ನೌಕರರ ಪಾದಯಾತ್ರೆ ತಡೆಗೆ ಖಂಡನೆ

ಹೋರಾಟ ತಡೆ ಜನತಂತ್ರಕ್ಕೆ ಮಾರಕ ಬೇಡಿಕೆ ಈಡೇರಿಸದಿದ್ದರೆ ಹೋರಾಟ

Team Udayavani, Dec 12, 2019, 10:42 AM IST

12-December-1

ಕಲಬುರಗಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಬೇಕೆಂದು ನಡೆಯುತ್ತಿರುವ ಪಾದಯಾತ್ರೆಗೆ ತಡೆ ನೀಡಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು, ಎಸ್‌ಎಫ್‌ಐ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ದಮನ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಸರ್ಕಾರಿ ಶಾಲೆಗಳ ಬದಲಿಗೆ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌
ಕೆಜಿ, ಯುಕೆಜಿ ಪ್ರಾರಂಭಿಸುವಂತೆ ಅಂಗನವಾಡಿ ನೌಕರರ ಪ್ರಬಲ ಒತ್ತಾಯವಾಗಿದೆ. ಹೀಗಾಗಿ ಬೆಂಗಳೂರಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತುಮಕೂರಿನಿಂದ ನೌಕರರು ಪಾದಯಾತ್ರೆ ಕೈಗೊಂಡಿದ್ದಾರೆ. ಆದರೆ, ಸರ್ಕಾರ ಮಾರ್ಗ ಮಧ್ಯದಲ್ಲೇ ಪಾದಯಾತ್ರೆಗೆ ತಡೆವೊಡ್ಡಿ ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮುಷ್ಕರದ ಬಗ್ಗೆ ಮೂರು ತಿಂಗಳ ಹಿಂದೆ ಮುಖ್ಯಮಂತ್ರಿಗಳ ಕಚೇರಿಗೆ ಪತ್ರ ತಲುಪಿಸಲಾಗಿದೆ. ಅಂಗನವಾಡಿ ನೌಕರರ ಬೇಡಿಕೆ ಈಡೇರಿಸುವುದು ಸರ್ಕಾರ ಮೂಲ ಕರ್ತವ್ಯವಾಗಿದೆ. ಬೇಡಿಕೆ ಈಡೇರಿಸುವುದು ಬಿಟ್ಟು ಪಾದಯಾತ್ರೆಗೆ ತಡೆದಿರುವುದು ಜನತಂತ್ರಕ್ಕೆ ಶೋಭೆತರುವಂತದ್ದಲ್ಲ.

ಸರ್ಕಾರದ ಕ್ರಮದಿಂದ ರಸ್ತೆಯಲ್ಲಿ ಚಳಿಗೆ ಅಂಗನವಾಡಿ ಕಾರ್ಯಕರ್ತೆಯರು ರಾತ್ರಿ ಕಳೆಯುವಂತೆ ಆಗಿದೆ. ಆದರೂ, ನೌಕರರು ತಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಯನ್ನು ಸರ್ಕಾರ ಈಡೇರಿಸಲೇಬೇಕು. ಇಲ್ಲವಾದಲ್ಲಿ ಹಲವು ಸಂಘಟನೆಗಳಿಂದ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಬೇಕಾಗುತ್ತಿದೆ ಎಂದು ಪ್ರತಿಭಟನನಿತರರು ಎಚ್ಚರಿಸಿದರು.

ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಶಾಂತಪ್ಪ ಪಾಟೀಲ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಗಂಗಮ್ಮ ಬಿರಾದಾರ, ಎಸ್‌ ಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಿದ್ದಲಿಂಗ ಪಾಳಾ, ತಾಲೂಕಾಧ್ಯಕ್ಷ ವಿಶ್ವನಾಥ ರಾಗಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.