ಇಎಸ್‌ಐದಲ್ಲೂ ಆಯುಷ್ಮಾನ್‌

Team Udayavani, Sep 15, 2019, 12:13 PM IST

15-Sepctember-9

ಕಲಬುರಗಿ: ಇಎಸ್‌ಐ ಆಸ್ಪತ್ರೆಯಲ್ಲಿ ಆಯುಷ್ಮಾನ್‌ ಕಾರ್ಡುದಾರರಿಗೆ ಸೇವೆ ಕಲ್ಪಿಸುವಂತೆ ಇಎಸ್‌ಐ ಬೊರ್ಡ್‌ ಅಧಿಕಾರಿಗಳನ್ನು ಸಂಸದ ಡಾ| ಉಮೇಶ ಜಾಧವ ನವದೆಹಲಿಯಲ್ಲಿ ಭೇಟಿಯಾಗಿ ಚರ್ಚಿಸಿದರು.

ಕಲಬುರಗಿ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ಇಲ್ಲಿನ ಕಾರ್ಮಿಕರ ವಿಮಾ ಆಸ್ಪತ್ರೆಯಲ್ಲಿ ಇನ್ಮುಂದೆ ಆಯುಷ್ಮಾನ್‌ ಕಾರ್ಡುದಾರರಿಗೂ ಉತೃಷ್ಟ ವೈದ್ಯಕೀಯ ಸೇವೆ ಸಿಗಲಿದೆ.

ನವದೆಹಲಿಯಲ್ಲಿ ಶುಕ್ರವಾರ ನಡೆದ ಇಎಸ್‌ಐ ಬೋರ್ಡ್‌ ಸಭೆಯಲ್ಲಿ ಕಲಬುರಗಿಯಲ್ಲಿನ ಕಾರ್ಮಿಕರ ವಿಮಾ ಆಸ್ಪತ್ರೆಯಲ್ಲಿ ಆಯುಷ್ಮಾನ್‌ ಕಾರ್ಡುದಾರರಿಗೆ ವೈದ್ಯಕೀಯ ಸೇವೆ ಕಲ್ಪಿಸುವ ನಿಟ್ಟಿನ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇಎಸ್‌ಐ ಬೋರ್ಡ್‌ನ ಈ ಐತಿಹಾಸಿಕ ನಿರ್ಣಯದಿಂದ ಆಯುಷ್ಮಾನ್‌ ಕಾರ್ಡ್‌ ಹೊಂದಿರುವ ಸಾಮಾನ್ಯ ಜನರು ಸರ್ಕಾರಿ ಆಸ್ಪತ್ರೆಯಲ್ಲಿಯಂತೆಯೇ ಸೂಪರ್‌ ಸ್ಪೆಷಾಲಿಟಿ ವೈದ್ಯಕೀಯ ಸೇವೆ, ಅದರಲ್ಲೂ ಐದು ಲಕ್ಷ ರೂ. ವರೆಗಿನ ವೈದ್ಯಕೀಯ ಸೇವೆ ಉಚಿತವಾಗಿ ಪಡೆಯಬಹುದಾಗಿದೆ.

ಕಳೆದ ಎರಡು ದಿನಗಳ ಹಿಂದೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸೆಸ್‌ ಘಟಕದಲ್ಲಿನ ದೋಷದಿಂದ 16 ವರ್ಷದ ಬಾಲಕ ಮೃತಪಟ್ಟಿದ್ದಲ್ಲದೇ, ಇಡೀ ಆಸ್ಪತ್ರೆಯ ವೈದ್ಯಕೀಯ ಸೇವೆಯೇ ಹಳ್ಳ ಹಿಡಿದಿರುವುದನ್ನು ಆಸ್ಪತ್ರೆಗೆ ಭೇಟಿ ನೀಡಿ ಸ್ವತಃ ಮನಗಂಡ ಕಲಬುರಗಿ ಸಂಸದ ಡಾ| ಉಮೇಶ ಜಾಧವ ಅವರು, ತಕ್ಷಣವೇ ನವದೆಹಲಿಗೆ ಹೋಗಿ ಇಎಸ್‌ಐ ಡೈರೆಕ್ಟರ್‌ ಆಫ್ ಜನರಲ್ ಅವರನ್ನು ಕಂಡು ಕಲಬುರಗಿ ‘ಇಎಸ್‌ಐ’ದಲ್ಲಿ ಆಯುಷ್ಮಾನ್‌ ಕಾರ್ಡುದಾರರಿಗೂ ವೈದ್ಯಕೀಯ ಸೇವೆ ಕಲ್ಪಿಸುವಂತೆ ಮನವಿ ಮಾಡಿ ಒತ್ತಡ ಹಾಕಿದ್ದರು. ಇದರ ಪರಿಣಾಮ ಬೋರ್ಡ್‌ ತನ್ನ ಸಭೆಯಲ್ಲಿ ನಿರ್ಣಯ ಕೈಗೊಳ್ಳುವುದರ ಮುಖಾಂತರ ಸಂಸದರ ಪ್ರಯತ್ನಕ್ಕೆ ತಕ್ಷಣವೇ ಫಲ ದೊರಕಿದಂತೆ ಆಗಿದೆ.

