ಪ್ರೌಢಶಾಲೆಗೆ ಕಟ್ಟಡವಿಲ್ಲದ ಗ್ರಾಮದಲ್ಲಿ ಸಿಎಂ ವಾಸ್ತವ್ಯಕ್ಕೆ ಸಿದ್ಧತೆ

Team Udayavani, Jun 17, 2019, 2:43 PM IST

17-June-21

ಮುಖ್ಯಮಂತ್ರಿ ವಾಸ್ತವ್ಯ ಹೂಡಲಿರುವ ಹೇರೂರ ಬಿ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಬಣ್ಣ ಹಚ್ಚಿ ಸಿದ್ಧ ಮಾಡಲಾಗುತ್ತಿದೆ.

ಹಣಮಂತರಾವ ಭೈರಾಮಡಗಿ
ಕಲಬುರಗಿ:
ಜಿಲ್ಲೆಯ ಜೀವನಾಡಿ ಭೀಮಾ ನದಿ ತೀರದ ತಾಲೂಕಿನ ಹೇರೂರ ಬಿ. ಗ್ರಾಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೂ. 22ರಂದು ವಾಸ್ತವ್ಯ ಹೂಡುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.

ಕಲಬುರಗಿ ಮಹಾನಗರದಿಂದ 40 ಕಿ.ಮೀ. ದೂರದ ಅಫ‌ಜಲಪುರ ವಿಧಾನಸಭಾ ಕ್ಷೇತ್ರದ ಹೇರೂರ ಬಿ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದಲ್ಲಿ ಮುಖ್ಯಮಂತ್ರಿಗಳು ವಾಸ್ತವ್ಯ ಹೂಡಲಿದ್ದಾರೆ. ಹೀಗಾಗಿ ಶಾಲೆಗೆ ಬಣ್ಣ ಹೊಡೆಯುವುದು, ಶೌಚಾಲಯ ನಿರ್ಮಿಸುವ ಕಾರ್ಯ ಹಗಲಿರಳು ನಡೆದಿವೆ. ಅಲ್ಲದೇ ಮುರಿದು ಹೋಗಿದ್ದ ಬಾಗಿಲು ಹಚ್ಚುವ ಜತೆಗೆ ಮುಖ್ಯವಾಗಿ ಐದಾರು ವರ್ಷಗಳ ಹಿಂದೆಯಷ್ಟೇ ನಿರ್ಮಾಣವಾಗಿರುವ ಶಾಲಾ ಕಟ್ಟಡದ ಕಳಪೆ ಕಾಮಗಾರಿ ಕಾಣದ ಹಾಗೆ ದುರಸ್ಥಿಗೊಳಿಸುವ ಕಾರ್ಯವೂ ನಡೆದಿದೆ.

