100 ಕೋಟಿ ಜನರಿಗೆ ಲಭಿಸಿದೆ ಲಸಿಕೆ ಲಾಭ

Team Udayavani, Oct 22, 2021, 10:54 AM IST

7

ಚಿಂಚೋಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಕೊರೊನಾಕ್ಕೆ ಲಸಿಕೆ ಕಂಡು ಹಿಡಿಯಲು ವಿಜ್ಞಾನಿಗಳಿಗೆ ಪ್ರೇರಣೆ ನೀಡಿದ್ದರಿಂದ 100 ಕೋಟಿ ಜನರಿಗೆ ಕೋವಿಡ್‌ ಲಸಿಕೆ ಲಭಿಸಿದೆ ಎಂದು ತಾಪಂ ಇಒ ಅನಿಲಕುಮಾರ ರಾಠೊಡ ಹೇಳಿದರು.

ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಏರ್ಪಡಿಸಿದ್ದ ವೈದ್ಯರ ತಂಡದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೇರೆ ಕಡೆ ಕೆಲಸ ಅರಸಿ ಗುಳೆ ಹೋಗಿದ್ದ ಕಾರ್ಮಿಕರು ಮರಳಿ ತಮ್ಮ ಊರುಗಳಿಗೆ ಬಂದ ಸಂದರ್ಭದಲ್ಲಿ ಅವರಿಗೆ ಕ್ಯಾರಂಟೈನ್‌ ಮಾಡಲು ಸಮಾಜ ಕಲ್ಯಾಣ ಮತ್ತು ಬಿಸಿಎಂ ವಸತಿ ನಿಲಯದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ತಾಲೂಕಿನ ಸಮಗ್ರ ಇಲಾಖೆಗಳ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ, ಆರೋಗ್ಯ ಸಿಬ್ಬಂದಿ ಪರಿಶ್ರಮದಿಂದ ಸಾಧನೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಆಸ್ಪತ್ರೆಗೆ 50ಲಕ್ಷ ಮೌಲ್ಯದ ಉಪಕರಣ ವಿತರಣೆ

ತಾಲೂಕು ಆರೋಗ್ಯಾಧಿಕಾರಿ ಮಹ್ಮದ್‌ ಗಫಾರ ಅಹಮೆದ್‌ ಮಾತನಾಡಿ, ದೇಶದಲ್ಲಿ ವಿಜ್ಞಾನಿಗಳು 3ನೇ ಅಲೆ ಹಬ್ಬಲಿದೆ ಎಂದು ಎಚ್ಚರಿಕೆ ನೀಡಿದ್ದರು. ಕೋವಿಡ್‌ ಲಸಿಕೆ ನೀಡಿರುವುದರಿಂದ ಅದನ್ನು ಹತೋಟಿಗೆ ತರಲಾಗಿದೆ. ಲಸಿಕೆ ನೀಡುವಲ್ಲಿ ಜಿಲ್ಲೆಯಲ್ಲಿ ತಾಲೂಕು 2ನೇ ಸ್ಥಾನ ಪಡೆದಿದೆ. ಒಟ್ಟು 1,84,050 ಜನರಿಗೆ ಮೊದಲ ಹಂತದ ಲಸಿಕೆ ನೀಡಲಾಗಿದ್ದು, ಶೇ. 71ರಷ್ಟು ಸಾಧನೆ ಮಾಡಲಾಗಿದೆ. ಎರಡನೇ ಡೋಸ್‌ 56,140 ಜನರಿಗೆ ನೀಡಲಾಗಿದ್ದು, ಒಟ್ಟು ಶೇ. 43ರಷ್ಟು ಸಾಧನೆ ಮಾಡಲಾಗಿದೆ ಎಂದು ಹೇಳಿದರು.

ತಹಶೀಲ್ದಾರ್‌ ಅಂಜುಮ ತಬ್ಸುಮ್‌ ಮಾತನಾಡಿ, ಜನರ ಮನವೊಲಿಸಿ ಲಸಿಕೆ ನೀಡಿ ಉತ್ತಮ ಸಾಧನೆ ಮಾಡಿರುವುದಕ್ಕೆ ಅಧಿಕಾರಿಗಳನ್ನು ಅಭಿನಂದಿಸಿದರು. ಸಿಡಿಪಿಒ ಗುರುಪ್ರಸಾದ, ಹಣಮಂತ ಭೋವಿ, ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ಇಂಜಿನಿಯರ್‌ ದೇವೇಂದ್ರಪ್ಪ ಕೋರವಾರ, ಮಂಜುನಾಥ ಹಾಗೂ ಆರೋಗ್ಯ ಸಿಬ್ಬಂದಿ ಭಾಗವಹಿಸಿದ್ದರು. ಆಸ್ಪತ್ರೆ ಆಡಳಿತಾಧಿಕಾರಿ ಡಾ| ಸಂತೋಷ ಪಾಟೀಲ ಸ್ವಾಗತಿಸಿದರು, ಸುಧಾ ಕುಲಕರ್ಣಿ ವಂದಿಸಿದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.