ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರಕ್ಕೆ ಗುತ್ತೇದಾರ ಸೂಚನೆ

Team Udayavani, Jun 12, 2020, 5:12 PM IST

12-June-23

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಆಳಂದ: ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಈ ತಿಂಗಳ 25ರಿಂದ ಆರಂಭಗೊಳ್ಳಲಿರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಶಾಸಕ ಸುಭಾಷ ಗುತ್ತೇದಾರ ಅಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪುರಸಭೆ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಪರೀಕ್ಷಾ ಕೇಂದ್ರಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ ಸ್ಯಾನಿಟೈಸರ್‌ ಮಾಡಿಸಬೇಕು ಎಂದು ಹೇಳಿದರು.

ಪರೀಕ್ಷಾ ಕೇಂದ್ರಕ್ಕೆ ಬರುವಾಗ ವಿದ್ಯಾರ್ಥಿಗಳು ಕಾಯಿಸಿ ಆರಿಸಿದ ನೀರನ್ನು ತರಲು ಮತ್ತು ಪರೀಕ್ಷಾ ಕೇಂದ್ರದಲ್ಲಿ ಆಹಾರ ವಿತರಿಸುವ ವ್ಯವಸ್ಥೆಯನ್ನು ದಾನಿಗಳಿಂದ ಅಥವಾ ಪಾಲಕರಿಂದ ಮಾಡಿಸಲು, ಪರೀಕ್ಷಾ ಅವಧಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಹಕರಿಸುವುದು, ಪರೀಕ್ಷಾ ಕೇಂದ್ರದಲ್ಲಿ ಕಲಂ 144ನೇ ಜಾರಿಗೊಳಿಸುವುದು, ಮಹಾರಾಷ್ಟ್ರದಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಣೆಯಲ್ಲಿ ವ್ಯವಸ್ಥೆ ಮಾಡುವುದು ಸೇರಿದಂತೆ ಪರೀಕ್ಷೆ ಬರೆಯಲಿರುವ ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಕರು ಮೊಬೈಲ್‌ ಮೂಲಕ ಕರೆ ಮಾಡಿ ಆತ್ಮಸ್ಥೈರ್ಯ ತುಂಬಬೇಕು ಎಂದು ಸೂಚಿಸಿದರು.

ಪರೀಕ್ಷಾ ಭಯ ನಿವಾರಿಸುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ ಆರಂಭಿಸಿ ಅದಕ್ಕೆ ಮರೇಪ್ಪ ಬಡಿಗೇರ, ಶರಣಯ್ಯ ಸ್ವಾಮಿ ಅವರನ್ನು ನೇಮಿಸಲಾಯಿತು. ಮಾಸ್ಕ್ ಮತ್ತು ಸ್ಯಾನಿಟೈಸರ್‌ ಸರ್ಕಾರದಿಂದ ಬಂದಿವೆ. ಅಗತ್ಯ ಬಿದ್ದಲ್ಲಿ ದಾನಿಗಳಿಂದ ಪಡೆಯಲು ಸಭೆಯಲ್ಲಿ ಸಲಹೆ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರೀಕ್ಷೆಯಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರವಹಿಸಬೇಕು. ಕೋಣೆಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಿಗಾವಹಿಸಬೇಕು. ಸಾರಿಗೆ ಇಲಾಖೆಯವರು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಬಸ್‌
ಓಡಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ವ್ಯಾಪಕ ಪೊಲೀಸ್‌ ಬಂದೋಬಸ್ತ್ ಒದಗಿಸಬೇಕು ಎಂದು ಸಲಹೆ ನೀಡಲಾಯಿತು.

ಸಹಾಯಕ ಆಯುಕ್ತ ರಾಮಚಂದ್ರ ಗಡದೆ, ತಹಶೀಲ್ದಾರ್‌ ದಯಾನಂದ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಪ್ಪ ನೇರಡಗಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ| ಸಂಜಯರೆಡ್ಡಿ, ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ, ಪುರಸಭೆ ಮುಖ್ಯಾಧಿಕಾರಿ ಬಾಬುರಾವ್‌ ವಿಭೂತೆ, ಟಿಎಚ್‌ಒ ಡಾ| ಅಭಯಕುಮಾರ, ಸಮಾಜ ಕಲ್ಯಾಣಾಧಿಕಾರಿ ವಿಜಯಕುಮಾರ ಫುಲಾರ್‌, ಪರೀಕ್ಷಾ ನೋಡಲ್‌ ಅಧಿಕಾರಿ ಮರೆಪ್ಪ ಎನ್‌. ಬಡಿಗೇರ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.