ಗ್ರಾಪಂ ಕೇಂದ್ರ ಹೊಂದಿರುವ ಹೇರೂರ ಬಿ.ಯಲ್ಲಿ ಸರ್ಕಾರಿ ಪ್ರೌಢ ಶಾಲೆಗೆ ಕಟ್ಟಡವೇ ಇಲ್ಲ. ಗ್ರಾಮದಲ್ಲಿರುವ ಈಗಲೋ ಆಗಲೋ ಬೀಳುವ ಶಾಲಾ ಕಟ್ಟಡದಲ್ಲಿಯೇ ಪ್ರೌಢಶಾಲೆ ನಡೆಸಲಾಗುತ್ತಿದೆ. ಪ್ರಾಥಮಿಕ ಶಾಲೆಯನ್ನು ಊರಾಚೆ ಹೊಸದಾಗಿ ಐದಾರು ವರ್ಷಗಳ ಹಿಂದೆ ನಿರ್ಮಿಸಲಾಗಿದೆ. ಈ ಕಟ್ಟಡದ ಕಿಟಕಿ, ಬಾಗಿಲುಗಳು ಕಳಪೆ ಕಾಮಗಾರಿಯಿಂದ ಕಿತ್ತುಹೋಗಿವೆ. ಈಗ ಹೊಸದಾಗಿ ಅಳವಡಿಸಲಾಗುತ್ತಿದೆ. ಶಾಲೆ ದುರಸ್ಥಿಗೊಳಿಸಿ ಬಣ್ಣ ಹಚ್ಚಲಾಗುತ್ತಿದೆ. ಇದೇ ಶಾಲೆ ಆವರಣದಲ್ಲಿ ಜನತಾ ದರ್ಶನ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ನಿರ್ಮಿಸಲಾಗುತ್ತಿದೆ. ಸಾರ್ವಜನಿಕ ಸಮಾರಂಭಕ್ಕಾಗಿ ಊರಾಚೆಯ ಪ್ರಸಿದ್ಧ ದೇವಾಲಯ ಹುಲಕಂಠೇಶ್ವರ ದೇವಾಸ್ಥಾನ ಎದುರು ವ್ಯವಸ್ಥೆ ಮಾಡಲಾಗುತ್ತಿದೆ. ಇಲ್ಲೇ ಆಗಮಿಸುವ ಸುಮಾರು 10 ಸಾವಿರ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಭೀಮಾ ನದಿಗೆ ಹತ್ತಿಕೊಂಡೇ ಇರುವ ಹೇರೂರ ಬಿ. ಗ್ರಾಮ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದೆ. ಗ್ರಾಮದಿಂದ ದೂರದ ಬೆಳಗುಂಪಾ ಹಳ್ಳದಲ್ಲಿ ಕೊರೆಯಲಾದ ಬೊರವೆಲ್ ಆಸರೆಯಾಗಿದೆ. ಬೊರವೆಲ್ ಕೆಟ್ಟರೇ ಕುಡಿಯಲು ಯೋಗ್ಯವಲ್ಲದ ಭೀಮಾ ನದಿ ನೀರೇ ಗತಿ. ಆದರೆ ಬೇಸಿಗೆಯಲ್ಲಿ ಸಂಪೂರ್ಣ ನದಿ ಬತ್ತಿರುವುದರಿಂದ ಕೊಡ ನೀರಿಗಾಗಿಯೂ ಜನರು ಪರದಾಡುವಂತಿದೆ.

ಗ್ರಾಮದಲ್ಲಿದ್ದರೂ ಕಾರ್ಯನಿರ್ವಹಿಸದೇ ಸದಾ ಮುಚ್ಚಿದ್ದ ಹಾಗೂ ಯಾವುದೇ ಔಷಧ ಇಲ್ಲದ ಪಶು ಚಿಕಿತ್ಸಾಲಯವನ್ನು ಈಗ ಪ್ರಾರಂಭಿಸಲಾಗುತ್ತಿದೆ. ಚಿಕಿತ್ಸಾಲಯಕ್ಕೂ ಬಣ್ಣ ಬಳೆಯಲಾಗುತ್ತಿದೆ. ಅಲ್ಲದೇ ಒಂದೊಂದೇ ಸಲಕರಣೆಗಳನ್ನು ತಂದಿಡಲಾಗುತ್ತಿದೆ.

ಗ್ರಾಮಸ್ಥರ ಬೇಡಿಕೆಗಳು?
.ಹೇರೂರ ಬಿ- ಜೇವರ್ಗಿ ತಾಲೂಕಿನ ಹರವಾಳ ನಡುವೆ ಭೀಮಾ ನದಿ ಮೇಲೆ ಸೇತುವೆ ನಿರ್ಮಾಣ.

. ಸಮರ್ಪಕ ಕುಡಿಯುವ ನೀರಿನ ಸೌಕರ್ಯ ಕಲ್ಪಿಸುವುದು.

. ಪೊಲೀಸ್‌ ಠಾಣೆ ಸ್ಥಾಪಿಸುವುದು.

. 20 ವರ್ಷಗಳ ಹಿಂದೆ ಗ್ರಾಮದಲ್ಲಿದ್ದ ಕೃಷ್ಣಾ ಗ್ರಾಮೀಣ ಬ್ಯಾಂಕ್‌ ಶಾಖೆ ಪುನರಾರಂಭ ಆಗಲಿ.

. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ (ವಿಎಸ್‌ಎಸ್‌ಎನ್‌) ಸಂಘ ಸ್ಥಾಪಿಸುವುದು.

. ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವುದು.

. ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ ಜಲಸಂಗ್ರಹಾಲಯ ಸದುಪಯೋಗಪಡಿಸುವುದು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.