ಮತದಾರ ಪಟ್ಟಿ ಪರಿಶೀಲನೆ ಯಶಸ್ವಿಗೊಳಿಸಿ

ಶಾಲಾ-ಕಾಲೇಜಿನಲ್ಲಿ ಅರಿವು ಮೂಡಿಸಿಕುಟುಂಬ ಸದಸ್ಯರ ಪಟ್ಟಿ ಪರಿಷ್ಕರಿಸಲು ತಿಳಿಸಿ

Team Udayavani, Sep 29, 2019, 10:57 AM IST

29-Sepctember-1

ಕಲಬುರಗಿ: ಜಿಲ್ಲೆಯಲ್ಲಿ ವೋಟರ್‌ ಹೆಲ್ಫ್ಫ್ ಲೈನ್  ಆ್ಯಪ್‌ ಬಳಸಿ ಮೊಬೈಲ್‌ ಮೂಲಕ ದಾಖಲೆ ಪ್ರಮಾಣದಲ್ಲಿ ಮತದಾರರ ಪಟ್ಟಿ ಪರಿಶೀಲನೆ ಮಾಡಿ, ಯಶಸ್ವಿಗೊಳಿಸಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಶರಣಪ್ಪ ಸತ್ಯಂಪೇಟ್‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣ, ಪೊಲೀಸ್‌, ಆರೋಗ್ಯ, ಎನ್‌ಇಕೆಆರ್‌ ಟಿಸಿ ಮುಂತಾದ ಇಲಾಖೆಗಳ ಸಿಬ್ಬಂದಿ, ಅಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಸ್ವಯಂ ಆಗಿ ಮತದಾರರ ಪಟ್ಟಿ ಪರಿಶೀಲನೆ ಮಾಡಿಕೊಳ್ಳಬೇಕು ಎಂದರು.

ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಮುತುವರ್ಜಿ
ವಹಿಸಿ, ಶಾಲಾ-ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಮತದಾರರ ಪಟ್ಟಿ ಪರಿಶೀಲನೆ ಮಾಡಿಸಬೇಕು. ನಂತರ ಅವರ ಕುಟುಂಬ ಸದಸ್ಯರ ಪಟ್ಟಿಯನ್ನು ಪರಿಷ್ಕರಿಸಲು ತಿಳಿಹೇಳಬೇಕು ಎಂದರು.

ವಿಶೇಷ ಪರಿಷ್ಕರಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿನ ವಿವರಗಳನ್ನು ಮತದಾರರಿಗೆ ತೋರಿಸಿ, ಅಗತ್ಯವಿದ್ದಲ್ಲಿ ಸಾರ್ವಜನಿಕರಿಂದ ತಿದ್ದುಪಡಿಗೆ ಪಾಸ್‌ ಪೋರ್ಟ್‌, ಚಾಲನಾ ಪರವಾನಗಿ, ಆಧಾರ್‌, ಪಡಿತರ ಚೀಟಿ, ಚುನಾವಣಾ ಆಯೋಗ ತಿಳಿಸಿರುವ ಇನ್ನಿತರ ಯಾವುದೇ ದಾಖಲೆಗಳ ಪೈಕಿ ಒಂದನ್ನು ಪಡೆದು ಮತದಾರರಿಂದ ದೃಢೀಕರಿಸಿಕೊಳ್ಳಬೇಕು ಎಂದು ಹೇಳಿದರು.

ನಮೂನೆ 6,7,8,8ಎ ಜೊತೆಗೆ ಈ ಬಾರಿ ವಿದೇಶದಲ್ಲಿರುವ ಭಾರತೀಯರನ್ನು ಮತದಾರರ ಪಟ್ಟಿಗೆ ಸೇರಿಸಲು 6ಎ ಮತ್ತು ಚುನಾವಣಾ ಗುರುತನ್ನು ಪುನಃ ವಿತರಿಸಲು 001 ನಮೂನೆಯಲ್ಲಿ ಮತದಾರರಿಂದ ಬಿ.ಎಲ್‌.ಒಗಳು ಮಾಹಿತಿ ಕಲೆ ಹಾಕಬೇಕು ಎಂದರು.

ಸಹಾಯಕ ಆಯುಕ್ತ ಡಾ| ಗೋಪಾಲಕೃಷ್ಣ ರಾಘವೇಂದ್ರ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ಎಲ್ಲ ಅಧಿಕಾರಿಗಳು ಪ್ರಮುಖವಾಗಿ ಶಾಲಾ-ಕಾಲೇಜುಗಳು ಕೈಜೋಡಿಸುವ ಮೂಲಕ 22 ಲಕ್ಷ ಜನಸಂಖ್ಯೆಯಲ್ಲಿ ಈಗಾಗಲೇ ಮೊಬೈಲ್‌ ಮೂಲಕ 50 ಸಾವಿರ ಜನರ ಮತದಾರರ ಪಟ್ಟಿ ಪರಿಶೀಲನೆ ಮುಗಿದಿದೆ. ಕಲಬುರಗಿ ಜಿಲ್ಲೆಯಲ್ಲೂ ಅಷ್ಟೆ ಜನಸಂಖ್ಯೆ ಇದ್ದು, ಕಡಿಮೆ ಮತದಾರರು ತಮ್ಮ ಮತದಾರರ ಪಟ್ಟಿ ಪರಿಶೀಲನೆ ಮಾಡಿಕೊಂಡಿದ್ದಾರೆ.

ನಾವು ಕೂಡ ತುಮಕೂರಿನಂತೆ ಕೆಲಸ ಮಾಡುವ ಮೂಲಕ ಯಶಸ್ವಿಯಾಗಬೇಕು ಎಂದರು. ಶಿಷ್ಟಾಚಾರ ತಹಶೀಲ್ದಾರ್‌ ಪ್ರಕಾಶ ಚಿಂಚೋಳಿಕರ್‌ ಮಾತನಾಡಿ, ಅ. 15ರೊಳಗೆ ಮತದಾರರ ಪಟ್ಟಿ ಪರಿಶೀಲನೆ ಸಂಪೂರ್ಣ ಮುಗಿಯಬೇಕು. ನಂತರ ಮನೆಮನೆಗೆ ತೆರಳಿ ಬಿಎಲ್‌ಒ ಪರಿಶೀಲನೆ ನಡೆಸಲಿದ್ದಾರೆ ಎಂದರು.

ಜಿಲ್ಲಾ ಮಾಸ್ಟರ್‌ ಟ್ರೆ„ನರ್‌ ಡಾ| ಶಶಿಶೇಖರ್‌ ರೆಡ್ಡಿ, ಅಂಗವಿಕಲರು 1950ಗೆ ಕರೆ ಮಾಡುವ ಮೂಲಕ ತಮ್ಮ ಮತದಾರರ ಪಟ್ಟಿ ಪರಿಷ್ಕರಿಸಬಹುದಾಗಿದೆ ಎಂದು ತಿಳಿಸಿದರು.

ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿ ಕಾರಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಪಿಯುಸಿ ಹಾಗೂ ಪದವಿ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿದ್ದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.