ಆದರ್ಶಗೌಡ ಕೃತಿ ಬಿಡುಗಡೆ


Team Udayavani, Apr 24, 2017, 4:08 PM IST

gul3.jpg

ಕಲಬುರಗಿ: ಭಾರತೀಯ ಜನತಾ ಪಕ್ಷವನ್ನು ಜಿಲ್ಲೆಯಲ್ಲಿ ಕೆಳಹಂತದಿಂದ ಸಂಘಟಿಸಿದ ಕೀರ್ತಿ ದಿವಂಗತ ಚಂದ್ರಶೇಖರ ಪಾಟೀಲ ಅವರಿಗೆ ಸಲ್ಲುತ್ತದೆ. ಶಾಸಕರಾಗಿ ಜನಪ್ರಿಯತೆಗೆ ಸಾಕ್ಷಿ ಎಂಬುದನ್ನು ಅವರು ನಿರೂಪಿಸಿದ್ದರು ಎಂದು ವಿಧಾನ ಪರಿಷತ್‌ ಸದಸ್ಯ ಅಮರನಾಥ ಪಾಟೀಲ ಹೇಳಿದರು. 

ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ರವಿವಾರ ಧೀಮಂತ ನಾಯಕ ಆದರ್ಶಗೌಡರು ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಶಾಸಕರಾಗಿ ಚಂದ್ರಶೇಖರ ಪಾಟೀಲ ಹೊಂದಿದ್ದ ಜನಪ್ರಿಯತೆ ನಮ್ಮೆಲ್ಲರಿಗೂ ಮಾದರಿ. ಅಧಿಕಾರಕ್ಕಾಗಿ ಅವರು ಎಂದೂ ಆಸೆಪಟ್ಟವರಲ್ಲ.

ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರುವಂತೆ ಮಾಡಿದ ಪ್ರಯತ್ನ ನಿಜಕ್ಕೂ ದೊಡ್ಡ ಕಾರ್ಯ.  ಈ ಗುಣ ಎಲ್ಲರಲ್ಲೂ ಬರುವಂತದ್ದಲ್ಲ. ಅದು ರೇವೂರ ಗೌಡರಲ್ಲಿತ್ತು ಎಂದರು. ಮಾಜಿ ಸಚಿವ ರೇವು ನಾಯಕ ಬೆಳಮಗಿ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಬೆಳೆಯುವಲ್ಲಿ ತಾವು, ರೇವೂಗೌಡರು ಹಾಗೂ  ಬಸವರಾಜ ಸೇಡಂ ಪ್ರಮುಖ ಕಾರಣರು ಎಂಬುದನ್ನು ಯಾರೂ ಮರೆಯುವಂತಿಲ್ಲ ಎಂದು ಹೇಳಿದರು.

ಶ್ರೀಶೈಲ ಸಾರಂಗಮಠದ ಡಾ| ಸಾರಂಗಧರೇಶ್ವರ ಮಹಾಸ್ವಾಮೀಜಿ  ಸಮಾರಂಭ ಉದ್ಘಾಟಿಸಿ, ರೇವೂರ ಗೌಡರು ಎನ್ನುವ ಶಬ್ದದಲ್ಲಿಯೇ ಶಕ್ತಿ ಇದೆ ಎಂಬುದನ್ನು ಈ ಭಾಗಕ್ಕೆ ದಿವಂಗತ ಚಂದ್ರಶೇಖರ ಪಾಟೀಲ ತೋರಿಸಿಕೊಟ್ಟಿದ್ದರು. ಅವರ ಹಾದಿಯಲ್ಲಿಯೇ ಅವರ ಪುತ್ರರಾಗಿರುವ ಶಾಸಕ ದತ್ತಾತ್ರೇಯ ಪಾಟೀಲ ಮುನ್ನಡೆಯುತ್ತಿದ್ದಾರೆ. ಇವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ ಎಂದರು. 

ಕಡಗಂಚಿ ಮಠದ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ, ಚಿಣಮಗೇರಾ ಸಿದ್ಧರಾಮ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ, ಪ್ರೊ| ಬಿ.ಕೆ. ಚಳಗೇರಿ, ಎ.ಕೆ.ರಾಮೇಶ್ವರ, ಬಿ.ಎಸ್‌.ಬಿರಾದಾರ, ಎಸ್‌.ಎಸ್‌. ಗುಬ್ಬಿ, ಅಲೋಕ ಸಿ. ರೇವೂರ, ಆರ್‌.ಎ. ಚಿನಿವಾಲ ಮುಂತಾದವರಿದ್ದರು. ಪ್ರಾಧ್ಯಾಪಕ ಡಾ| ಚಿ.ಸಿ.ನಿಂಗಣ್ಣ ಕೃತಿ ಕುರಿತು ಮಾತನಾಡಿದರು. 

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.