ಮುಲ್ಲಾಮಾರಿ ನದಿಗೆ 300 ಕ್ಯೂಸೆಕ್‌ ನೀರು ಬಿಡುಗಡೆ


Team Udayavani, Jun 19, 2021, 3:29 PM IST

ರತಯುಉಯತರತಯು

ಚಿಂಚೋಳಿ: ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಜಲಾಶಯದ ಸುರಕ್ಷತೆ ಕಾಪಾಡಲು ಮತ್ತು ಪ್ರವಾಹ ಪರಿಸ್ಥಿತಿ ಎದುರಾಗದಂತೆ ನಿಯಂತ್ರಿಸಲು ಪ್ರತಿನಿತ್ಯ 300 ಕ್ಯೂಸೆಕ್‌ ನೀರನ್ನು ಮುಲ್ಲಾಮಾರಿ ನದಿಗೆ ಹರಿದು ಬಿಡಲಾಗುತ್ತಿದೆ. ಆದ್ದರಿಂದ ನದಿಪಾತ್ರದ ಗ್ರಾಮಸ್ಥರು ನದಿಗೆ ಇಳಿಯದಂತೆ ಎಚ್ಚರಿಕೆಯಿಂದ ಇರಬೇಕು ಎಂದು ಯೋಜನೆ ಎಇಇ ಹಣಮಂತರಾವ್‌ ಪೂಜಾರಿ ತಿಳಿಸಿದ್ದಾರೆ.

ಕೆಳದಂಡೆ ಮುಲ್ಲಾಮಾರಿ ಜಲಾಶಯದ ಒಟ್ಟು ಗರಿಷ್ಠ ನೀರಿನ ಮಟ್ಟ 491ಮೀಟರ್‌ ಇದೆ. ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ನೀರು ಹರಿದು ಬಿಡಲಾಗುತ್ತಿದ್ದು, ಸದ್ಯ 489.5 ಮೀಟರ್‌ ನೀರು ಸಂಗ್ರಹವಿದೆ. ಕಳೆದ ವರ್ಷ ಜೂನ್‌ ತಿಂಗಳಿಂದ ಪ್ರಾರಂಭವಾದ ಮಳೆ ಅಕ್ಟೋಬರ್‌ ತಿಂಗಳ ಅಂತ್ಯದ ವರೆಗೆ ಸುರಿದ ಪರಿಣಾಮ ಜಲಾಶಯದಲ್ಲಿ ಒಳಹರಿವು ಒಮ್ಮೆಲೇ ಹೆಚ್ಚಾಗಿದೆ.

ಆದ್ದರಿಂದ ಮುಲ್ಲಾಮಾರಿ ನದಿಗೆ ಒಂದೇ ರಾತ್ರಿ 80 ಸಾವಿರ ಕ್ಯೂಸೆಕ್‌ ನೀರನ್ನು ಹರಿ ಬಿಡಲಾಗಿತ್ತು. ಇದರಿಂದಾಗಿ ಚಿಮ್ಮನಚೋಡ, ತಾಜಲಾಪುರ, ಕನಕಪುರ, ಗಾರಂಪಳ್ಳಿ, ಗೌಡನಹಳ್ಳಿ, ನಿಮಾಹೊಸಳ್ಳಿ, ಚಿಂಚೋಳಿ, ಚಂದಾಪುರ, ಅಣವಾರ, ಪರದಾರ ಮೋತಕಪಳ್ಳಿ, ಗರಗಪಳ್ಳಿ, ಬುರಗಪಳ್ಳಿ, ಕರ್ಚಖೇಡ, ಜಟ್ಟೂರ, ಹಲಕೋಡ, ಪೋತಂಗಲ್‌ ಹಾಗೂ ಸೇಡಂ ತಾಲೂಕಿನ ಕೆಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಸಾಕಷ್ಟು ಹಾನಿ ಉಂಟು ಮಾಡಿತ್ತು.

ಅನೇಕ ಮನೆಗಳಿಗೆ ನೀರು ನುಗ್ಗಿ ಹಾನಿ ಆಗಿತ್ತು. ಕಳೆದ ವರ್ಷದಂತೆ ಆಸ್ತಿಪಾಸ್ತಿಗೆ ಯಾವುದೇ ಹಾನಿಯಾಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಈ ವರ್ಷ ಜಲಾಶಯದಿಂದ ಪ್ರತಿನಿತ್ಯ ನದಿಗೆ ನೀರು ಹರಿ ಬಿಡಲಾಗುತ್ತಿದೆ. ನದಿ ಪಾತ್ರದ ಜನರು ಜನರು ಮತ್ತು ಜಾನು ವಾರುಗಳನ್ನು ನದಿಯತ್ತ ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.