- Monday 09 Dec 2019
ಕಲಬುರುಗಿಯಲ್ಲಿ ಫೆಬ್ರವರಿ 05ರಿಂದ ಕನ್ನಡದ ಕಂಪು ; ಸಾಹಿತ್ಯ ಸಮ್ಮೇಳನಕ್ಕೆ ದಿನ ನಿಗದಿ
Team Udayavani, Nov 12, 2019, 5:41 PM IST
ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದಿನ ವರ್ಷದ ಫೆಬ್ರವರಿ 05ರಂದು ಕಲಬುರಗಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕಲಬುರಗಿಯಲ್ಲಿ ಕನ್ನಡ ಜಾತ್ರೆಯು ಮೂರು ದಿನಗಳ ಕಾಲ ನಡೆಯಲಿರುವುದು.
ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಾಹಿತಿಗಳ, ಸಂಘಟಕರ ಸಭೆ ನಂತರ ಕನ್ನಡ ಸಾಹಿತ್ಯ ಪರಿತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ.ಮನು ಬಳಿಗಾರ ಸುದ್ದಿಗೋಷ್ಠಿಯಲ್ಲಿ ಸಮ್ಮೇಳನ ದಿನಾಂಕವನ್ನು ಪ್ರಕಟಿಸಿದರು.
ಈ ಸಾಹಿತ್ಯ ಸಮ್ಮೇಳನ ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯಲಿದೆ. ಈ ತಿಂಗಳೊಳಗೆ ಪರಿಷತ್ತಿನ ಕಾರ್ಯಕಾರಿಣಿ ಸಭೆಯನ್ನು ಕರೆದು ಸಮ್ಮೇಳನಾಧ್ಯಕ್ಷರನ್ನು ಆಯ್ಕೆಮಾಡಲಾಗುವುದು ಎಂದು ಬಳಿಗಾರ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರ ಮುಂದಾಳತ್ವದಲ್ಲಿ ಈ ಸಮ್ಮೇಳನ ನಡೆಯಲಿರುವುದು ಹಾಗೂ ಕಾರಜೋಳ ಅವರಿಗೆ ಮುಧೋಳ ಸಾಹಿತ್ಯ ಸಮ್ಮೇಳನದ ಉಸ್ತುವಾರಿ ವಹಿಸಿರುವ ಅನುಭವ ಇರುವುದರಿಂದ ಇನ್ನೆರಡು ತಿಂಗಳೊಳಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಳ್ಳಲಿವೆ ಎಂಬ ವಿಶ್ವಾಸವನ್ನು ಸಾಹಿತ್ಯ ಪರಿಷತ್ ನ ಅಧ್ಯಕ್ಷರು ವ್ಯಕ್ತಪಡಿಸಿದ್ದಾರೆ.
ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕ ಸಮಸ್ಯೆಗಳು ಮತ್ತು ಪರಿಹಾರಗಳು, ದಲಿತ ಬಂಡಾಯ ಸಾಹಿತ್ಯ, ನೈಸರ್ಗಿಕ ವಿಕೋಪ ತಡೆಯುವಿಕೆ ಸೇರಿದಂತೆ ಇನ್ನೂ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಗೋಷ್ಠಿಗಳಿರಲಿವೆ ಎಂದು ಮನು ಬಳಿಗಾರ್ ಅವರು ವಿವರಣೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ ಶರತ್, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕ್ರಣ್ಣ ವಣಿಕ್ಯಾಳ, ಜಿಲ್ಲಾ ಪಂಚಾಯತ ಸಿಇಓ ಡಾ.ಪಿ.ರಾಜಾ, ಕಸಾಪ ಕೇಂದ್ರ ಸಮಿತಿಯ ಸಂಚಾಲಕ ಎನ್.ಕೆ. ನಾರಾಯಣ, ಜಿಲ್ಲಾ ಕಸಾಪ ಅಧ್ಯಕ್ಷ ವೀರಭ್ರ ಸಿಂಪಿ, ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಚೆನ್ನಶೆಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ರಾಜ್ಯದಲ್ಲಿ ಐದು ತಿಂಗಳ ಹಿಂದೆ ನಡೆದ ರಾಜಕೀಯ ಪ್ರಹಸನದ ಅನಂತರ ರಚನೆಯಾದ ಬಿಜೆಪಿ ಸರಕಾರದ ಅಳಿವು-ಉಳಿವು ಹಾಗೂ ಅನರ್ಹಗೊಂಡ 17 ಶಾಸಕರ ಪೈಕಿ ಉಪಚುನಾವಣೆಗೆ...
