ಕಾರ್ಮಿಕರ ಧ್ವನಿ ಹತ್ತಿಕ್ಕುವ ಹುನ್ನಾರ

•ಗುತ್ತಿಗೆ ಪದ್ಧತಿಗೆ ಮನ್ನಣೆ •ದುಡಿಮೆ ಹಕ್ಕಿಗಾಗಿ ಪಣ ತೊಡಿ

Team Udayavani, May 2, 2019, 11:32 AM IST

2-MAY-10

ಕಲಬುರಗಿ: ಕನ್ನಡ ಸಾಹಿತ್ಯ ಸಂಘದಲ್ಲಿ ಬುಧವಾರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಎಂ. ಶಶಿಧರ ಮಾತನಾಡಿದರು.

ಕಲಬುರಗಿ: ಕಾರ್ಮಿಕ ವರ್ಗದ ಹಕ್ಕುಗಳ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಮಾನುಷವಾಗಿ ದಾಳಿ ನಡೆಸುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಕಾರ್ಮಿಕರ ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಹೋರಾಟಗಳನ್ನು ಬೆಳೆಸಬೇಕಾಗಿದೆ ಎಂದು ಆಲ್ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ (ಎಐಯುಟಿಯುಸಿ) ಸಂಘಟನೆ ರಾಜ್ಯ ಸಮಿತಿ ಸದಸ್ಯ ಎಂ. ಶಶಿಧರ ಹೇಳಿದರು.

ನಗರದ ಕನ್ನಡ ಸಾಹಿತ್ಯ ಸಂಘದಲ್ಲಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಉದ್ದಗಲಕ್ಕೂ ಕಾರ್ಮಿಕರ ಮೇಲೆ ಶೋಷಣೆ ಮುಂದುವರಿದಿದ್ದು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಂಟು ಗಂಟೆ ದುಡಿತದ ಅವಧಿ, ಮುಷ್ಕರದ ಹಕ್ಕು, ಖಾಯಮಾತಿ ಹಕ್ಕು ಸೇರಿದಂತೆ ಮುಂತಾದವುಗಳ ಮೇಲೆ ದಾಳಿ ನಡೆಯುತ್ತಿದೆ. ನ್ಯಾಯಕ್ಕಾಗಿ ಮುಷ್ಕರ ಘೋಷಿಸುವುದೇ ಕಾನೂನುಬಾಹಿರ ಎನ್ನುವ ಮೂಲಕ ಕಾರ್ಮಿಕರ ಧ್ವನಿ ಹತ್ತಿಕ್ಕುವ ಹುನ್ನಾರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಿನಕ್ಕೆ 8 ಗಂಟೆಗೆ ಸೀಮಿತವಾಗಿದ್ದ ಕಾರ್ಮಿಕರ ದುಡಿತದ ಅವಧಿಯನ್ನು 12-14 ಗಂಟೆಗಳಿಗೆ ಏರಿಸಲಾಗಿದೆ. ಗುತ್ತಿಗೆ ಪದ್ಧತಿ ನಿಯಂತ್ರಿಸಿ ಕ್ರಮೇಣ ನಿಷೇಧಿಸುವ ಬದಲಾಗಿ ಅದನ್ನೇ ನಿಯತಗೊಳಿಸಲಾಗಿದೆ. ಸರ್ಕಾರಿ ಇಲಾಖೆಗಳಲ್ಲೂ ಗುತ್ತಿಗೆ, ಹೊರಗುತ್ತಿಗೆ ಪದ್ಧತಿ ಯಾವುದೇ ಅಡೆತಡೆ ಇಲ್ಲದೇ ಸಾಗುತ್ತಿದೆ. ಆಶಾ, ಅಂಗನವಾಡಿ, ಬಿಸಿಯೂಟ ಯೋಜನೆಗಳಲ್ಲಿ ದುಡಿಯುವ ಲಕ್ಷಾಂತರ ಸ್ಕೀಂ ವರ್ಕರ್ಗಳಿಗೆ ಕಾರ್ಮಿಕರ ಸ್ಥಾನಮಾನ, ಕನಿಷ್ಠ ವೇತನ, ಇತರ ಸೌಲಭ್ಯಗಳನ್ನು ನೀಡದೆ ಬಿಡಿಗಾಸಿಗೆ ದುಡಿಸಿಕೊಳ್ಳಲಾಗುತ್ತಿದೆ. ಕಾರ್ಮಿಕ ದಿನದಂದು ನಾವು ದುಡಿಮೆ ಹಕ್ಕಿಗಾಗಿ, ಕಾರ್ಮಿಕರ ವಿಮೋಚನೆಗಾಗಿ ಪಣ ತೊಡಬೇಕಿದೆ ಎಂದು ಕರೆ ನೀಡಿದರು.

ಎಐಎಂಎಸ್‌ಎಸ್‌ ಮಹಿಳಾ ಸಂಘಟನೆ ಉಪಾಧ್ಯಕ್ಷೆ ಸೀಮಾ ಮುಖ್ಯ ಅತಿಥಿಯಾಗಿದ್ದರು. ಜಿಲ್ಲಾ ಸಮಿತಿ ಸದಸ್ಯೆ ಶಿವಲಿಂಗಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಐಯುಟಿಯುಸಿ ತಾಲೂಕು ಅಧ್ಯಕ್ಷ ವಿ.ಜಿ. ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಜಯಶ್ರೀ, ಬೋರಮ್ಮ, ರಾಘವೇಂದ್ರ ಎಂ.ಜಿ. ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಕಾರ್ಮಿಕರು ಭಾಗವಹಿಸಿದ್ದರು.

ಕಾಂಗ್ರೆಸ್‌ ಮತ್ತು ಬಿಜೆಪಿ ಆರ್ಥಿಕ ನೀತಿಗಳಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಕಳೆದ 10 ವರ್ಷದಲ್ಲಿ ದೇಶದ ಕಾರ್ಪೋರೇಟ್ ಮನೆತನಗಳಿಗೆ ಕೇಂದ್ರ ಬ್ಯಾಂಕ್‌ಗಳಲ್ಲಿ ಎನ್‌ಪಿಎ, ಬ್ಯಾಡ್‌ ಲೋನ್ಸ್‌ ಹೆಸರಲ್ಲಿ ಲಕ್ಷಾಂತರ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ಆದರೆ, 50 ಸಾವಿರ ರೂ. ಸಾಲ ಮಾಡಿದ ರೈತರು, ಅದನ್ನು ತೀರಿಸಲಾಗದೆ ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದರೂ, ಯಾರೂ ತಡೆಯಲು ಮುಂದಾಗುತ್ತಿಲ್ಲ.
ಎಂ.ಶಶಿಧರ,
ರಾಜ್ಯ ಸಮಿತಿ ಸದಸ್ಯ, ಎಐಯುಟಿಯುಸಿ

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.