ಮೂರು ಸಾವಿರ ಹೆಕ್ಟೇರ್‌ಗೆ ಪರಿಹಾರ

ಎಂಜಿನಿಯರ್ಸ್‌ ರೆಜಿಮೆಂಟ್ ಸೈನಿಕರ ಸೇವೆ ಸ್ಮರಣೀಯ•ಕಿಸಾನ್‌ ಸಮ್ಮಾನ: ಇದುವರೆಗೆ 17.77 ಕೋಟಿ ರೂ. ಸಂದಾಯ

Team Udayavani, Aug 16, 2019, 9:59 AM IST

16-Agust-1

ಕಲಬುರಗಿ: ವಾರದ ಹಿಂದೆ ಮಹಾರಾಷ್ಟ್ರದ ಉಜನಿ ಹಾಗೂ ವೀರಾ ಜಲಾಶಯದಿಂದ ಹರಿ ಬಿಡಲಾದ ನೀರಿನಿಂದ ಭೀಮಾ ನದಿಯಲ್ಲಿ ಉಂಟಾದ ಪ್ರವಾಹದಿಂದ ಹಾನಿಗೀಡಾದ ಮೂರು ಸಾವಿರ ಹೆಕ್ಟೇರ್‌ಗೆ ಪರಿಹಾರ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದರು.

ನಗರದ ಡಿಎಆರ್‌ ಪೊಲೀಸ್‌ ಮೈದಾನದಲ್ಲಿ ದೇಶದ 73ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರತಿ ಹೆಕ್ಟೇರ್‌ಗೆ ಕೇಂದ್ರದ 3800 ರೂ. ಹಾಗೂ ರಾಜ್ಯ ಸರ್ಕಾರದ 6200 ರೂ. ಸೇರಿಸಿ ಒಟ್ಟಾರೆ 10 ಸಾವಿರ ರೂ. ಪರಿಹಾರ ನೀಡಲಾಗುವುದು. ಈಗಾಗಲೇ ಹಾನಿಯಾದ ಭೂಮಿಯನ್ನು ಸಂಪೂರ್ಣ ಗುರುತಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಪರಿಹಾರ ಮೊತ್ತ ವಿತರಣೆಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗಿದ್ದರಿಂದ ಜಿಲ್ಲೆಯ ಅಫಜಲಪುರ ತಾಲೂಕಿನ 17, ಜೇವರ್ಗಿ ತಾಲೂಕಿನ 08, ಕಲಬುರಗಿ ತಾಲೂಕಿನ ಐದು ಹಾಗೂ ಚಿತ್ತಾಪುರ ತಾಲೂಕಿನ ಒಂದು ಗ್ರಾಮ ಹೀಗೆ ಒಟ್ಟು 31 ಗ್ರಾಮಗಳು ಪ್ರವಾಹಕ್ಕೆ ಈಡಾಗಿವೆ. ಜಿಲ್ಲೆಯ ಸಂಸದರು, ಶಾಸಕರು ಹಾಗೂ ಇತರೆ ಜನಪ್ರತಿನಿಧಿಗಳ ಸಲಹೆ ಪಡೆದು ಕಂದಾಯ, ಪೊಲೀಸ್‌, ಜೆಸ್ಕಾಂ, ಗ್ರಾಮೀಣಾಭಿವೃದ್ಧಿ, ಅಗ್ನಿ ಶಾಮಕ, ನೀರಾವರಿ ಮೊದಲಾದ ಇಲಾಖೆಗಳ ಶ್ರಮದಿಂದ ಪರಿಸ್ಥಿತಿಯನ್ನು ಎದುರಿಸಲಾಯಿತು. ಅಲ್ಲದೇ ವಿಶೇಷವಾಗಿ ಪ್ರವಾಹ ಸಂತ್ರಸ್ತ ಜನರ ಜೀವ ರಕ್ಷಣೆಗೆ ಸಿಕಿಂದರಬಾದ್‌ನ 202 ಇಂಜಿನಿಯರ್ಸ್‌ ರೆಜಿಮೆಂಟ್ ಸೈನಿಕರು ತೋರಿದ ಸೇವೆಯೂ ಸ್ಮರಣೀಯ ಎಂದರು.

ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್‌. ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ದಿನದಂದೇ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಕೇಂದ್ರ ಸರ್ಕಾರದ 6000 ರೂ. ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 4000 ರೂ. ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಜಿಲ್ಲೆಯಲ್ಲಿ 2,70,226 ರೈತರು ಸ್ವಯಂ ಘೋಷಣಾ ಪತ್ರಗಳನ್ನು ರೈತರಿಂದ ಸ್ವೀಕರಿಸಿ ದತ್ತಾಂಶ ನಿರ್ವಹಣೆ ಮಾಡಲಾಗಿದೆ. ಈ ಪೈಕಿ 88,838 ರೈತ ಫಲಾನುಭವಿಗಳಿಗೆ ಮೊದಲನೇ ಕಂತಾಗಿ 2000 ರೂ. ರಂತೆ ಪ್ರತಿ ರೈತರ ಖಾತೆಗೆ ಸಹಾಯಧನ ನೀಡಲಾಗಿದ್ದು, ಜಿಲ್ಲೆಯ ರೈತರಿಗೆ ಇದುವರೆಗೆ 17.77 ಕೋಟಿ ರೂ. ಸಂದಾಯ ಮಾಡಲಾಗಿದೆ ಎಂದು ತಿಳಿಸಿದರು.

371ನೇ (ಜೆ)ಕಲಂ ಅನ್ವಯ ರಚನೆಯಾದ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 2019-20ನೇ ಸಾಲಿಗೆ ರಾಜ್ಯ ಸರ್ಕಾರ ತನ್ನ ಆಯವ್ಯಯದಲ್ಲಿ 1500 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದು, ಈ ಭಾಗದ ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ ಎಂದರು.

ಬರ, ಪ್ರವಾಹ ಮೊದಲಾದ ಸನ್ನಿವೇಶಗಳಲ್ಲಿ ರೈತರಿಗೆ ನೆರವು ನೀಡಲು ಉದ್ದೇಶಿಸಲಾಗಿದೆ. ಕೃಷಿ ವಿಮೆಗಾಗಿ ಜಿಲ್ಲೆಯ 454 ಹಳ್ಳಿಗಳಲ್ಲಿ ಬೆಳೆಗಳಿಗೆ ಸಂಬಂಧಿಸಿದಂತೆ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಮಾಡಲಾಗಿದೆ. ಇದರಲ್ಲಿ ಎಳ್ಳು, ಉದ್ದು, ಹೆಸರು ಮತ್ತು ಸೋಯಾಬೀನ್‌ ಮೊದಲಾದ ಬೆಳೆಗಳಿಗೆ ಸಂಬಂಧಿಸಿದಂತೆ ಒಟ್ಟು 3,37,000 ಪ್ಲಾಟುಗಳ ಬೆಳೆ ಸಮೀಕ್ಷೆ ಕೈಗೊಂಡು ಶೇ. 90ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ವಾಡಿ-ಗದಗ ರೈಲ್ವೆ ಯೋಜನೆಯಡಿ ಜಿಲ್ಲೆಯಲ್ಲಿ ಜೇವರ್ಗಿ ಮತ್ತು ಚಿತ್ತಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಟ್ಟು 294 ಎಕರೆ ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ 251 ಎಕರೆಗೆ ಬೆಲೆ ನಿಗದಿಪಡಿಸಲಾಗಿದೆ. ಈ ಪೈಕಿ 251 ಎಕರೆ ಜಮೀನಿಗೆ ರಾಜ್ಯ ಸರ್ಕಾರ 80 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಆ ಪೈಕಿ 219 ಎಕರೆ ಜಮೀನಿಗೆ ಒಟ್ಟು 55 ಕೋಟಿ ರೂ. ಪರಿಹಾರವನ್ನು ರೈತರ ಖಾತೆಗೆ ಸಂದಾಯ ಮಾಡಲಾಗಿದೆ ಎಂದು ತಿಳಿಸಿದರು.