ಸುಧಾರಣೆಗೆ ಪ್ರಯತ್ನ: ಕಲಬುರಗಿ ಕ್ಷೇತ್ರದ ಸಂಸದರಾಗಿ ಚುನಾಯಿತರಾದ ನಂತರ ನವದೆಹಲಿಗೆ ಹೋಗಿ ಕೇಂದ್ರ ಸಂಪುಟ ಅಸ್ತಿತ್ವ ಸಮಾರಂಭದಲ್ಲಿ ಪಾಲ್ಗೊಂಡು ಪ್ರಥಮವಾಗಿ ಜಿಲ್ಲೆಗೆ ಆಗಮಿಸಿ ಕಾಳಗಿ ತಾಲೂಕಿನ ಮಂಗಲಗಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಹೇಳುವ ಮುಖಾಂತರ ಅಧಿಕೃತ ಜನಸೇವೆ ಕಾರ್ಯ ಆರಂಭಿಸಿದ್ದ ಸಂಸದರು ಎರಡು ದಿನಗಳ ನಂತರ ಜೂನ್‌ 2ರಂದು ನಗರದ ಸೇಡಂ ರಸ್ತೆಯಲ್ಲಿರುವ ಕಾರ್ಮಿಕರ ವಿಮಾ ಆಸ್ಪತ್ರೆ (ಇಎಸ್‌ಐ)ಗೆ ದಿಢೀರ್‌ ಭೇಟಿ ನೀಡಿ ವೈದ್ಯಕೀಯ ಸೇವೆ ಹಾಗೂ ನ್ಯೂನತೆಗಳನ್ನು ಸುದೀರ್ಘ‌ವಾಗಿ ಅವಲೋಕಿಸಿದ್ದರು.

ಈ ಭಾಗದ ಕಾರ್ಮಿಕರ ಜತೆಗೆ ಜನರಿಗೆ ಅತ್ಯುತ್ತಮ ವೈದ್ಯಕೀಯ ದೊರಕಲೆಂದು ಆಸ್ಪತ್ರೆ ಸ್ಥಾಪಿತವಾಗಿದೆ. ಹೀಗಾಗಿ ಸೇವೆ ದಿನೇ-ದಿನೇ ಹೆಚ್ಚಳವಾಗಬೇಕು. ವೈದ್ಯಕೀಯ ಸೇವೆ ಸುಧಾರಣೆ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯಗಳತ್ತ ಗಮನ ಹರಿಸಲಾಗುವುದು. ಕಲಬುರಗಿ ಇಎಸ್‌ಐ ಆಸ್ಪತ್ರೆಯಲ್ಲಿ ಎಲ್ಲ ಸುಧಾರಿತ ವೈದ್ಯಕೀಯ ಸೌಲಭ್ಯಗಳಿವೆ. ಆದರೆ ಜನತೆಗೆ ಹೆಚ್ಚಿನ ಪ್ರಮಾಣದಲ್ಲಿ ಸದುಪಯೋಗ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ರಾಜ್ಯದೊಂದಿಗೆ ಚರ್ಚಿಸಿ ಹಾಗೂ ರಾಜ್ಯದ ಎಲ್ಲ ಸಂಸದರ ವಿಶ್ವಾಸದೊಂದಿಗೆ ಕೇಂದ್ರದ ಮೇಲೆ ಒತ್ತಡ ಹಾಕಲಾಗುವುದು ಎಂದು ಹೇಳಿದ್ದರು. ಈಗ ಸಂಸದರು ಹೇಳಿರುವಂತೆ ಕಾರ್ಯರೂಪಕ್ಕೆ ಬಂದಿದೆ.

ಶುಕ್ರವಾರ ಇಎಸ್‌ಐ ಬೋರ್ಡ್‌ನಲ್ಲಿ ಕಲಬುರಗಿಯಲ್ಲಿನ ಕಾರ್ಮಿಕರ ವಿಮಾ ಆಸ್ಪತ್ರೆ (ಇಎಸ್‌ಐ)ಯಲ್ಲಿ ಆಯುಷ್ಮಾನ್‌ ಕಾರ್ಡುದಾರರಿಗೆ ವೈದ್ಯಕೀಯ ಸೇವೆ ಕಲ್ಪಿಸುವ ಕುರಿತಾಗಿ ನಿರ್ಣಯ ಕೈಗೊಳ್ಳಲಾಗಿದೆ. ಈಗ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ನಡುವೆ ಒಪ್ಪಂದ ಆಗಬೇಕಿದೆ. ಎರಡರ ನಡುವೆ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇದು ಕಾರ್ಯರೂಪಕ್ಕೆ ಬರಲಿದೆ. ಈ ನಿಟ್ಟಿನಲ್ಲಿ ಕೇಂದ್ರದ ಕಾರ್ಮಿಕ ಸಚಿವ ಸಂತೊಷ ಗಂಗವಾರ ಹಾಗೂ ಇಎಸ್‌ಐ ಡೈರೆಕ್ಟರ್‌ ಜನರಲ್ ರಾಜಕುಮಾರ ಅವರನ್ನು ಅಭಿನಂದಿಸುವೆ.
ಡಾ| ಉಮೇಶ ಜಾಧವ, ಸಂಸದರು, ಕಲಬುರಗಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.