2.5 ಲಕ್ಷ  ರೂ. ಮೌಲ್ಯದ ಮದ್ಯ-ಬಿಯರ್‌ ವಶ


Team Udayavani, May 3, 2021, 3:27 PM IST

ವಬನಬನಹ

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಕಠಿಣ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿ ಮದ್ಯ ಮಾರಾಟ ಮತ್ತು ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ 2.5 ಲಕ್ಷ ರೂ. ಮೌಲ್ಯದ ಮದ್ಯ ಮತ್ತು ಬಿಯರ್‌ ಹಾಗೂ ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.

ಕಲಬುರಗಿ ವಿಭಾಗದ ಅಬಕಾರಿ ಜಂಟಿ ಆಯುಕ್ತ ಎಸ್‌.ಕೆ. ಕುಮಾರ, ಅಬಕಾರಿ ಉಪ ಆಯುಕ್ತೆ ಶಶಿಕಲಾ ಎಸ್‌. ಒಡೆಯರ್‌ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅ ಧೀಕ್ಷಕ ಮಹ್ಮದ್‌ ಇಸ್ಮಾಯಿಲ್‌ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಗಸ್ತು ಕಾರ್ಯಾಚರಣೆ ಸಂದರ್ಭದಲ್ಲಿ ನಗರದ ಹುಮನಾಬಾದ ರಸ್ತೆಯ ಉಪಳಾಂವ ಕ್ರಾಸ್‌ ಹತ್ತಿರ ಬೈಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದಾಗ 17.280 ಲೀಟರ್‌ ಮದ್ಯ ಜಪ್ತಿ ಮಾಡಲಾಗಿದೆ. ಅದೇ ರೀತಿ ನಗರದ ಸ್ಟೇಷನ್‌ ಪ್ರದೇಶದಲ್ಲಿಯೂ 17.280 ಲೀಟರ್‌ ಮದ್ಯ ವಶಕ್ಕೆ ಪಡೆಯಲಾಗಿದೆ.

ನಗರದ ನೆಹರು ಗಂಜ್‌ ಪ್ರದೇಶದಲ್ಲಿ ಅಕ್ರಮವಾಗಿ ಸಾಗಾಣಿಕೆಗೆ ಬಳಸಿದ್ದ ಎರಡು ಬೈಕ್‌ ಹಾಗೂ 21.600 ಲೀಟರ್‌ ಮದ್ಯ ಜಪ್ತಿ ಮಾಡಲಾಗಿದೆ. ತಾಲೂಕಿನ ನಂದಿಕೂರ ಗ್ರಾಮದಲ್ಲೂ 20.610 ಲೀಟರ್‌ ಅಕ್ರಮ ಮದ್ಯವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಯಡ್ರಾಮಿ ತಾಲೂಕಿನ ಅಂಬರಖೇಡ ಗ್ರಾಮದ ಆಂಜನೇಯ ದೇವಸ್ಥಾನ ಸಮೀಪದ ಪಾಳು ಬಿದ್ದ ಮನೆ ಮೇಲೆ ದಾಳಿ ಮಾಡಿ ಮಾರಾಟಕ್ಕೆಂದು ಸಂಗ್ರಹಿಸಿಟ್ಟಿದ್ದ ಎಂಟು ಪೆಟ್ಟಿಗೆ (69.120 ಲೀಟರ್‌) ದೇಶಿ ಮದ್ಯ ಜಪ್ತಿ ಮಾಡಲಾಗಿದೆ.

ಅಫಜಲಪುರ ತಾಲೂಕಿನ ಉಮರಗಾ ಗ್ರಾಮದ ಲಕೀÒ$¾ಕಾಂತ ಎನ್ನುವರ ಕಿರಾಣಿ ಅಂಗಡಿ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಎರಡು ಪೆಟ್ಟಿಗೆ (17.280 ಲೀಟರ್‌) ಒರಿಜನಲ್‌ ಚಾಯ್ಸ ವಿಸ್ಕಿ ಹಾಗೂ 15.720 ಲೀಟರ್‌ ಬೀಯರ್‌ ವಶ ಪಡಿಸಿಕೊಂಡಿದ್ದಾರೆ. ಆರೋಪಿ ಲಕ್ಷ್ಮೀಕಾಂತ ಪರಾರಿಯಾಗಿದ್ದು, ಅಧಿಕಾರಿಗಳು ಶೋಧ ನಡೆಸಿದ್ದಾರೆ. ಕಲಬುರಗಿ ಉಪ ವಿಭಾಗದ ಅಬಕಾರಿ ನಿರೀಕ್ಷಕ ವಿಠಲರಾವ್‌ ಎಂ.ವಾಲಿ, ಮಲ್ಲಿಕಾರ್ಜುನ ಡಿ., ಬಾಲಕೃಷ್ಣ ಮುದಕಣ್ಣ, ಅಬಕಾರಿ ಉಪ ನಿರೀಕ್ಷಕರಾದ ಸಂತೋಷ ಕುಮಾರ, ನರೇಂದ್ರ ಕುಮಾರ, ಪ್ರವೀಣಕುಮಾರ, ಬಸವರಾಜ ಉಳ್ಳೆಸೂಗೂರು, ಅಬಕಾರಿ ಮುಖ್ಯ ಪೇದೆ ಗಳಾದ ಬಸವರಾಜ ಎಂ., ಸಿದ್ದಮಲ್ಲಪ್ಪ, ಜೇವರ್ಗಿ ವಲಯದ ಅಬಕಾರಿ ನಿರೀಕ್ಷಕಿ ವನಿತಾ ಸೀತಾಳೆ, ಆಳಂದ ವಲಯದ ಅಬಕಾರಿ ನಿರೀಕ್ಷಕ ಶ್ರೀಶೈಲ ಅವಜಿ ಮತ್ತು ಅಬಕಾರಿ ಉಪ ನಿರೀಕ್ಷಕ ಆಶೋಕ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಕೊರೊನಾ ಎರಡನೇ ಅಲೆ ತಡೆಗಟ್ಟಿ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಮದ್ಯ ವಹಿವಾಟಿಗೆ ಸಮಯ ನಿಗದಿಪಡಿಸಿದೆ. ಇದನ್ನು ಮೀರಿ ಮದ್ಯ ಮಾರಾಟ ಮತ್ತು ಸಾಗಾಟ ಸಾಗಾಟ ಮಾಡುವಂತಿಲ್ಲ ಎಂದು ಅಬಕಾರಿ ಉಪ ಅ ಧೀಕ್ಷಕ ಮಹ್ಮದ್‌ ಇಸ್ಮಾಯಿಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.