ಕುಡಿವ ನೀರಿಗಾಗಿ ರೊಚ್ಚಿಗೆದ್ದ ಜನ

ಪಾಲಿಕೆ ಆಯುಕ್ತೆ, ಎಸ್‌ಪಿ ಸ್ಥಳಕ್ಕೆ ಭೇಟಿ •ಗುಂಪು ಚದುರಿಸಲು ಪೊಲೀಸರ ಹರಸಾಹಸ

Team Udayavani, Jun 1, 2019, 9:58 AM IST

1-June-2

ಕಲಬುರಗಿ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ರಾಮ ಮಂದಿರ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟರು.

ಕಲಬುರಗಿ: ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ರಸ್ತೆ ತಡೆ ನಡೆಸಿದ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಗರದ ರಾಮ ಮಂದಿರ ವೃತ್ತದ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ರಸ್ತೆ ತಡೆಯಿಂದ ಉಂಟಾಗಿದ್ದ ಸಂಚಾರ ದಟ್ಟಣೆ ನಿವಾರಣೆಗಾಗಿ ಪ್ರತಿಭಟನಾಕಾರರ ಗುಂಪು ಚದುರಿಸಲು ಪೊಲೀಸರು ಹರಸಾಹಸಪಟ್ಟರು.

ಇಲ್ಲಿನ ಆರ್‌.ಟಿ. ನಗರ, ಓಝಾ ಲೇಔಟ್ ಮತ್ತು ವಿವೇಕಾನಂದ ನಗರದಲ್ಲಿ ಕಳೆದ ಎರಡು ತಿಂಗಳಿಂದ ಕುಡಿಯುವ ನೀರು ಸರಿಯಾಗಿ ಸರಬರಾಜು ಆಗುತ್ತಿಲ್ಲ. ಜಲಮಂಡಳಿ ಅಧಿಕಾರಿಗಳು ನೀರಿನ ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ನಿವಾಸಿಗಳು ರಸ್ತೆ ತಡೆ ನಡೆಸಿದರು.

ಬೆಳಗ್ಗೆ 9 ಗಂಟೆ ಸುಮಾರಿಗೆ ಮೂರು ಬಡಾವಣೆಗಳ ಮಹಿಳೆಯರು ಮತ್ತು ಪುರುಷರು ದಿಢೀರ್‌ ಆಗಿ ರಾಮ ಮಂದಿರ ವೃತ್ತದಲ್ಲಿ ಜಮಾವಣೆಯಾಗಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. 30ಕ್ಕೂ ಹೆಚ್ಚು ನಿವಾಸಿಗಳು ದಿಢೀರ್‌ ರಸ್ತೆ ತಡೆ ನಡೆಸಿದ್ದರಿಂದ ವೃತ್ತದ ನಾಲ್ಕು ಮಾರ್ಗಗಳಲ್ಲಿ ನೂರಾರು ವಾಹನಗಳು ನಿಂತಿದ್ದವು.

ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಬಂದ ಅಶೋಕ ನಗರ ಪೊಲೀಸರು, ರಸ್ತೆ ತಡೆ ಮಾಡುತ್ತಿದ್ದ ಸಾರ್ವಜನಿಕರನ್ನು ಚದುರಿಸಲು ಮುಂದಾದರು. ಈ ವೇಳೆ ಪರಸ್ಪರ ವಾಗ್ಧಾದ ನಡೆದು ಗೊಂದಲದ ವಾತಾವರಣ ನಿರ್ಮಾಣವಾಯಿತು. ಆಗ ರಸ್ತೆಯಲ್ಲಿ ಸಾಗುತ್ತಿದ್ದ ಜನರು, ವಾಹನ ಸವಾರರು ಸ್ಥಳದಲ್ಲಿ ಗುಂಪಾಗಿ ಸೇರಿದರು.

ಈ ಹಂತದಲ್ಲಿ ಪೊಲೀಸರು ಹರಸಾಹಸ ಪಟ್ಟು ಪ್ರತಿಭಟನಾಕಾರರನ್ನು ಚದುರಿಸಿದರು. ಮಹಾನಗರ ಪಾಲಿಕೆ ಆಯುಕ್ತೆ ಫೌಜಿಯಾ ತರನ್ನುಮ್‌, ಎಸ್‌ಪಿ ಯಡಾ ಮಾರ್ಟಿನ್‌ ಮಾಬನ್ಯಾಂಗ್‌ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.

ಮೂರು ಬಡಾವಣೆಗಳಲ್ಲಿ ಅನೇಕ ದಿನಗಳಿಂದ ನೀರಿನ ಸಮಸ್ಯೆ ಉಂಟಾಗಿದೆ. ಟ್ಯಾಂಕ್‌ನಲ್ಲಿ ನೀರಿದ್ದರೂ ಸರಬರಾಜು ಆಗುತ್ತಿಲ್ಲ. ಎಲ್ಲಿಯಾದರೂ ನೀರು ಸೋರುತ್ತಿದ್ದರೆ ಪರಿಶೀಲಿಸಿ ಪೈಪ್‌ಲೈನ್‌ ಸರಿಪಡಿಸುವಂತೆ ಹಲವು ಬಾರಿ ಜಲ ಮಂಡಳಿ ಅಧಿಕಾರಿಗಳಿಗೆ ಮನವಿ ಮಾಡಲಾಗಿದ್ದರೂ ಯಾವುದೇ ಕ್ರಮಕೈಗೊಳ್ಳದ ಕಾರಣ ಅನಿರ್ವಾಯವಾಗಿ ರಸ್ತೆ ತಡೆ ನಡೆಸಬೇಕಾಯಿತೆಂದು ಪ್ರತಿಭಟನಾಕಾರರು ತಿಳಿಸಿದರು. ಎರಡು ದಿನದಲ್ಲಿ ಸಮಸ್ಯೆ ಪರಿಹರಿಸುವುದಾಗಿ ಮಹಾನಗರ ಪಾಲಿಕೆ ಆಯುಕ್ತರು ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.