ತೆರಿಗೆ ಸಂಗ್ರಹದಲ್ಲಿ ಕಲಬುರಗಿ ಪಾಲಿಕೆ ದಾಖಲೆ


Team Udayavani, Aug 4, 2019, 11:06 AM IST

gb-tdy-2

ಕಲಬುರಗಿ: ಪಾಲಿಕೆ ತೆರಿಗೆ ಸಿಬ್ಬಂದಿ ಹಾಗೂ ಕಂದಾಯ ತೆರಿಗೆ ಅಧಿಕಾರಿಗಳು ಮನೆ-ಮನೆಗೆ ತೆರಳಿ ತೆರಿಗೆ ಸಂಗ್ರಹಿಸುತ್ತಿದ್ದಾರೆ.

ಕಲಬುರಗಿ: ಕಳೆದ ಮೂರು ತಿಂಗಳ ಅವಧಿಯಲ್ಲಿ ಮಹಾನಗರ ಪಾಲಿಕೆಗೆ ದಾಖಲೆಯ 12 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಇದು ವರ್ಷದ ಮೊದಲ ತ್ತೈಮಾಸಿಕ ಅವಧಿಯಲ್ಲಿ ಪಾಲಿಕೆ ಇತಿಹಾಸದಲ್ಲಿಯೇ ದಾಖಲೆ ಮೊತ್ತವಾಗಿದೆ.

ಇದೆಲ್ಲ ಆಗಿದ್ದು, ಮನೆ-ಮನೆಗೆ ಹಾಗೂ ವಾಣಿಜ್ಯ ಮಳಿಗೆಗೆ ಹೋಗಿ ತೆರಿಗೆ ಸಂಗ್ರಹ ಮಾಡಿದ್ದರಿಂದ ಸಾಧ್ಯವಾಗಿದೆ. ಈ ಹಿಂದಿನ ಕೆಲ ವರ್ಷಗಳಲ್ಲಿ ವರ್ಷಪೂರ್ತಿಯಾದರೂ ಇಷ್ಟೊಂದು ಮೊತ್ತದ ತೆರಿಗೆ ಸಂಗ್ರವಾಗಿರಲಿಲ್ಲ.

ಕಳೆದ ಏಪ್ರಿಲ್ 1ರಿಂದ ವಿದ್ಯುನ್ಮಾನ ಯಂತ್ರದಿಂದ (ಇಡಿಸಿ) ಪಾಲಿಕೆಯ ಬಿಲ್ ಕಲೆಕ್ಟದಾರರು, ಕಂದಾಯ ಇನ್ಸಪೆಕ್ಟರ್‌ ಹಾಗೂ ಅಧಿಕಾರಿಗಳು ಮಹಾನಗರದ ಮನೆ-ಮನೆಗೆ ಹೋಗಿ ತೆರಿಗೆ ಸಂಗ್ರಹಿಸುತ್ತಿರುವ ಕಾರ್ಯಕ್ಕೆ ವ್ಯಾಪಕ ಸ್ಪಂದನೆಯಾಗುತ್ತಿದ್ದು, ಹಳೆ ತೆರಿಗೆಯೆಲ್ಲ ಸಂಗ್ರಹವಾಗುತ್ತಿದೆ.

ವರ್ಷಂಪ್ರತಿ ಜನೆವರಿಯಿಂದ ಮಾರ್ಚ್‌ವರೆಗೆ ಶೇ. 70ರಷ್ಟು ತೆರಿಗೆ ಸಂಗ್ರಹವಾಗುತ್ತಿತ್ತು. ಆದರೆ ಈಗ ಮನೆ-ಮನೆಗೆ ತೆರಳಿ ತೆರಿಗೆ ಸಂಗ್ರಹಕ್ಕೆ ಮುಂದಾಗಿದ್ದರಿಂದ ಮೂರು ತಿಂಗಳ ಅವಧಿಯಲ್ಲಿಯೇ 12 ಕೋಟಿ ರೂ. ವಿವಿಧ ನಮೂನೆಯ ತೆರಿಗೆ ಸಂಗ್ರವಾಗಿದೆ. ಈ ವರ್ಷ 25 ಕೋಟಿ ರೂ. ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ನಿಗದಿತ ಚಾಲ್ತಿ 25 ಕೋಟಿ ರೂ. ಹಾಗೂ ಬಾಕಿ 12 ಕೋಟಿ ರೂ. ತೆರಿಗೆ ವರ್ಷದ ಆರ್ಥಿಕ ವರ್ಷಾಂತ್ಯಕ್ಕೆ ಸಂಗ್ರಹಿಸಲು ಪಾಲಿಕೆ ಉದ್ದೇಶಿಸಿದೆ. ಒಂದು ವೇಳೆ ಇದೆಲ್ಲ ಸಾಧ್ಯವಾದರೆ ಪಾಲಿಕೆ ಇತಿಹಾಸದಲ್ಲೇ ದಾಖಲೆ ತೆರಿಗೆ ಸಂಗ್ರಹವಾಗುತ್ತದೆ.

