ಸಿಡಿಲಿಗೆ ಗಣಿ ಕಾರ್ಮಿಕ ಸಾವು

ಧರೆಗುರುಳಿದ ವಿದ್ಯುತ್‌ ಕಂಬಗಳು-ಮರಗಳುಹಲವಾರು ಮನೆಗಳಿಗೆ ಧಕ್ಕೆ ಅಪಾರ ಹಾನಿ

Team Udayavani, May 22, 2019, 9:50 AM IST

22-May-1

ಲಬುರಗಿ: ಮಂಗಳವಾರ ಸಂಜೆ ಸುರಿದ ಮಳೆ ನಂತರ ರಸ್ತೆಯಲ್ಲಿ ಹರಿದ ನೀರು.

ಕಲಬುರಗಿ: ಕಳೆದ ವಾರದಿಂದ 44 ಡಿಗ್ರಿ ಸೆಲ್ಸಿಯಸ್‌ ಬಿಸಿಲಿನಿಂದ ಕಂಗೆಟ್ಟಿದ್ದ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸುರಿದ ಮಳೆ ಸ್ವಲ್ಪ ತಂಪಿನ ವಾತಾವರಣ ಮೂಡಿಸಿತಾದರೂ ಭಾರಿ ಅನಾಹುತ ಸೃಷ್ಟಿಸಿದೆ. ಸಿಡಿಲಿಗೆ ಕಾರ್ಮಿಕನೊಬ್ಬ ಮೃತಪಟ್ಟಿದ್ದರೆ, ವೃದ್ದೆಯೊಬ್ಬರು ಗಾಯಗೊಂಡಿದ್ದಾರೆ.

ವಾಡಿ: ಕಲ್ಲು ಗಣಿಯಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಗಣಿ ಕಾರ್ಮಿಕನೊಬ್ಬ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಪಟ್ಟಣದ ಹೊರ ವಲಯದ ಕೊಂಚೂರು ಮಾರ್ಗದಲ್ಲಿ ಸಂಭವಿಸಿದೆ.

ಹಳಕರ್ಟಿ ಗ್ರಾಮ ನಿವಾಸಿ ದೊಡ್ಡಲಕ್ಷ್ಮಯ್ಯ ಭೀಮಯ್ಯ (60) ಮೃತ ಕಾರ್ಮಿಕ. ಬಿರುಗಾಳಿ ಸಹಿತ ಗುಡುಗು ಮಿಂಚಿನೊಂದಿಗೆ ಮಳೆಯಾದ್ದರಿಂದ ಸಿಡಿಲು ಬಿದ್ದಿದೆ. ಸಿಡಿಲ ಶಾಖಕ್ಕೆ ಸ್ಥಳದಲ್ಲಿಯೇ ವ್ಯಕ್ತಿ ಕುಸಿದುಬಿದ್ದು ಪ್ರಾಣಬಿಟ್ಟಿದ್ದಾನೆ. ಈ ಕುರಿತು ವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಹಾಬಾದ: ತಾಲೂಕು ಮುತಗಾ ಗ್ರಾಮದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ಸರಸ್ವತಿ ಸಿದ್ದಣ್ಣ ಹಳ್ಳಿ ಎಂಬ ವೃದ್ಧೆ ಗಾಯಗೊಂಡಿದ್ದಾರೆ. ಮನೆಯಲ್ಲಿ ಕುಳಿತಿದ್ದಾಗ ಸಿಡಿಲು ಬಡಿದಿದ್ದು, ಶಹಾಬಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಶಹಾಬಾದ ನಗರದಲ್ಲಿ ಸಂಜೆ ಸುಮಾರು ಒಂದು ಗಂಟೆ ಜೋರಾದ ಮಳೆ ಸುರಿದಿದೆ.