ಸನ್ಮಾನ: ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಸೈಯದ್‌ ಖುರ್ಶಿದ್‌ ಅಲಿ ಮುನೀರ ಅಲಿ, ವೆಂಕಟರಾವ್‌ ಅರ್ಜುನರಾವ್‌ ಶಿಂಧೆ, ಸೀತಾರಾಮ ಭೀಮುನಾಯ್ಕ ಚವ್ಹಾಣ ಅವರನ್ನು ಸನ್ಮಾನಿಸಲಾಯಿತು. ನಂತರ 2019ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಚಿತ ಲ್ಯಾಪಟಾಪ್‌ ವಿತರಿಸಲಾಯಿತು. ದ್ವಿತೀಯ ಪಿಯುಸಿ ಸಿಇಟಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ, ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಮೂವರು ಕ್ರೀಡಾಪಟುಗಳನ್ನು ಗಣ್ಯರು ಸನ್ಮಾನಿಸಿದರು.

ಭಾರತದ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಪರೇಡ್‌ ಕಮಾಂಡರ್‌ ಆರ್‌.ಪಿ.ಐ. ಚನ್ನಬಸಪ್ಪ ಹಾಗೂ ಸಹಾಯಕ ಪರೇಡ್‌ ಕಮಾಂಡರ್‌ ಡಿ.ಎ.ಆರ್‌. ಆರ್‌.ಎಸ್‌.ಐ ಹನುಮಂತ ನೇತೃತ್ವದಲ್ಲಿ ನಡೆದ ಪರೇಡ್‌ನ‌ಲ್ಲಿ ಡಿ.ಎ.ಆರ್‌., ಸಿವಿಲ್, ಕೆ.ಎಸ್‌.ಆರ್‌.ಪಿ., ಗೃಹ ರಕ್ಷಕದಳ, ಅರಣ್ಯ ಇಲಾಖೆ, ಅಬಕಾರಿ ಇಲಾಖೆ, ಭಾರತ ಸೇವಾ ದಳ, ಸ್ಕೌಟ್ಸ್‌ ಮತ್ತು ಗೈಡ್ಸ್‌, ಅಂಧ ಬಾಲಕರ ವಸತಿ ಶಾಲೆ, ವಿವಿಧ ಶಾಲೆ ವಿದ್ಯಾರ್ಥಿಗಳು, ಪೊಲೀಸ್‌ ವಾದ್ಯ ವೃಂದ ಸೇರಿದಂತೆ ಒಟ್ಟು 13 ತುಕಡಿಗಳು ಭಾಗವಹಿಸಿದ್ದವು.

ಸಾಂಸ್ಕೃತಿಕ ಕಾರ್ಯಕ್ರಮ: ಕೆ.ಜಿ.ಬಿ. ವಸತಿ ಶಾಲೆಯ ಕ್ರಾಂತಿವೀರ ಸಂಗೊಳ್ಳಿ ರಾಮಣ್ಣ ಕುರಿತ ರೂಪಕ ಮತ್ತು ಶರಣಬಸವೇಶ್ವರ ವಸತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಭರತ ನಾಟ್ಯ, ಮಲ್ಲಕಂಭ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆದವು.

ಸಂಸದ ಡಾ| ಉಮೇಶ ಜಾಧವ, ಕಲಬುರಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನ ಪರಿಷತ್‌ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶೋಭಾ ಸಿದ್ಧು ಶಿರಸಗಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ ಯಾದವ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ. ರಾಜಾ, ಈಶಾನ್ಯ ವಲಯದ ಪೊಲೀಸ್‌ ಮಹಾ ನಿರೀಕ್ಷಕ ಹಾಗೂ ಕಲಬುರಗಿ ನಗರ ಪೊಲೀಸ್‌ ಆಯುಕ್ತ ಮನೀಷ ಖರ್ಬಿಕರ್‌, ಜಿಲ್ಲಾ ಪೊಲೀಸ್‌ ವರಿಷಾಧಿuಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಡಾ| ಬಿ. ಗೋಪಾಲಕೃಷ್ಣ ಮುಂತಾದವರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.