ಪತ್ನಿಯನ್ನು ಕೊಂದು ಮೂರು ದಿನ ಮಂಚದ ಕೆಳಗೆ ಮುಚ್ಚಿಟ್ಟ ಪಾಪಿ‌ ಗಂಡ

Team Udayavani, Nov 5, 2019, 2:56 PM IST

ಕಲಬುರಗಿ: ಪತ್ನಿಯನ್ನು ಕೊಲೆ ಮಾಡಿ ಮೂರು ದಿನ ಮನೆಯಲ್ಲಿ ಮುಚ್ಚಿಟ್ಟಿದ್ದ ಪ್ರಕರಣ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಸಂಗೀತಾ ಸಕ್ಕರಗಿ (35) ಕೊಲೆಯಾದ ನತದೃಷ್ಟೆ. ಶ್ರೀಶೈಲ ಸಕ್ಕರಗಿ (45) ಹೆಂಡತಿಯನ್ನು ಕೊಂದ ಪಾಪಿ ಪತಿ. ತನ್ನ ಹೆಂಡತಿ ಸಂಗೀತಾಳನ್ನು ಕೊಲೆ ಮಾಡಿ ಪ್ರಕರಣ ಬೆಳಕಿಗೆ ಬರದಂತೆ ಮಂಚದ ಕೆಳಗೆ ಮೂರು ದಿನ ಮುಚ್ಚಿಟ್ಟು, ಅದೇ ಮಂಚದ ಮೇಲೆ‌‌ ಪಾಪಿ‌ ಪತಿ ಶ್ರೀಶೈಲ ಮಲಗುತ್ತಿದ್ದ ಎನ್ನಲಾಗಿದೆ.

ಮನೆಯಲ್ಲಿ ಶವದ ವಾಸನೆ ಬಂದಿದ್ದರಿಂದ ಸ್ಥಳೀಯರು ಅನುಮಾಗೊಂಡು ಪೊಲೀಸರಿಗೆ ಮಾಹಿತಿ‌ ಮುಟ್ಟಿಸಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದ ನಂತರ ಸಂಗೀತಾ ಕೊಲೆಯಾಗಿದ್ದು ಬೆಳಕಿಗೆ ಬಂದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ಶ್ರೀಶೈಲನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾದನಹಿಪ್ಪರಗಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.‌

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