ಸೇಡಂ ರೈತರ ಖಾತೆಗೆ 100 ಕೋಟಿ ಜಮಾ
Team Udayavani, May 24, 2022, 10:34 AM IST
ಕಲಬುರಗಿ: ಸರ್ಕಾರದ ವಿವಿಧ ಯೋಜನೆಗಳಿಂದ ಸೇಡಂ ತಾಲೂಕಿನ ರೈತರಿಗೆ 100 ಕೋ.ರೂ ಅಧಿಕ ಪರಿಹಾರ ಹಾಗೂ ನೆರವು ನಿಟ್ಟಿನಲ್ಲಿ ಅವರ ಖಾತೆಗಳಿಗೆ ನೇರವಾಗಿ ಜಮಾ ಆಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದರು.
ಸೇಡಂ ಪಟ್ಟಣದ ತಾಪಂ ಸಭಾಂಗಣದಲ್ಲಿ ಮಳೆಗಾಲ ಆರಂಭದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಪೂರ್ವ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, 2021-22ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಮೂಲಕ ತಾಲೂಕಿನ ರೈತರಿಗೆ ಬರೋಬ್ಬರಿ 100 ಕೋಟಿ ಹಣ ನೇರವಾಗಿ ಅವರ ಖಾತೆಗೆ ಬಂದಿದೆ. ಬೆಳೆವಿಮೆ ಮಾಡಿಕೊಂಡ 4862 ಜನ ರೈತರಿಗೆ 5.23 ಕೋಟಿ ಪರಿಹಾದ ಹಣ ಬಂದಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಒಟ್ಟು 27,384 ರೈತರಿಗೆ 60 ಕೋಟಿ ಹಣ ಸಂದಾಯವಾಗಿದೆ. ಬೆಳೆ ಪರಿಹಾರ ಯೋಜನೆಯಲ್ಲಿ 19,940 ಜನ ರೈತರಿಗೆ 23 ಕೋಟಿ 22 ಲಕ್ಷ ರೂ. ಹಣ ನೀಡಲಾಗಿದೆ. ಇನ್ನೂ ಹೆಚ್ಚು ರೈತರು ಬೆಳೆವಿಮೆ ಮಾಡಿಸಿಕೊಳ್ಳಬೇಕೆಂದರು.
ಇನ್ನು ಮಳೆಗಾಲದಲ್ಲಿ ಯಾವ ಅಧಿಕಾರಿಯು ಕುಂಟು ನೆಪ ಹೇಳಿ ರಜೆ ಪಡೆಯುವಂತಿಲ್ಲ. ಕೇಂದ್ರ ಸ್ಥಾನದಲ್ಲಿಯೇ ಇದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು. ಗಂಜಿ ಕೇಂದ್ರಗಳನ್ನು ಗುರುತಿಸಿ ಬೇಕಾದ ಸಿದ್ಧತೆ ಮಾಡಿಕೊಳ್ಳಬೇಕು. ಬೆಳೆ ಸಮೀಕ್ಷೆ, ಮನೆಗಳಿಗೆ ನೀರು ನುಗ್ಗಿ ನಷ್ಟ ಸಂಭವಿಸಿದ್ದು, ಮನೆ ಗೋಡೆ ಬಿದ್ದದ್ದು ಸಮೀಕ್ಷೆ ಮಾಡುವಾಗ ಸ್ವಲ್ಪ ಮಾನವೀಯತೆ ಇಟ್ಟು ವರದಿ ಮಾಡಬೇಕು. ಬಡವರ, ರೈತರ ಪರವಾದ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದರು.
ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಕಾರ್ತಿಕ, ಕೃಷಿ ಅಧಿಕಾರಿಗಳು ಸಭೆಯಲ್ಲಿದ್ದರು.2022-23ನೇ ಸಾಲಿನ ಬೆಳೆ ವಿಮೆಗೆ ಜುಲೈ 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಉದ್ದು, ಹೆಸರು, ತೊಗರಿ ಸೇರಿದಂತೆ ಇನ್ನಿತರ ಬೆಳೆಗಳಿಗೆ ವಿಮೆ ಮಾಡಿಸಬಹುದು. ರೈತರು ವಿಮೆಯ ಲಾಭ ಪಡೆದುಕೊಳ್ಳಬೇಕು. ಬಿತ್ತನೆ ಬೀಜದ ಯಾವುದೇ ಕೊರತೆ ಇಲ್ಲ. ಸಕಾಲಕ್ಕೆ ಬೀಜ ಮತ್ತು ಗೊಬ್ಬರ ನೀಡಲಾಗುವುದು. -ಎ.ವೈ. ಹಂಪಣ್ಣ, ಸಹಾಯಕ ಕೃಷಿ ನಿರ್ದೇಶಕ
ಪಿಎಂ ಕಿಸಾನ್ ಸಮ್ಮಾನ ಯೋಜನೆಯಲ್ಲಿ ಹಿಂದೆಂದು ಬಾರದಷ್ಟು ಹಣ ಬರುತ್ತಿದೆ. ಕಂದಾಯ ಮತ್ತು ಕೃಷಿ ಅಧಿಕಾರಿಗಳ ಸತತ ಪರಿಶ್ರಮದಿಂದ ಸೇಡಂ ತಾಲೂಕಿನ ರೈತರಿಗೆ 60 ಕೋಟಿ ಹಣ ನೇರವಾಗಿ ಅವರ ಖಾತೆಗೆ ಬರುತ್ತಿದೆ. ಸರ್ಕಾರದ ಎಲ್ಲ ಯೋಜನೆಗಳನ್ನು ಅವರ ಮನೆ ಬಾಗಿಲಿಗೆ ಹೋಗಿ ತಲುಪಿಸಿ, ಜನ ಸಾಮಾನ್ಯರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವಲ್ಲಿ ಶ್ರಮ ವಹಿಸುವಂತೆ ಸೂಚನೆ ನೀಡಿದ್ದೇನೆ. -ರಾಜಕುಮಾರ ಪಾಟೀಲ ತೆಲ್ಕೂರ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರ್ಗಿಯಲ್ಲಿ 74.50 ಲಕ್ಷ ರೂ. ಮೌಲ್ಯದ 745.410 ಕೆಜಿ ಗಾಂಜಾ ದಹನ
ಬೆನ್ನಟ್ಟಿದ ಬೀದಿನಾಯಿಗಳ ಹಿಂಡು : ತಪ್ಪಿಸಿಕೊಳ್ಳುವ ಭರದಲ್ಲಿ ಬಿದ್ದು ಪತ್ರಕರ್ತನಿಗೆ ಗಾಯ
ಗಾಣಗಾಪುರ ದೇವರ ಹೆಸರಿನಲ್ಲಿ ವಂಚನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವ ನಿರಾಣಿ
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಗುವುದರಲ್ಲಿ ಸಂದೇಹವಿಲ್ಲ: ಮುರುಗೇಶ್ ನಿರಾಣಿ
ಮೂಲ ಸೌಕರ್ಯಕ್ಕೆ ಆಗ್ರಹಿಸಿ ನಿರಶನ
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ
ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ
ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ
ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ
ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ : ವಾಹನ ಸವಾರಿಗೆ ತೊಂದರೆ