ವಚನದಲ್ಲಿದೆ ಮಾನವೀಯ ಮೌಲ್ಯ

ಮೊದಲ ಪ್ರಜಾಪ್ರಭುತ್ವ ಅನುಭವ ಮಂಟಪ•ಸಂವಿಧಾನದಲ್ಲಿದೆ ವಚನಗಳ ಆಶಯ

Team Udayavani, Aug 23, 2019, 1:12 PM IST

ಕಲಬುರಗಿ: ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡ 'ಸಮತತ್ವ ಬಿತ್ತ ಬನ್ನಿ ಸರ್ವೋದಯಕ್ಕಾಗಿ' ಕಾರ್ಯಕ್ರಮವನ್ನು ಜಿಪಂ ಸಿಇಒ ಡಾ| ರಾಜಾ ಪಿ. ಉದ್ಘಾಟಿಸಿದರು.

ಕಲಬುರಗಿ: ಶಾಲೆ-ಕಾಲೇಜುಗಳಲ್ಲಿ ಮಾನವೀಯ ಮೌಲ್ಯ ಕುರಿತು ಕಲಿಸುವುದಿಲ್ಲ, ಆದ್ದರಿಂದ ಮಾನವೀಯ ಮೌಲ್ಯಗಳಿಂದ ಕೂಡಿದ ವಚನ ಸಾಹಿತ್ಯ ಅಧ್ಯಯನ ಮತ್ತು ಅಳವಡಿಕೆ ಅತ್ಯಗತ್ಯವಾಗಿದೆ ಎಂದು ಜಿಪಂ ಸಿಇಒ ಡಾ| ರಾಜಾ ಪಿ. ಹೇಳಿದರು.

ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ಶರಣರಾದ ಲಿಂಗಣ್ಣ ಸತ್ಯಂಪೇಟೆ, ಸಿದ್ರಾಮಪ್ಪ ಬಾಲಪ್ಪಗೋಳ ಸ್ಮರಣಾರ್ಥ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ಸಮತತ್ವ ಬಿತ್ತ ಬನ್ನಿ ಸರ್ವೋದಯಕ್ಕಾಗಿ, ಮನಬೆಸೆದು ಮಾಡೋದಿದೆ ಮಾನವೀಕರಣ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜ್ಞಾನ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಎಲ್ಲೆಡೆ ಸಾಕಷ್ಟು ಹೇಳಲಾಗುತ್ತದೆ. ಆದರೆ ಮಾನವೀಯತೆ ಬಗ್ಗೆ ಹೇಳಿಕೊಡುವುದು ಕಮ್ಮಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

‘ಮಾನವೀಯ ಚಿಂತನೆಯಲ್ಲಿ ವಚನ ಮತ್ತು ಸಂವಿಧಾನ’ ವಿಷಯದ ಕುರಿತು ಬೀದರಿನ ಶರಣ ಸಾಹಿತಿ ವಿಜಯಲಕ್ಷ್ಮೀ ಕೌಟಗೆ ಮಾತನಾಡಿ, ಮನುಕುಲದ ಉದ್ಧಾರಕ, ವಿಶ್ವಗುರು ಬಸವಣ್ಣ ಸಮಾಜದಲ್ಲಿ ಮಾನವೀಯ ಸಂಬಂಧ ಗಟ್ಟಿಗೊಳಿಸಿದರು. ವಚನ ಬಿಟ್ಟು ಸಂವಿಧಾನವಿಲ್ಲ, ಸಂವಿಧಾನ ಬಿಟ್ಟು ವಚನ ಸಾಹಿತ್ಯವಿಲ್ಲ. ಆತ್ಮಗೌರವ, ಆತ್ಮವಿಶ್ವಾಸ, ಸ್ವಾಭಿಮಾನ ಕಲಿಸಿಕೊಡುವ ವಚನಗಳ ಆಶಯವನ್ನು ಭಾರತದ ಸಂವಿಧಾನದಲ್ಲಿ ಕಾಣಬಹುದು ಎಂದರು.

