಬಿತ ಪ್ರಯಾಣಿಕರನ್ನು ಹೊರತು ಪಡಿಸಿ ಹೆಚ್ಚಿನ ಸಮಸ್ಯೆಯಾಗಿಲ್ಲ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಸಾರಿಗೆ ಬಸ್‌ಗಳು ಸಂಚರಿಸುತ್ತಿವೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ-ಕೊಲಾØಪುರ ಮಾರ್ಗದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಸಂಚರಿಸುತ್ತಿದ್ದ 10 ಬಸ್‌ಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಅಷ್ಟೇ ಅಲ್ಲದೇ, ಮಹಾರಾಷ್ಟ್ರದ ಕೊಲಾØಪುರ, ರತ್ನಗಿರಿ, ಮಿರಜ್‌, ಸಾಂಗ್ಲಿ, ಇಚಲಕರಂಜಿ, ಪುಣೆಗೆ ತೆರಳಬೇಕಿದ್ದ ಸುಮಾರು 20 ಬಸ್‌ಗಳನ್ನು ಸ್ಥಗಿತಗೊಳಿಸಲಾಗಿದೆ.

ಕೃಷ್ಣಾ ನದಿ ಪಾತ್ರದ ಅನೇಕ ಗ್ರಾಮಗಳಿಗೆ ನೀರು ನುಗ್ಗಿರುವುದರಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯೊಳಗೆ ಸಂಚರಿಸುತ್ತಿದ್ದ 80 ಬಸ್‌ಗಳು ಹಾಗೂ ರಾಯಚೂರು ಜಿಲ್ಲೆಯ ವ್ಯಾಪ್ತಿಯೊಳಗೆ 20 ಬಸ್‌ಗಳ ಸಂಚಾರ ಸ್ಥಗಿತವಾಗಿದೆ. ಇದರಲ್ಲಿ ಹೊರ ಭಾಗಗಳಿಗೆ ಸಂಚರಿಸುತ್ತಿದ್ದ ಬಸ್‌ಗಳು ಸೇರಿವೆ. ಇನ್ನು, ಧರ್ಮಸ್ಥಳ ಅಥವಾ ಮಂಗಳೂರಿಗೆ ಪ್ರತಿ ಜಿಲ್ಲಾ ಕೇಂದ್ರದಿಂದ ದಿನವೂ ಒಂದೇ ಬಸ್‌ ಪ್ರಯಾಣಿಸುತ್ತಿದ್ದು, ಧರ್ಮಸ್ಥಳ ಭಾಗದಲ್ಲೂ ಮಳೆ ಸುರಿಯುತ್ತಿರುವುದರಿಂದ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

51 ಸಾವಿರ ಕಿ.ಮೀ. ಕಡಿಮೆ: ಪ್ರವಾಹದಿಂದಾಗಿ ಬಸ್‌ಗಳ ಸ್ಥಗಿತಗೊಳಿಸಿರುವುದರಿಂದ ಈಶಾನ್ಯ ಸಾರಿಗೆ ಬಸ್‌ಗಳ ಒಟ್ಟು ಸಂಚಾರದಲ್ಲಿ 51 ಸಾವಿರ ಕಿ.ಮೀ ದೂರದ ಸಂಚಾರ ಕಡಿಮೆಯಾಗಿದೆ. ಆದರೆ, ಎಲ್ಲೂ ಯಾವುದೇ ರೀತಿಯ ಹಾನಿಯಾಗಿಲ್ಲ. ಪ್ರಯಾಣಿಕರ ಹಿತದೃಷ್ಟಿಯಿಂದ ಸೇತುವೆ ಹಾಗೂ ತೆಗ್ಗು-ದಿಣ್ಣೆ ಪ್ರದೇಶಗಳಲ್ಲಿ ಕಟ್ಟೆಚ್ಚರದಿಂದ ಇರಲು ಮತ್ತು ಅಪಾಯದ ಸ್ಥಳದಲ್ಲಿ ಬಸ್‌ಗಳನ್ನು ಇಳಿಸದಂತೆ ಚಾಲಕರು, ನಿರ್ವಾಹಕರಿಗೆ ಸೂಚಿಸಲಾಗಿದೆ. ಮಳೆ ಮತ್ತು ಪ್ರವಾಹದ ನೀರು ಇಳಿದರೆ ಮತ್ತೆ ಬಸ್‌ಗಳ ಸಂಚಾರ ಯಥಾ ಪ್ರಕಾರ ಆರಂಭಿಸುತ್ತೇವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಪ್ರವಾಹ ಹಿನ್ನೆಲೆಯಲ್ಲಿ ಎನ್‌ಇಕೆಆರ್‌ಟಿಸಿ ವಾಪ್ತಿಯ ಕಲಬುರಗಿ, ಬೀದರ್‌, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯಪುರ ವಿಭಾಗಗಳಿಂದ ಬೇರೆ-ಬೇರೆ ನಗರಗಳಿಗೆ ಸಂಚರಿಸುತ್ತಿದ್ದ 85 ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಪ್ರತಿದಿನ ಸಂಸ್ಥೆಗೆ ಪ್ರತಿ ದಿನ 13ರಿಂದ 14 ಲಕ್ಷ ರೂ. ನಷ್ಟ ಸಂಭವಿಸುತ್ತಿದೆ. ನೀರು ಹರಿಯುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ ಯಾವುದೇ ಹಾನಿಯಾಗಿಲ್ಲ.
ಸಂತೋಷಕುಮಾರ,
 ಮುಖ್ಯ ಸಂಚಾರ ವ್ಯವಸ್ಥಾಪಕ, ಎನ್‌ಇಕೆಆರ್‌ಟಿಸಿ

ಟಾಪ್ ನ್ಯೂಸ್

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.