-
ಬೆಂಗಳೂರು: ವ್ಯಾಪಾರ- ವ್ಯಾಪಾರ (ಬಿ2ಬಿ) ವ್ಯವಹಾರದಲ್ಲಿ ಸರಕು ಸೇವೆ ಪೂರೈಕೆ ಸಂಬಂಧ ಪೂರೈಕೆದಾರರು ರಿಟರ್ನ್ಸ್ನೊಂದಿಗೆ ಖರೀದಿ ವಿವರವನ್ನು ಅಪ್ಲೋಡ್ ಮಾಡಿದರಷ್ಟೇ...
-
ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ಬಳಿಕ ಸರ್ಕಾರವನ್ನು ಭದ್ರಪಡಿಸಿಕೊಳ್ಳುವ ಅತೀವ ಉಮೇದಿನಲ್ಲಿ ಬಿಜೆಪಿ ಪಾಳಯ ಇದ್ದರೆ, ಹಳೇ ದೋಸ್ತಿ ಮುಂದುವರಿಯಬಹುದು ಅನ್ನುವ...
-
ದೇಶದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಣ್ಣ ಮುಂದಿದೆ. ಈ ದೌರ್ಜನ್ಯವೆಂದರೆ ಬರೀ ದೈಹಿಕ ಹಿಂಸೆಯಷ್ಟೇ ಅಲ್ಲ. ಸಮಾಜದಲ್ಲಿ ಮಹಿಳೆಯನ್ನು...
-
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಬೇಡಿಕೆಗೆ ತಕ್ಕಂತೆ ಅನುದಾನ ಒದಗಿಸುವ ಜತೆಗೆ ರಾಜ್ಯದ ಇತರ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ಮೂಲಕ ಮುಂದಿನ ಮೂರೂವರೆ...
ಹೊಸ ಸೇರ್ಪಡೆ
-
ಚಿಕ್ಕಬಳ್ಳಾಪುರ: ಉಪಚುನಾವಣೆಯ ಅಂಚೆ ಮತಎಣಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಹೊಸಕೋಟೆ ಪಕ್ಷೇತರ ಅಭ್ಯರ್ಥಿ...
-
ಇಂದೋರ್: ಐದು ವರ್ಷಗಳಲ್ಲಿ ದೇಶದಲ್ಲಿರುವ 10 ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಗಳಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
-
ಬೆಂಗಳೂರು:ರಾಜ್ಯದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆ ಸೋಮವಾರ ಬೆಳಗ್ಗೆ 8ಗಂಟೆಗೆ ಆರಂಭ. ಯಾರಿಗೆ...
-
ಹೊಸದಿಲ್ಲಿ: ನೆರೆರಾಷ್ಟ್ರಗಳ ಮುಸ್ಲಿಮೇತರರಿಗೆ ಭಾರತದ ಪೌರತ್ವ ನೀಡುವ ಉದ್ದೇಶ ವಿರುವ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಧ್ಯಾಹ್ನ...
-
ಬೆಂಗಳೂರು: ರಾಜ್ಯದಲ್ಲಿ ಐದು ತಿಂಗಳ ಹಿಂದೆ ನಡೆದ ರಾಜಕೀಯ ಪ್ರಹಸನದ ಅನಂತರ ರಚನೆಯಾದ ಬಿಜೆಪಿ ಸರಕಾರದ ಅಳಿವು-ಉಳಿವು ಹಾಗೂ ಅನರ್ಹಗೊಂಡ 17 ಶಾಸಕರ ಪೈಕಿ ಉಪಚುನಾವಣೆಗೆ...