ಈ ಮೊದಲು ತೆರಿಗೆ ತುಂಬಲು ಪಾಲಿಕೆಗೆ ಬರಬೇಕಿತ್ತು. ಪಾಲಿಕೆಗೆ ಹೋದರೆ ಸರದಿ ಸಾಲು ಹೆಚ್ಚಿನ ಸಂಖ್ಯೆಯಲ್ಲಿರುತ್ತಿತ್ತು. ಚಲನ್‌ ತುಂಬಬೇಕು. ಒಮ್ಮೊಮ್ಮೆ ಸರತಿ ಸಾಲಿನಲ್ಲಿ ನಿಂತು ವಾಪಸ್ಸು ಬಂದಿದ್ದೆವು. ಆದರೆ ಪಾಲಿಕೆಯು ಮನೆಗೆ ಬಂದು ತೆರಿಗೆ ಪಡೆಯುತ್ತಿರುವುದು ಉತ್ತಮ ಹಾಗೂ ಅನುಕೂಲವಾಗಿದೆ ಎನ್ನುತ್ತಾರೆ ಲಾಲಗೇರಿ ಕ್ರಾಸ್‌ನ ನಿವಾಸಿ ವಿವೇಕ ಪಾಟೀಲ ಹಾಗೂ ಇನ್ನಿತರರು.

20 ಬಿಲ್ ಕಲೆಕ್ಟದಾರರು, ಐದು ಕಂದಾಯ ಇನ್ಸಪೆಕ್ಟರ್‌ ಹಾಗೂ ಮೂವರು ಅಧಿಕಾರಿಗಳು ಮನೆ-ಮನೆಗೆ ಹೋಗಿ ತೆರಿಗೆ ಸಂಗ್ರಹದಲ್ಲಿ ಕಾರ್ಯನಿರತವಾಗಿದ್ದಾರೆ. ಪಾಲಿಕೆ ಆಯುಕ್ತರಾದ ಫೌಜಿಯಾ ತರನ್ನುಮ್‌ ಅವರ ಆಸಕ್ತಿ ಹಾಗೂ ಹೊಸ ತಂತ್ರಜ್ಞಾನ ಬಳಕೆಯಿಂದ ಇದೆಲ್ಲ ಸಾಧ್ಯವಾಗಿದೆ.

ತೆರಿಗೆ ಹಣ ನೌಕರರ ವೇತನಕ್ಕೆ: ತೆರಿಗೆ ಸಂಗ್ರಹದಿಂದ ಬಂದಿರುವ ಹಣವನ್ನು ಪಾಲಿಕೆ ನೌಕರರ ವೇತನಕ್ಕೆ ಬಳಸಲಾಗಿದೆ. ಹೀಗಾಗಿ ಎರಡ್ಮೂರು ತಿಂಗಳಿಗೊಮ್ಮೆ ಆಗುತ್ತಿದ್ದ ವೇತನ ಈಗ ಕಾಲ-ಕಾಲಕ್ಕೆ ಆಗುವಂತಾಗಿದೆ. ತೆರಿಗೆ ಹೀಗೆ ಸಂಗ್ರಹವಾದರೆ ಮತ್ತಷ್ಟು ಅಭಿವೃದ್ಧಿ ಕೈಗೊಳ್ಳಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು. ಆಶ್ಚರ್ಯವೆನಂದರೆ ಪಾಲಿಕೆ ಚುನಾಯಿತ ಆಡಳಿತಾವಧಿ ಕಳೆದ ಏಪ್ರಿಲ್ ತಿಂಗಳಿನ ಮೊದಲ ವಾರದಲ್ಲಿಯೇ ಮುಕ್ತಾಯವಾಗಿದೆ. ಪ್ರಾದೇಶಿಕ ಆಯುಕ್ತರು ಆಡಳಿತಾಧಿಕಾರಿಗಳಾಗಿದ್ದಾರೆ. ಈ ಅವಧಿಯಲ್ಲಿಯೇ ಹೆಚ್ಚಿನ ತೆರಿಗೆ ಸಂಗ್ರಹವಾಗಿರುವುದು ಗಮನಾರ್ಹವಾಗಿದೆ.
•ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.