ಬಿರುಗಾಳಿಯೊಂದಿಗೆ ಜಿಲ್ಲೆಯ ಹಲವು ಕಡೆ ಮುಂಗಾರು ಆಗಮನದ ಮುಂಚಿನ ರೋಹಿಣಿ ಮಳೆ ಸುರಿದಿದೆ. ಆದರೆ ಕಾದ ಕೆಂಡದಂತಾಗಿರುವ ಭೂಮಿಗೆ ಈ ಮಳೆ ಹಂಚಿನ ಮೇಲೆ ನೀರು ಚಿಮ್ಮಿಸಿದಂತಾಗಿದೆ. ಸ್ವಲ್ಪ ತಂಪಾದ ವಾತಾವರಣ ಮೂಡಿಸಿರುವ ಈ ಮಳೆಗೆ ಸಂತಸಪಡುವಂತಾಯಿತು. ಅರ್ಧ ಗಂಟೆ ಕಾಲ ಅಲ್ಲಲಿ ಮಳೆ ಸುರಿದಿದೆ. ಆದರೆ ಗಾಳಿ ರಭಸವಾಗಿದ್ದರಿಂದ ಮಳೆ ಬಾರದೇ ಮುಂದಕ್ಕೆ ಓಡಿ ಹೋಯಿತು. ಕಳೆದ ಮುಂಗಾರು ಹಾಗೂ ಹಿಂಗಾರು ಎರಡು ಮಳೆ ಸಂಪೂರ್ಣ ಕೈ ಕೊಟ್ಟ ಪರಿಣಾಮ ಕೃಷಿ ಕ್ಷೇತ್ರದ ಮೇಲೆ ಪರಿಣಾಮ ಬೀರಿದ್ದಲ್ಲದೇ ಕುಡಿಯುವ ನೀರಿಗೆ ಎಲ್ಲೆಲ್ಲೂ ಹಾಹಾಕಾರ ಉಂಟಾಗಿದೆ. ಜಿಲ್ಲಾದ್ಯಂತ ಶೇ. 70ರಷ್ಟು ನೀರಿನ ಮೂಲಗಳು ಒಣಗಿದ್ದು, ಜನರು ಕೊಡ ನೀರಿಗಾಗಿ ತಪಸ್ಸು ಮಾಡುವಂತಾಗಿದೆ.

ಕೆರೆಗಳೆಲ್ಲ ಮಾಯವಾಗಿದ್ದರಿಂದ ಜತೆಗೆ ನೀರು ಉಪಯೋಗ ಮಿತವಾಗಿ ಬಳಕೆ ಮಾಡದಿರುವರಿಗೆ ಈ ಬೇಸಿಗೆ ಸಾಕಷ್ಟು ಪಾಠ ಕಲಿಸಿತು ಎನ್ನಬಹುದಾಗಿದೆ.

ನೀರು ಮನೆಯೊಳಗೆ: ಇನ್ನೇನು ಮಳೆ ಸುರಿಯುವ ಲಕ್ಷಣಗಳು ಕಂಡು ಬರುತ್ತಿದೆ. ಇನ್ನು ಸ್ವಲ್ಪ ಮಳೆ ಬಂದರೆ ಕಲಬುರಗಿ ಮಹಾನಗರದಲ್ಲಿ ಕೆಲ ಬಡಾವಣೆಗಳಲ್ಲಿ ನೀರು ಮನೆಯೊಳಗೆ ಸೇರುತ್ತದೆ. ನೀರು ನಿಲ್ಲಲು ಸ್ಥಳ ಇಲ್ಲದಂತೆ ಮಾಡಿರುವುದು, ಒಳಚರಂಡಿಯೊಳಗೆ ನೀರು ಹರಿಯದಂತೆ ಆದರೊಳಗೆ ಕಸ -ತ್ಯಾಜ್ಯ ಹಾಗೂ ಪ್ಲಾಸ್ಟಿಕ್‌ ಹಾಕಿರುವುದು ಜತೆಗೆ ಚರಂಡಿ ಮೇಲೆಯೇ ಮನೆ ಕಟ್ಟಿದ್ದರಿಂದ ಮಳೆ ನೀರು ಆನಿವಾರ್ಯವಾಗಿ ಮನೆಯೊಳಗೆ ಬರದೇ ಬೇರೆ ದಾರಿಯೇ ಇಲ್ಲ. ಕಳೆದ ವರ್ಷದಿಂದ ಮುಂಗಾರು ಹಾಗೂ ಹಿಂಗಾರು ಎರಡೂ ಮಳೆ ಕೊಟ್ಟ ಪರಿಣಾಮ ಭೂಮಿ ಮರಭೂಮಿಯಂತಾಗಿದೆ. ಈಗ ಭೂಮಿ ಹಸಿವಾದಷ್ಟು ಮಳೆ ಬಂದರೆ ದನಕರುಗಳಿಗೆ ಮೇವು ಬೆಳೆಯಲು ಸಾಧ್ಯವಾಗುತ್ತದೆ. ಅಲ್ಲದೇ ಭೂಮಿಗೆ ಬೀಜ ಹಾಕಲು ರೈತನಿಗೆ ಸಹಾಯಕವಾಗುತ್ತದೆ. ಮೇ ಕೊನೆ ವಾರದಿಂದ ಮಳೆ ಬಂದರೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿದಂತಾಗುತ್ತದೆ. ಬಿತ್ತನೆ ಗುರಿ ಶೇ. 20ರಷ್ಟು ಹೆಚ್ಚಳವಾಗುತ್ತದೆ. ಒಟ್ಟಾರೆ ಮಂಗಳವಾರ ಮಳೆ ಎಲ್ಲರಲ್ಲೂ ಭರವಸೆ ಮೂಡಿಸಿದೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.