ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ ಬರೆದ 9337 ಅಭ್ಯರ್ಥಿಗಳು
Team Udayavani, Nov 23, 2020, 8:25 PM IST
ಕಲಬುರಗಿ: ಜಿಲ್ಲೆಯಲ್ಲಿ ರವಿವಾರ ನಡೆದ ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೇಬಲ್ (ಕೆಎಸ್ ಆರ್‌ಪಿ, ಐಆರ್‌ಬಿ) ಪರೀಕ್ಷೆಯಲ್ಲಿ ಸುಮಾರು 9,337 ಅಭ್ಯರ್ಥಿಗಳು ಪರೀಕ್ಷೆ ಬರೆದರು.
ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಅಂದಾಜು 8,929 ಅಭ್ಯರ್ಥಿಗಳು ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯಲ್ಲಿ 4,996 ಸೇರಿ13,925 ಅಭ್ಯರ್ಥಿಗಳು ಲಿಖೀತ ಪರೀಕ್ಷೆಗೆ ಅರ್ಹತೆಹೊಂದಿದ್ದರು. ಇದರಲ್ಲಿ ಆಯುಕ್ತಾಲಯದವ್ಯಾಪ್ತಿಯಲ್ಲಿ 6,541 ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯಲ್ಲಿ 2,796 ಅಭ್ಯರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಒಟ್ಟು ಅಭ್ಯರ್ಥಿಗಳ ಪೈಕಿ 4,588 ಅಭ್ಯರ್ಥಿಗಳು ಪರೀಕ್ಷೆಯಿಂದ ದೂರ ಉಳಿದರು. ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ 14 ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ 13 ಸೇರಿ ಜಿಲ್ಲೆಯಲ್ಲಿ ಒಟ್ಟು 27 ಪರೀಕ್ಷಾ ಕೇಂದ್ರಗಳನ್ನುತೆರೆಯಲಾಗಿತ್ತು. ಬೆಳಗ್ಗೆ 11 ಗಂಟೆಗೆ ಆರಂಭವಾದ ಪರೀಕ್ಷೆ ಮಧ್ಯಾಹ್ನ 12:30ರವರೆಗೆ ನಡೆಯಿತು.
ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಸೇರಿ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಪರೀಕ್ಷೆಗೂ ಅರ್ಧ ಗಂಟೆ ಮುಂಚಿತವಾಗಿಯೇಅಭ್ಯರ್ಥಿಗಳು ಕೇಂದ್ರಗಳಿಗೆ ಬಂದರು.ಕೇಂದ್ರಗಳ ಗೇಟ್ ಬಳಿಯೇ ಎಲ್ಲರೂ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಲಾಯಿತು. ಮಾಸ್ಕ್ ಹಾಕದವರಿಗೆ ಇಲಾಖೆಯಿಂದಲೇ ನೀಡಲಾಯಿತು.ಪ್ರತಿಯೊಬ್ಬರಿಗೂ ಸ್ಯಾನಿಟೈಸರ್ ಮಾಡಿ, ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು. ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ಒಳಗೆ ಬಿಡಲಾಯಿತು.
ಪರೀಕ್ಷೆಯಲ್ಲಿ ಅಕ್ರಮ ತಡೆಯುವ ಉದ್ದೇಶದಿಂದ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ಪ್ರತಿ ಪರೀಕ್ಷಾ ಕೊಠಡಿಗೂ ಸಿಸಿ ಕ್ಯಾಮರಾ ಕಣ್ಗಾವಲು ಕಡ್ಡಾಯ ಮಾಡಲಾಗಿತ್ತು.ಒಂದು ಡೆಸ್ಕ್ ಗೆ ಕೇವಲ ಒಬ್ಬರಂತೆ ಪ್ರತಿ ಕೊಠಡಿಗಳಲ್ಲಿ ತಲಾ 20 ಅಭ್ಯರ್ಥಿಗಳನ್ನು ಮಾತ್ರ ಬಿಡಲಾಯಿತು. ಇದರಿಂದ ಒಬ್ಬರಿಂದ ಒಬ್ಬರಿಗೆ ಕನಿಷ್ಟ ದೈಹಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಯಿತು. ಮೂರು ಪರೀಕ್ಷೆಗಳಿಗೆ ಒಬ್ಬ ಡಿಎಸ್‌ಪಿ ಉಸ್ತುವಾರಿ ವಹಿಸಲಾಗಿತ್ತು. ಜತೆಗೆ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಇನ್‌ಸ್ಪೆಕ್ಟರ್ ಹಾಗೂ ತಲಾ ನಾಲ್ವರು ಪೊಲೀಸ್‌ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಅಲ್ಲದೇ, ಪ್ರತಿ 20 ಅಭ್ಯರ್ಥಿಗಳಿಗೆ ಒಬ್ಬ ಪರೀಕ್ಷಾ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿತ್ತು. ಪ್ರಶ್ನೆಪತ್ರಿಕೆಗಳ ಸೀಲ್ ಒಡೆಯುವುದು ಹಾಗೂ ಉತ್ತರಪತ್ರಿಕೆಗಳ ಸಂಗ್ರಹವನ್ನು ವಿಡಿಯೋ ಚಿತ್ರೀಕರಣ ಮಾಡಲಾಯಿತು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444