ಬಸವಣ್ಣ ನವರ ‘ಕಳಬೇಡ ಕೊಲಬೇಡ’ ವಚನ ಸಂವಿಧಾನವಾದರೆ, ಭಾರತದ ಸಂವಿಧಾನ ಅದನ್ನು ಕಾನೂನು ರೂಪದಲ್ಲಿ ಅಳವಡಿಸಿಕೊಂಡಿದೆ. ಜಗತ್ತಿನ ಮೊಟ್ಟ ಮೊದಲ ಪಾರ್ಲಿಮೆಂಟ್ ಎಂದು ಕರೆಯಲ್ಪಡುವ ಅನುಭವ ಮಂಟಪದಲ್ಲಿ ಸಮಾನತೆ, ಸ್ವಾತಂತ್ರ್ಯ ಕಲ್ಪಿಸಲಾಗಿತ್ತು. ಅದೇ ರೀತಿಯಾಗಿ ನಮ್ಮ ಸಂವಿಧಾನದಲ್ಲೂ ಈ ಅಂಶಗಳಿರುವುದನ್ನು ಗಮನಿಸಬಹುದು ಎಂದು ಹೇಳಿದರು.

ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯರಾ ಜಯಲಕ್ಷ್ಮೀ ಎಲ್.ಕೆ. ಅಧ್ಯಕ್ಷತೆ ವಹಿಸಿದ್ದರು. ಡಾ| ಮಲ್ಲಿಕಾರ್ಜುನ ವಡ್ಡನಕೇರಿ, ಸಚಿನ್‌ ಫರಹತಾಬಾದ, ಎ.ಜೆ. ಖತೀಬ್‌, ರುಕ್ಮೀಣಿ, ಅಕಾಡೆಮಿಯ ಶಿವರಾಜ ಅಂಡಗಿ, ಡಾ| ಕೆ.ಗಿರಿಮಲ್ಲ, ಶಿವಾನಂದ ಮಠಪತಿ, ಶ್ರೀಕಾಂತ ಪಾಟೀಲ ತಿಳಗೂಳ, ಪರಮೇಶ್ವರ ಶಟಕಾರ, ಜಗದೀಶ ಮರಪಳ್ಳಿ, ರವೀಂದ್ರಕುಮಾರ ಭಂಟನಳ್ಳಿ ಮತ್ತಿತರರು ಹಾಜರಿದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.ಈ ವಿಭಾಗದಿಂದ ಇನ್ನಷ್ಟು

  • ಹೂವಿನಹಿಪ್ಪರಗಿ: ಸರಕಾರ ಸಾಮಾಜಿಕ ಭದ್ರತೆಯಡಿ ಬಡ ಮತ್ತು ನಿರ್ಗತಿಕರ ಕಲ್ಯಾಣಕ್ಕಾಗಿ ಪಿಂಚಣಿ ಯೋಜನೆ ಮೂಲಕ ಆಸರೆ ಕಲ್ಪಿಸುವ ನಿಟ್ಟಿನಲ್ಲಿ ಸಂಧ್ಯಾ ಸುರಕ್ಷ,...

  • ಮಂಗಳೂರು: ನಗರದ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಕೃಷ್ಣ ಮೃಗದ ಚರ್ಮ ಮತ್ತು ಕೊಂಬು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ವಿಶೇಷ...

  • ತುಮಕೂರು: ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳಿಂದ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇದರಿಂದ ನಾಗರಿಕರಿಗೆ ತೀವ್ರ ಸಮಸ್ಯೆಗಳು...

  • ಹುಳಿಯಾರು: ಹುಳಿಯಾರು ಹೋಬಳಿಯ ಕುರಿಹಟ್ಟಿ ಪ್ರದೇಶದಲ್ಲಿ ರಾಗಿ ಪೈರು ತಿನ್ನುವ ಹುಳುಗಳ ಕಾಟ ಆರಂಭವಾಗಿದ್ದು, ಉತ್ತಮ ಇಳುವರಿ ಪಡೆಯುವ ನಿರೀಕ್ಷೆಯಲ್ಲಿದ್ದ ರೈತರನ್ನು...

  • ಮಾಗಡಿ: ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಗೆ ಬಿದಿರು ಮೆಳೆ ಬೆಳೆಯುವುದು ಅವಶ್ಯವಿದೆ ಎಂದು ಕೃಷಿಕ ಸಮಾಜದನವದೆಹಲಿ ಪ್ರತಿನಿಧಿ ಬೆಳಗವಾಡಿ ಸತೀಶ್‌ ಸಲಹೆ ನೀಡಿದರು. ಬೆಂಗಳೂರಿನ...

ಹೊಸ ಸೇರ್ಪಡೆ